Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:15 - ಕನ್ನಡ ಸತ್ಯವೇದವು C.L. Bible (BSI)

15 ಆದರೆ, ನಾನಿನ್ನೂ ತಾಯಿಯ ಗರ್ಭದಲ್ಲಿ ಇದ್ದಾಗಲೇ ದೇವರು ನನ್ನನ್ನು ತಮ್ಮ ಅನುಗ್ರಹದಿಂದ ಆರಿಸಿಕೊಂಡು ತಮ್ಮ ಸೇವೆಗೆ ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ಕರೆದ ದೇವರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ನಾನು ಹುಟ್ಟುವುದಕ್ಕಿಂತ ಮೊದಲೇ ನನ್ನ ವಿಷಯದಲ್ಲಿ ದೇವರಿಗೆ ವಿಶೇಷವಾದ ಯೋಜನೆಯಿತ್ತು. ಆದ್ದರಿಂದ ದೇವರು ತನ್ನ ಕೃಪೆಯಿಂದ ನನ್ನನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ದೇವರು ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತಮ್ಮ ಕೃಪೆಯ ಮೂಲಕ ನನ್ನನ್ನು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ದೆವಾನ್ ಅಪ್ನಾಚ್ಯಾ ಕುರ್ಪೆನ್ ಮಾಕಾ ಅದ್ದಿಚ್ ಮಿಯಾ ಬಾಯ್ಚ್ಯಾ ಪೊಟಾತ್ ರ್‍ಹಾತಾನಾಚ್ ಮಾಕಾ ಎಚುನ್ ಕಾಡ್ಲ್ಯಾನ್ ಅನಿ ಅಪ್ನಾಚಿ ಸೆವಾ ಕರುಕ್ ಮಾಕಾ ಬಲ್ವುಲ್ಯಾನ್, ಅನಿ ತೆನಿ ನಿರ್ಧಾರ್ ಕರ್‍ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:15
31 ತಿಳಿವುಗಳ ಹೋಲಿಕೆ  

“ನಿನ್ನನ್ನು ತಾಯಿಯ ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆಯೇ ನಿನ್ನನ್ನು ನಾನು ತಿಳಿದಿದ್ದೇ; ನೀನು ಉದರದಿಂದ ಹೊರಬರುವುದಕ್ಕೆ ಮೊದಲೇ ನಿನ್ನನ್ನು ಪವಿತ್ರೀಕರಿಸಿದ್ದೇ; ನಿನ್ನನ್ನು ರಾಷ್ಟ್ರಗಳಿಗೆ ಪ್ರವಾದಿಯನ್ನಾಗಿ ನೇಮಿಸಿದ್ದೇನೆ.”


ಯಕೋಬ್ಯರನ್ನು ತನ್ನ ಬಳಿಗೆ ಕರೆತರಲು ಇಸ್ರಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳಲು ತನ್ನ ದಾಸನನ್ನಾಗಿ ನನ್ನ ರೂಪಿಸಿದನು, ತಾಯ ಗರ್ಭದಲ್ಲಿದ್ದಾಗಲೇ ಮಾಡಿದನಿದನು. ಸನ್ಮಾನ್ಯನು ನಾನು ಸರ್ವೇಶ್ವರನ ದೃಷ್ಟಿಯಲಿ ನನ್ನ ಶಕ್ತಿಸಾಮರ್ಥ್ಯ ಇರುವುದು ಆ ದೇವರಲಿ.


ಕಿವಿಗೊಡಿ ನನ್ನ ದ್ವೀಪನಿವಾಸಿಗಳೇ, ಆಲಿಸಿ ನನ್ನನ್ನು ದೂರದ ಜನಾಂಗಗಳೇ, ಸರ್ವೇಶ್ವರ ಕರೆದನೆನ್ನನ್ನು ಗರ್ಭದಲ್ಲಿದ್ದಾಗಲೇ; ಹೆಸರಿಟ್ಟನೆನಗೆ ನಾನು ತಾಯಿಯ ಉದರದಲ್ಲಿದ್ದಾಗಲೇ.


ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು.


ತಮ್ಮ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರ ಅನ್ಯೋನ್ಯತೆಗೆ ನಿಮ್ಮನ್ನು ಕರೆದಿರುವ ದೇವರು ನಿಜಕ್ಕೂ ವಿಶ್ವಾಸಪಾತ್ರರು.


ದೇವರಿಗೆ ಅತ್ಯಂತ ಪ್ರಿಯರು ಹಾಗು ದೇವಜನರಾಗಲು ಕರೆಹೊಂದಿದವರು ಆದ ರೋಮ್‍ನಗರ ನಿವಾಸಿಗಳೆಲ್ಲರಿಗೆ: ಕ್ರಿಸ್ತಯೇಸುವಿನ ದಾಸನೂ ಪ್ರೇಷಿತನಾಗಲು ಕರೆಹೊಂದಿದವನೂ ದೇವರ ಶುಭಸಂದೇಶವನ್ನು ಸಾರಲು ನೇಮಕಗೊಂಡವನೂ ಆದ ಪೌಲನು ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಹಾಗು ಪ್ರಭುವಾದ ಯೇಸುಕ್ರಿಸ್ತರು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ.


ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ಮೀಸಲಾಗಿಡಿ,” ಎಂದರು.


ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


ಹೀಗೆ ಯಾರನ್ನು ಮೊದಲೇ ನೇಮಿಸಿದ್ದರೋ ಅವರನ್ನು ಕರೆದಿದ್ದಾರೆ. ಯಾರನ್ನು ಕರೆದಿದ್ದಾರೋ ಅವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೆ. ಯಾರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ.


ಇವರ ನಾಮ ಮಹಿಮೆಗೋಸ್ಕರವಾಗಿಯೇ ಸರ್ವಜನಾಂಗಗಳೂ ಇವರನ್ನು ವಿಶ್ವಾಸಿಸಿ, ವಿಧೇಯರಾಗಿ ನಡೆಯುವಂತೆ ಮಾಡಲು ಪ್ರೇಷಿತನಾಗುವ ಸೌಭಾಗ್ಯ ನನ್ನದಾಯಿತು. ಆ ಯೇಸುಕ್ರಿಸ್ತರ ಮುಖಾಂತರವೇ ದೇವರು ಈ ಭಾಗ್ಯವನ್ನು ನನಗೆ ಅನುಗ್ರಹಿಸಿದರು.


ಹೌದು, ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ಸರ್ವೇಶ್ವರನ ದಯೆ ನಿಮ್ಮನ್ನು ಸ್ವಕೀಯ ಜನರನ್ನಾಗಿ ಆರಿಸಿಕೊಂಡ ಮೇಲೆ, ಅವರು ತಮ್ಮ ಮಹೋನ್ನತ ನಾಮದ ನಿಮಿತ್ತ, ನಿಮ್ಮನ್ನು ಖಂಡಿತವಾಗಿ ಕೈಬಿಡುವುದಿಲ್ಲ.


ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ತಮ್ಮ ಪೂರ್ವಸಂಕಲ್ಪದಂತೆಯೇ ಇದನ್ನು ದೇವರು ನಮ್ಮ ಪ್ರಭುವಾದ ಯೇಸುಕ್ರಿಸ್ತರಲ್ಲಿ ಕಾರ್ಯಗತಗೊಳಿಸಿದರು.


ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು.


ಕ್ರಿಸ್ತಯೇಸುವಿನ ಅನುಗ್ರಹದಿಂದ ನಿಮ್ಮನ್ನು ಕರೆದ ದೇವರನ್ನು ನೀವಿಷ್ಟು ಬೇಗನೆ ತ್ಯಜಿಸಿ, ಬೇರೊಂದು ‘ಶುಭಸಂದೇಶ’ವನ್ನು ಅಂಗೀಕರಿಸುತ್ತಿರುವಿರೆಂದು ಕೇಳಿ ನನಗೆ ಆಶ್ಚರ್ಯವಾಗುತ್ತಿದೆ.


ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ಆದರೆ ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಞಾನವಾಗಿದ್ದಾರೆ.


ಕ್ರಿಸ್ತಯೇಸುವಿನಲ್ಲಿ ಪುನೀತರಾಗಿ ದೇವಜನರಾಗಲು ಕರೆಹೊಂದಿರುವ ಕೊರಿಂಥದ ಶ್ರೀಸಭೆಯವರಿಗೂ ಹಾಗೂ ಪ್ರಭು ಯೇಸುಕ್ರಿಸ್ತರನ್ನು ಎಲ್ಲೆಡೆಯೂ ನಾಮಸ್ಮರಣೆ ಮಾಡುವ ಸರ್ವಜನರಿಗೂ - ದೇವರ‍ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಲು ಕರೆಹೊಂದಿದ ಪೌಲನಾದ ನಾನು ಸಹೋದರ ಸೊಸ್ಥೆನನೊಂದಿಗೆ ಸೇರಿ ಬರೆಯುವ ಪತ್ರ.


ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ಯೆಹೂದ್ಯ ಜನಾಂಗದಿಂದ ಮಾತ್ರವಲ್ಲ, ಇತರ ಜನಾಂಗದಿಂದಲೂ ಕರೆಯಲಾಗಿರುವ ನಾವೇ ಈ ಕರುಣೆಯ ಕುಡಿಕೆಗಳು.


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು


ಗಲಾತ್ಯದಲ್ಲಿರುವ ಸಭೆಗಳಿಗೆ, ಪ್ರೇಷಿತನಾದ ಪೌಲನು ಎಲ್ಲಾ ಸಹೋದರರೊಡನೆ ಸೇರಿ ಬರೆಯುವ ಪತ್ರ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು