Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:19 - ಕನ್ನಡ ಸತ್ಯವೇದವು C.L. Bible (BSI)

19 ಆಗ, ಉಳಿದ ಪ್ರೇಷಿತರಲ್ಲಿ ಪ್ರಭುವಿನ ಸಹೋದರ ಯಕೋಬನಲ್ಲದೆ ಬೇರೆ ಯಾವ ಪ್ರೇಷಿತರನ್ನೂ ನಾನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕರ್ತನ ತಮ್ಮನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪ್ರಭುವಿನ (ಯೇಸು) ಸಹೋದರನಾದ ಯಾಕೋಬನನ್ನು ಹೊರತು ಬೇರೆ ಯಾವ ಅಪೊಸ್ತಲರನ್ನೂ ನಾನು ಭೇಟಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ಕರ್ತ ಯೇಸುವಿನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಥೈ ಧನಿಯಾಚೊ ಭಾವ್ ಜಾಕೊಬಾಕ್ ಸೊಡುನ್ ದುಸ್ರೊ ಖಲೊಬಿ ಅಪೊಸ್ತಲ್ ಮಾಕಾ ಬಗುಕ್ ಗಾವುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:19
12 ತಿಳಿವುಗಳ ಹೋಲಿಕೆ  

ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ?


ಇವನು ಆ ಬಡಗಿಯಲ್ಲವೆ? ಮರಿಯಳ ಮಗನಲ್ಲವೆ? ಯಕೋಬ, ಯೋಸೆ, ಯೂದ ಮತ್ತು ಸಿಮೋನ ಇವರ ಸಹೋದರನಲ್ಲವೆ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೆ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರಮಾಡಿದರು.


ಯೇಸುಸ್ವಾಮಿ ತಮ್ಮನ್ನು ಸುತ್ತುವರಿದಿದ್ದ ಜನರಿಗೆ ಇನ್ನೂ ಬೋಧನೆ ಮಾಡುತ್ತಿದ್ದರು. ಆಗ ಅವರ ತಾಯಿ ಮತ್ತು ಸಹೋದರರು ಬಂದು ಅವರೊಡನೆ ಮಾತನಾಡಬಯಸಿ ಹೊರಗೆ ನಿಂತಿದ್ದರು.


ಮಿಕ್ಕ ಪ್ರೇಷಿತರಂತೆ, ಪ್ರಭುವಿನ ಸಹೋದರರಂತೆ, ಕೇಫನಂತೆ ನಾನು ಸಹ ಕ್ರೈಸ್ತವಿಶ್ವಾಸಿಯೊಬ್ಬಳನ್ನು ಮದುವೆಮಾಡಿಕೊಂಡು ಆಕೆಯೊಡನೆ ಪ್ರಯಾಣ ಕೈಗೊಳ್ಳಲು ನನಗೆ ಹಕ್ಕಿಲ್ಲವೇ?


ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ;


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.


ಪೇತ್ರನು ನಿಶ್ಯಬ್ದರಾಗಿರುವಂತೆ ಅವರಿಗೆ ಕೈಸನ್ನೆ ಮಾಡಿದನು. ಪ್ರಭು ತನ್ನನ್ನು ಹೇಗೆ ಸೆರೆಮನೆಯಿಂದ ಹೊರಗೆ ಕರೆತಂದರೆಂದು ವಿವರಿಸಿದನು. ಈ ವಿಷಯವನ್ನು ಯಕೋಬನಿಗೂ ಇತರ ಸಹೋದರರಿಗೂ ತಿಳಿಸಲು ಹೇಳಿ ಅಲ್ಲಿಂದ ಹೊರಟು ಬೇರೆ ಸ್ಥಳಕ್ಕೆ ಹೋದನು.


ಮತ್ತಾಯ ಮತ್ತು ತೋಮ, ಅಲ್ಫಾಯನ ಮಗ ಯಕೋಬ ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ,


ಅಂದ್ರೆಯ, ಫಿಲಿಪ್ಪ, ಬಾರ್ತಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗ ಯಕೋಬ, ತದ್ದಾಯ, ದೇಶಾಭಿಮಾನಿ ಆದ ಸಿಮೋನ ಮತ್ತು


ಅವರು ಯಾರಾರೆಂದರೆ: ಪೇತ್ರ, ಯೊವಾನ್ನ, ಯಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಕೋಬ, ದೇಶಾಭಿಮಾನಿ ಆದ ಸಿಮೋನ ಮತ್ತು ಯಕೋಬನ ಮಗ ಯೂದ. ಇವರೆಲ್ಲರು ಪಟ್ಟಣವನ್ನು ಸೇರಿದ್ದೇ, ಮೇಲ್ಮಾಳಿಗೆಯಲ್ಲಿದ್ದ ತಮ್ಮ ಕೊಠಡಿಗೆ ಹೋದರು.


ಯೇಸುವಿಗೆ, “ನಿಮ್ಮ ತಾಯಿಯು ಮತ್ತು ಸಹೋದರರು ನಿಮ್ಮನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ,” ಎಂದು ತಿಳಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು