Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:21 - ಕನ್ನಡ ಸತ್ಯವೇದವು C.L. Bible (BSI)

21 ಅನಂತರ ನಾನು ಸಿರಿಯ ಮತ್ತು ಸಿಲಿಸಿಯ ಪ್ರಾಂತ್ಯಗಳಿಗೆ ಹೋದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ತರುವಾಯ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಮೇಲೆ ಸಿರಿಯಾ ಮತ್ತು ಕಿಲಿಕ್ಯ ಪ್ರಾಂತಗಳಿಗೆ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆಚ್ಯಾ ಮಾನಾ ಮಿಯಾ ಸಿರಿಯಾ ದೆಶಾಚ್ಯಾ ಪ್ರಾಂತ್ಯಾಕ್ನಿ ಅನಿ ಸಿಲಿಸಿಯಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:21
12 ತಿಳಿವುಗಳ ಹೋಲಿಕೆ  

ಅವನು ಸಿರಿಯ ಮತ್ತು ಸಿಲಿಸಿಯಗಳನ್ನು ಹಾದುಹೋಗುತ್ತಾ, ಅಲ್ಲಿದ್ದ ಕ್ರೈಸ್ತಸಭೆಗಳನ್ನು ದೃಢಪಡಿಸುತ್ತಾ ಪ್ರಯಾಣ ಬೆಳೆಸಿದನು.


ಇದನ್ನು ಅರಿತುಕೊಂಡ ಭಕ್ತಾದಿಗಳು ಅವನನ್ನು ಸೆಜರೇಯಕ್ಕೆ ಕರೆತಂದು ಅಲ್ಲಿಂದ ತಾರ್ಸಕ್ಕೆ ಕಳುಹಿಸಿಬಿಟ್ಟರು.


ಆದರೆ ಕೆಲವರು ಸ್ತೇಫನನ ವಿರೋಧಿಗಳಾಗಿದ್ದರು. ಇವರು ‘ಬಿಡುಗಡೆ ಹೊಂದಿದವರು’ ಎಂಬವರ ಪ್ರಾರ್ಥನಾ ಮಂದಿರಕ್ಕೆ ಸೇರಿದವರು. ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರೂ ಇದರ ಸದಸ್ಯರಾಗಿದ್ದರು. ಇವರೊಡನೆ ಸಿಲಿಸಿಯ ಹಾಗೂ ಏಷ್ಯಾದ ಯೆಹೂದ್ಯರೂ ಸೇರಿ ಸ್ತೇಫನನೊಂದಿಗೆ ತರ್ಕ ಮಾಡತೊಡಗಿದರು.


“ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು!


ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯ ಸ್ನೇಹಿತ ಮೆನಹೇನ ಮತ್ತು ಸೌಲ.


ರಾಜ್ಯಪಾಲನು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದ ನಿವಾಸಿ ಎಂದು ವಿಚಾರಿಸಿ ಅವನು ಸಿಲಿಸಿಯದಿಂದ ಬಂದವನೆಂದು ತಿಳಿದುಕೊಂಡನು.


“ನಾನೊಬ್ಬ ಯೆಹೂದ್ಯನು, ಸಿಲಿಸಿಯದ ತಾರ್ಸ ಎಂಬಲ್ಲಿ ಹುಟ್ಟಿದವನು. ಆದರೆ, ಇದೇ ಜೆರುಸಲೇಮಿನಲ್ಲಿ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪೂರ್ವಜರ ಧರ್ಮಶಾಸ್ತ್ರವನ್ನು ಕಟ್ಟುನಿಟ್ಟಾಗಿ ಕಲಿತವನು. ಇಲ್ಲಿ ಇಂದು ನೆರೆದಿರುವ ನೀವೆಲ್ಲರೂ ದೈವಾಭಿಮಾನಿಗಳಾಗಿರುವಂತೆಯೇ ನಾನು ದೈವಾಭಿಮಾನಿಯಾಗಿದ್ದೆ.


ಪೌಲನು ಪ್ರತ್ಯುತ್ತರವಾಗಿ, “ನಾನು ಯೆಹೂದ್ಯನು, ತಾರ್ಸದವನು, ಸಿಲಿಸಿಯ ಪ್ರಾಂತ್ಯದ ಪ್ರಖ್ಯಾತ ಪಟ್ಟಣದವನು. ಈ ಜನರೊಡನೆ ಮಾತನಾಡಲು ದಯವಿಟ್ಟು ಅವಕಾಶಕೊಡಿ,” ಎಂದು ಭಿನ್ನವಿಸಿದನು.


ಸೈಪ್ರಸನ್ನು ಸಮೀಪಿಸಿದಾಗ ಅದನ್ನು ಎಡಕ್ಕೆ ಬಿಟ್ಟು ಸಿರಿಯ ದೇಶದ ಕಡೆಗೆ ಸಾಗಿ, ಟೈರ್ ಎಂಬಲ್ಲಿ ಬಂದು ಇಳಿದೆವು. ಇಲ್ಲಿ ಹಡಗಿನ ಸರಕನ್ನು ಇಳಿಸಬೇಕಾಗಿತ್ತು.


ಇದಾದ ಮೇಲೆ ಪೌಲನು ಕೊರಿಂಥದಲ್ಲಿ ಅನೇಕ ದಿನ ಇದ್ದನು. ಅನಂತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾಡಿದ್ದ ಹರಕೆಯ ಪ್ರಕಾರ ಕೆಂಖ್ರೆಯೆಂಬ ಸ್ಥಳದಲ್ಲಿ ಮುಂಡನ ಮಾಡಿಸಿಕೊಂಡನು.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು