Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:23 - ಕನ್ನಡ ಸತ್ಯವೇದವು C.L. Bible (BSI)

23 ‘ಹಿಂದೊಮ್ಮೆ ನಮ್ಮನ್ನು ಹಿಂಸಿಸುತ್ತಿದ್ದವನು, ತಾನು ನಾಶಮಾಡಲೆತ್ನಿಸಿದ ವಿಶ್ವಾಸವನ್ನೇ ಈಗ ಪ್ರಚಾರಮಾಡುತ್ತಿದ್ದಾನೆ’, ಎಂಬ ಸುದ್ದಿಯನ್ನು ಮಾತ್ರ ಕೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು, ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಸಾರುತ್ತಿದ್ದಾನೆ” ಎಂಬ ಸುದ್ದಿಯನ್ನು ಅವರು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು ತಾನು ಹಾಳುಮಾಡುತ್ತಿದ್ದ ಮತವನ್ನು ಈಗ ಪ್ರಸಿದ್ಧಿಪಡಿಸುತ್ತಾನೆಂಬ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಈ ಮನುಷ್ಯನು ನಮ್ಮನ್ನು ಹಿಂಸಿಸುತ್ತಿದ್ದನು. ಆದರೆ ಈಗ ಇವನು ತಾನು ಮೊದಲೊಮ್ಮೆ ನಾಶಮಾಡಲು ಪ್ರಯತ್ನಿಸಿದ ನಂಬಿಕೆಯ ಬಗ್ಗೆ ಜನರಿಗೆ ಹೇಳುತ್ತಿದ್ದಾನೆ” ಎಂಬುದನ್ನು ಮಾತ್ರ ಅವರು ಕೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಅವರು, “ಹಿಂದೊಮ್ಮೆ ನಮ್ಮನ್ನು ಹಿಂಸಿಸುತ್ತಿದ್ದ ಇವನು, ತಾನು ನಾಶಮಾಡಲು ಪ್ರಯತ್ನಿಸಿದ್ದ ವಿಶ್ವಾಸವನ್ನೇ ಈಗ ಪ್ರಸಂಗಿಸುತ್ತಿದ್ದಾನೆ,” ಎಂಬುದನ್ನು ಮಾತ್ರ ಕೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ , “ಅಮ್ಕಾ ತರಾಸ್ ದಿತಲೊ ಮಾನುಸ್, ಎಕ್ ಎಳಾರ್ ನಾಸ್ ಕರುಚೆ ಮನುನ್ ಘೆವ್ನ್ ಹೊತ್ತ್ಯಾ ವಿಶ್ವಾಸಾಚ್ಯಾ ವಿಶಯಾತುಚ್ ಪರ್‍ಚಾರ್ ಕರುಕ್ ಲಾಗ್ಲಾ ಮನ್ತಲೆ ತೆನಿ ಆಯಿಕಲ್ಲ್ಯಾನಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:23
9 ತಿಳಿವುಗಳ ಹೋಲಿಕೆ  

ಅನನೀಯ ಪ್ರತ್ಯುತ್ತರವಾಗಿ, “ಪ್ರಭೂ, ಈ ಮನುಷ್ಯ ಜೆರುಸಲೇಮಿನಲ್ಲಿ ತಮ್ಮ ಭಕ್ತರಿಗೆ ಎಷ್ಟು ಕೇಡುಮಾಡಿದ್ದಾನೆಂಬುದನ್ನು ಅನೇಕರ ಬಾಯಿಂದ ಕೇಳಿದ್ದೇನೆ.


ಅನಂತರ ಸೌಲನು ತಡಮಾಡದೆ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಯೇಸುವೇ ‘ದೇವರ ಪುತ್ರ’ ಎಂದು ಬೋಧಿಸಲು ಆರಂಭಿಸಿದನು.


ಸೌಲನು ಜೆರುಸಲೇಮಿಗೆ ಬಂದು ಭಕ್ತವಿಶ್ವಾಸಿಗಳನ್ನು ಸೇರಲು ಪ್ರಯತ್ನಿಸಿದನು. ಆದರೆ, ಅವರು ಅವನು ಸಹ ಒಬ್ಬ ಭಕ್ತನೆಂದು ನಂಬದೆ ಅವನಿಗೆ ಭಯಪಟ್ಟರು.


ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.


ಅವನ ಬೋಧನೆಯನ್ನು ಕೇಳಿದವರೆಲ್ಲರೂ ಚಕಿತರಾದರು. “ಜೆರುಸಲೇಮಿನಲ್ಲಿ ಯೇಸುವಿನ ನಾಮಸ್ಮರಣೆ ಮಾಡುತ್ತಿದ್ದವರನ್ನು ಬಲಿಹಾಕುತ್ತಿದ್ದವನು ಇವನೇ ಅಲ್ಲವೇ? ಅಂಥವರನ್ನು ಬಂಧಿಸಿ ಮುಖ್ಯಯಾಜಕರ ಬಳಿಗೆ ಎಳೆದೊಯ್ಯುವ ಉದ್ದೇಶದಿಂದಲೇ ಅಲ್ಲವೆ ಇವನು ಇಲ್ಲಿಗೆ ಬಂದಿರುವುದು?” ಎಂದು ಪ್ರಶ್ನಿಸತೊಡಗಿದರು.


“ದೆವ್ವಬಿಡಿಸುವವರು” ಎನಿಸಿಕೊಂಡು ಊರೂರು ಸುತ್ತುತ್ತಿದ್ದ ಕೆಲವು ಯೆಹೂದ್ಯರು ಸಹ ಪ್ರಭು ಯೇಸುವಿನ ನಾಮವನ್ನು ಬಳಸಿ ದೆವ್ವಬಿಡಿಸಲು ಯತ್ನಿಸಿದರು. ಇವರು ದೆವ್ವಗಳಿಗೆ, “ಪೌಲನು ಸಾರುತ್ತಿರುವ ಯೇಸುವಿನ ನಾಮದಲ್ಲಿ ನಿಮಗೆ ಆಣೆಯಿಟ್ಟು ಆಜ್ಞಾಪಿಸುತ್ತೇವೆ,” ಎಂದು ಹೇಳುತ್ತಿದ್ದರು.


ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು