Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:24 - ಕನ್ನಡ ಸತ್ಯವೇದವು C.L. Bible (BSI)

24 ಈ ಕಾರಣ ನನ್ನನ್ನು ಕುರಿತು ಅವರು ದೇವರನ್ನು ಕೊಂಡಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನನ್ನ ಕುರಿತಾಗಿ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಸುದ್ದಿಯನ್ನು ಮಾತ್ರ ಅವರು ಕೇಳಿ ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವರು ನನ್ನ ನಿಮಿತ್ತ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವರು ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತಸೆ ಮನುನ್ ಮಾಜ್ಯಾಸಾಟ್ನಿ ದೆವಾಕ್ ತೆನಿ ಹೊಗ್ಳಾಪ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:24
13 ತಿಳಿವುಗಳ ಹೋಲಿಕೆ  

ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು.


ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”


“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.


ಹೀಗೆ ನಿಮ್ಮ ಮುಖಾಂತರ ಪ್ರಭು ಯೇಸುವಿನ ನಾಮಕ್ಕೂ ಮತ್ತು ಅವರಲ್ಲಿ ನಿಮಗೂ ಮಹಿಮೆಯುಂಟಾಗಲಿ. ನಮ್ಮ ದೇವರ ಹಾಗು ಪ್ರಭು ಯೇಸುಕ್ರಿಸ್ತರ ಅನುಗ್ರಹದಿಂದ ಇದು ನೆರವೇರಲಿ.


ಪ್ರಭು ತಮ್ಮ ಸದ್ಭಕ್ತರೆಲ್ಲರಿಂದ ಸನ್ಮಾನವನ್ನೂ ವಿಶ್ವಾಸಿಗಳೆಲ್ಲರಿಂದ ಗೌರವವನ್ನೂ ಪಡೆಯುವ ಆ ದಿನದಲ್ಲಿ ಇದೆಲ್ಲಾ ಸಂಭವಿಸುವುದು. ನಾವು ನಿಮಗಿತ್ತ ಸಾಕ್ಷಿಯನ್ನು ನಂಬಿದ ನೀವೆಲ್ಲರೂ ಅವರೊಂದಿಗಿರುವಿರಿ.


ಕ್ರಿಸ್ತಯೇಸುವಿನ ಶುಭಸಂದೇಶದ ಅಂಗೀಕಾರದಿಂದ ನೀವು ಎಷ್ಟು ನಿಷ್ಠಾವಂತ ಸೇವಾಸಕ್ತರಾಗಿದ್ದೀರಿ, ತಮಗೂ ಇತರರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂದು ತಿಳಿದು ಅನೇಕರು ದೇವರನ್ನು ಕೊಂಡಾಡುವರು.


ಎಲ್ಲರೂ ಭಯಭ್ರಾಂತರಾದರು. “ಮಹಾಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ; ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ,” ಎಂದು ದೇವರನ್ನು ಕೊಂಡಾಡಿದರು.


ಯಕೋಬ್ಯರಿಗೆ ವಿರುದ್ಧವಾದ ಶಕುನವಿಲ್ಲ ಇಸ್ರಯೇಲರಿಗೆ ವಿರುದ್ಧವಾದ ತಂತ್ರಮಂತ್ರವಿಲ್ಲ. ತಾನು ಮಾಡುವುದನ್ನು ತತ್ಕಾಲದಲ್ಲೇ ದೇವ ತಿಳಿಸುತ್ತಾನೆ ಯಕೋಬ್ಯರಿಗೆ ಅದನ್ನು ಸೂಚಿಸುತ್ತಾನೆ ಸಮಯೋಚಿತವಾಗಿ ಆ ಇಸ್ರಯೇಲರಿಗೆ.


ಎಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದುನಿಂತನು; ತನ್ನ ಹಾಸಿಗೆಯನ್ನು ತಾನೇ ಎತ್ತಿಕೊಂಡು ಹೊರಟುಹೋದನು. ನೆರೆದಿದ್ದ ಎಲ್ಲರೂ ಆಶ್ಚರ್ಯಚಕಿತರಾಗಿ, “ಇಂಥ ಕಾರ್ಯವನ್ನು ನಾವು ನೋಡಿದ್ದೇ ಇಲ್ಲ!", ಎಂದು ದೇವರನ್ನು ಕೊಂಡಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು