ಗಲಾತ್ಯದವರಿಗೆ 1:6 - ಕನ್ನಡ ಸತ್ಯವೇದವು C.L. Bible (BSI)
6 ಕ್ರಿಸ್ತಯೇಸುವಿನ ಅನುಗ್ರಹದಿಂದ ನಿಮ್ಮನ್ನು ಕರೆದ ದೇವರನ್ನು ನೀವಿಷ್ಟು ಬೇಗನೆ ತ್ಯಜಿಸಿ, ಬೇರೊಂದು ‘ಶುಭಸಂದೇಶ’ವನ್ನು ಅಂಗೀಕರಿಸುತ್ತಿರುವಿರೆಂದು ಕೇಳಿ ನನಗೆ ಆಶ್ಚರ್ಯವಾಗುತ್ತಿದೆ.
6 ಸ್ವಲ್ಪಕಾಲದ ಹಿಂದೆ ತನ್ನನ್ನು ಹಿಂಬಾಲಿಸುವುದಕ್ಕಾಗಿ ನಿಮ್ಮನ್ನು ಕರೆದಾತನು ದೇವರೇ. ಆತನು ನಿಮ್ಮನ್ನು ಯೇಸು ಕ್ರಿಸ್ತನ ಮೂಲಕವಾಗಿ ಬಂದ ತನ್ನ ಕೃಪೆಯ ಮೂಲಕ ಕರೆದನು. ಆದರೆ ಈಗ ನಾನು ನಿಮ್ಮೆಲ್ಲರ ವಿಷಯದಲ್ಲಿ ಆಶ್ಚರ್ಯಗೊಂಡಿದ್ದೇನೆ. ನೀವು ಈಗಾಗಲೇ ವಿಮುಖರಾಗಿ ಬೇರೊಂದು ಸುವಾರ್ತೆಯನ್ನು ನಂಬಿಕೊಂಡಿದ್ದೀರಿ.
ಏಕೆಂದರೆ, ಯಾರಾದರೂ ಬಂದು, ನಾವು ಬೋಧಿಸದೆ ಇರುವ ಬೇರೊಬ್ಬ ಯೇಸುವನ್ನು ಬೋಧಿಸಿದರೆ ನೀವು ಸ್ವೀಕರಿಸುತ್ತೀರಿ. ನೀವು ಹೊಂದಿರುವ ಪವಿತ್ರಾತ್ಮರಿಗೆ ಬದಲಾಗಿ ಬೇರೊಬ್ಬ ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನಿಮಗೆ ಈಗಾಗಲೇ ದೊರಕಿರುವ ಶುಭಸಂದೇಶವಲ್ಲದೆ ಬೇರೊಂದು ಸಂದೇಶವನ್ನು ನಿಮಗೆ ಸಾರಿದರೆ, ನೀವು ಒಮ್ಮೆಗೇ ಒಪ್ಪಿಕೊಳ್ಳುತ್ತೀರಿ. ಇದು ನಿಜಕ್ಕೂ ಆಶ್ಚರ್ಯವೇ ಸರಿ.
ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.
ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.
ವಿಶ್ವಾಸದ ಮೂಲಕ ನಾವು ದೈವಾನುಗ್ರಹವನ್ನು ಸವಿಯುವಂತೆ ಯೇಸುಕ್ರಿಸ್ತರು ದಾರಿ ತೋರಿಸಿದರು. ನಾವೀಗ ನೆಲೆಗೊಂಡಿರುವುದು ಆ ಅನುಗ್ರಹದಲ್ಲಿಯೇ. ಆದ್ದರಿಂದಲೇ, ದೇವರ ಮಹಿಮೆಯಲ್ಲಿ ನಾವೂ ಪಾಲುಗೊಳ್ಳುತ್ತೇವೆಂಬ ಭರವಸೆಯಿಂದ ಹೆಮ್ಮೆಪಡುತ್ತೇವೆ.
ತಮ್ಮ ಸ್ವಂತ ಮಹಿಮೆಯಲ್ಲೂ ಸೌಭಾಗ್ಯದಲ್ಲೂ ಭಾಗಿಗಳಾಗಲು ದೇವರು ನಮ್ಮನ್ನು ಕರೆದಿದ್ದಾರೆ. ಅವರನ್ನು ಅರಿತುಕೊಳ್ಳುವುದರ ಮೂಲಕ ನಾವು ಭಕ್ತಿಯುತ ಜೀವನವನ್ನು ನಡೆಸಲು ಬೇಕಾದುದೆಲ್ಲವನ್ನೂ ಆ ಯೇಸುವಿನ ದಿವ್ಯಶಕ್ತಿಯಿಂದ ಪಡೆದಿದ್ದೇವೆ.
ಹೀಗೆ ಯಾರನ್ನು ಮೊದಲೇ ನೇಮಿಸಿದ್ದರೋ ಅವರನ್ನು ಕರೆದಿದ್ದಾರೆ. ಯಾರನ್ನು ಕರೆದಿದ್ದಾರೋ ಅವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೆ. ಯಾರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ.
ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.
ದೇವಪ್ರೇರಣೆಗೆ ಅನುಸಾರವಾಗಿಯೇ ಅಲ್ಲಿಗೆ ಹೋದೆ. ಅನ್ಯಧರ್ಮೀಯರಿಗೆ ನಾನು ಸಾರುತ್ತಿದ್ದ ಸಂದೇಶ ಏನೆಂಬುದನ್ನು ಅಲ್ಲಿದ್ದ ಕೆಲವು ಗಣ್ಯವ್ಯಕ್ತಿಗಳಿಗೆ ಪ್ರತ್ಯೇಕವಾಗಿ ತಿಳಿಸಿದೆ. ಅದುವರೆಗೆ ನಾನು ಪಟ್ಟ ಶ್ರಮವಾಗಲಿ ಈಗ ಪಡುತ್ತಿರುವ ಶ್ರಮವಾಗಲಿ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಹೀಗೆ ಮಾಡಿದೆ.
ಬದಲಾಗಿ, ಯೆಹೂದ್ಯರಿಗೆ ಶುಭಸಂದೇಶವನ್ನು ಸಾರುವ ಸೇವೆಯನ್ನು ಪೇತ್ರನಿಗೆ ವಹಿಸಿಕೊಟ್ಟಂತೆಯೇ ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರುವ ಸೇವಾಕಾರ್ಯವನ್ನು ದೇವರು ನನಗೆ ವಹಿಸಿಕೊಟ್ಟಿದ್ದಾರೆ ಎಂಬುದನ್ನು ಆ ಗಣ್ಯವ್ಯಕ್ತಿಗಳು ಒಪ್ಪಿಕೊಂಡರು.
ಅವರ ಈ ನಡತೆ, ಶುಭಸಂದೇಶದ ಸತ್ಯಕ್ಕೆ ಅನುಗುಣವಾದುದಲ್ಲ ಎಂದು ನನಗೆ ಮನದಟ್ಟಾಯಿತು. ಆಗ ನಾನು ಅವರೆಲ್ಲರ ಸಮ್ಮುಖದಲ್ಲೇ ಕೇಫನಿಗೆ: “ನೀನು ಯೆಹೂದ್ಯನಾಗಿದ್ದೂ ಯೆಹೂದ್ಯರಂತೆ ನಡೆಯದೆ ಅನ್ಯಧರ್ಮೀಯರಂತೆ ನಡೆದುಕೊಳ್ಳುತ್ತ ಇದ್ದಿಯಲ್ಲವೇ? ಹೀಗಿರುವಲ್ಲಿ ಅನ್ಯಧರ್ಮೀಯರು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ನೀನು ಒತ್ತಾಯಪಡಿಸುವುದಾದರೂ ಹೇಗೆ?” ಎಂದು ಕೇಳಿದೆ.