Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:8 - ಕನ್ನಡ ಸತ್ಯವೇದವು C.L. Bible (BSI)

8 ನಾವು ನಿಮಗೆ ಬೋಧಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ನಾವೇ ಆಗಲಿ, ಸ್ವರ್ಗದಿಂದ ಇಳಿದ ದೇವದೂತನೇ ಆಗಲಿ, ಯಾರೇ ಆಗಲಿ ಬೋಧಿಸಿದರೆ ಅವನು ಶಾಪಗ್ರಸ್ತನಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು ನಾವೇ ಆಗಲಿ ಪರಲೋಕದಿಂದ ಬಂದ ದೇವದೂತನೇ ಆಗಲಿ ನಿಮಗೆ ಸಾರಿದರೆ ಶಾಪಗ್ರಸ್ತನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾವು ನಿಮಗೆ ಸತ್ಯಸುವಾರ್ತೆಯನ್ನು ತಿಳಿಸಿದೆವು. ಆದ್ದರಿಂದ ನಾವೇ ಆಗಲಿ, ಪರಲೋಕದ ದೇವದೂತರೇ ಆಗಲಿ ಮತ್ತೊಂದು ಸುವಾರ್ತೆಯನ್ನು ತಿಳಿಸಿದರೆ ಶಾಪಗ್ರಸ್ತರಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೊಂದನ್ನು ನಾವೇ ಆಗಲಿ, ಪರಲೋಕದೊಳಗಿಂದ ಬಂದ ದೇವದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ಅಮಿಚ್ ಹೊಂವ್ದಿತ್, ನಾಹೊಲ್ಯಾರ್ ಸರ್‍ಗಾ ವೈನಾ ಯೆಲ್ಲ್ಯಾ ದೆವ್ ದುತಾನ್ ಹೊಂವ್ದಿತ್, ಅಮಿ ತುಮ್ಕಾ ಸಾಂಗಲ್ಲಿ ಬರಿ ಖಬರ್ ಸೊಡುನ್, ಕೊನ್‍ಬಿ ದುಸ್ರಿ ಎಕ್ ಖಬರ್ ಸಾಂಗ್ತಾತ್ ಹೊಲ್ಯಾರ್ ತೆಚ್ಯಾ ವೈರ್ ಸರಾಪ್ ಪಡುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:8
23 ತಿಳಿವುಗಳ ಹೋಲಿಕೆ  

ನೀವು ಅಂಗೀಕರಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ಸಾರುವವನು ಶಾಪಗ್ರಸ್ತನಾಗಲಿ ಎಂದು ನಾನು ಮೊದಲೇ ಹೇಳಿದಂತೆ, ಮತ್ತೊಮ್ಮೆ ಒತ್ತಿ ಹೇಳುತ್ತೇನೆ.


ಯಾರಾದರೂ ಪ್ರಭುವನ್ನು ಪ್ರೀತಿಸದೆಹೋದರೆ ಅವರಿಗೆ ಧಿಕ್ಕಾರ! “ಮಾರನಥ" - ಪ್ರಭುವೇ ಬನ್ನಿ.


ಸ್ವದೇಶಿಯರೂ ರಕ್ತಸಂಬಂಧಿಕರೂ ಆದ ನನ್ನ ಸಹೋದರರ ಪರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕೃತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಇವರದು ಬರೀ ಕಾಮುಕ ಕಣ್ಣು; ಇವರು ಎಂದಿಗೂ ಇಂಗದ ಪಾಪಬಯಕೆಯುಳ್ಳವರು; ದುರ್ಬಲರನ್ನು ವಂಚಿಸಿ ವಶಪಡಿಸಿಕೊಳ್ಳುವುದೇ ಇವರ ಹವ್ಯಾಸ; ಲೋಭದಲ್ಲೇ ಪಳಗಿದ ಮನಸ್ಸುಳ್ಳವರು ಹಾಗೂ ಶಾಪಗ್ರಸ್ತ ಸಂತಾನದವರು ಇವರು!


ಇವರು ಮುಖ್ಯಯಾಜಕರ ಮತ್ತು ಪ್ರಮುಖರ ಬಳಿಗೆ ಹೋಗಿ ಇಂತೆಂದರು: “ನಾವು ಪೌಲನನ್ನು ಕೊಲ್ಲುವ ತನಕ ಏನನ್ನೂ ತಿನ್ನುವುದಿಲ್ಲವೆಂದು ಕಠಿಣ ಶಪಥಮಾಡಿಕೊಂಡಿದ್ದೇವೆ.


ಕ್ರೈಸ್ತಸಭೆಯಲ್ಲಿ ಭೇದಭಾವ ಹುಟ್ಟಿಸುವವನಿಗೆ ಒಂದೆರಡು ಸಾರಿ ಬುದ್ಧಿಹೇಳು. ಅನಂತರ ಅವನಷ್ಟಕ್ಕೇ ಬಿಟ್ಟುಬಿಡು.


ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


ಇಷ್ಟುಮಾತ್ರ ನಿಮಗೆ ಸ್ಪಷ್ಟವಾಗಿ ತಿಳಿದಿರಲಿ; ಪವಿತ್ರಾತ್ಮ ಪ್ರೇರಣೆಯಿಂದ ಮಾತನಾಡುವ ಯಾವಾತನೂ, “ಯೇಸುವಿಗೆ ಧಿಕ್ಕಾರ!” ಎನ್ನಲಾರನು. ಅಂತೆಯೇ, ಪವಿತ್ರಾತ್ಮ ಪ್ರೇರಣೆಯಿಂದಲ್ಲದೆ ಯಾವಾತನೂ, “ಯೇಸುವೇ ಪ್ರಭು,” ಎಂದು ಒಪ್ಪಿಕೊಳ್ಳಲಾರನು.


ಆಗ ಪೇತ್ರನು, “ನೀವು ಹೇಳುವ ಆ ಮನುಷ್ಯ ಯಾರೆಂದು ನಾನರಿಯೆ,” ಎಂದು ಹೇಳಿ ಆಣೆಯಿಡುವುದಕ್ಕೂ ಶಪಿಸಿಕೊಳ್ಳುವುದಕ್ಕೂ ತೊಡಗಿದನು. ಕೂಡಲೇ ಕೋಳಿ ಎರಡನೆಯ ಸಾರಿ ಕೂಗಿತು.


ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


ಕೋಪಗೊಂಡು ಅವರನ್ನು ಶಪಿಸಿದೆ; ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕೀಳಿಸಿದೆ.


ನನ್ನ ಅರಸನಾದ ಒಡೆಯರು ದಯವಿಟ್ಟು ತಮ್ಮ ಸೇವಕನ ಮಾತುಗಳನ್ನು ಆಲಿಸಬೇಕು. ನಿಮ್ಮನ್ನು ನನಗೆ ವಿರೋಧವಾಗಿ ಎತ್ತಿ ಕಟ್ಟಿದವರು ಸರ್ವೇಶ್ವರನೇ ಆಗಿರುವ ಪಕ್ಷದಲ್ಲಿ ಅವರಿಗೆ ಗಮಗಮಿಸುವ ನೈವೇದ್ಯವನ್ನು ಸಮರ್ಪಿಸಬೇಕು. ಮನುಷ್ಯರಾಗಿದ್ದರೆ, ಈಗ ಅವರು ನನಗೆ ಸರ್ವೇಶ್ವರನ ಸೌಭಾಗ್ಯದಲ್ಲಿ ಪಾಲುಸಿಕ್ಕದಂತೆ, ‘ಹೋಗಿ ಅನ್ಯದೇವತೆಗಳನ್ನು ಪೂಜಿಸು’ ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರೆ. ಆದುದರಿಂದ ಸರ್ವೇಶ್ವರನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಲಿ!


ಇದರಿಂದಾಗಿ ನೀವು ಶಾಪಗ್ರಸ್ತರು! ನೀವು ಯಾವಾಗಲೂ ಊಳಿಗದವರಾಗಿದ್ದು, ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಬೇಕು,” ಎಂದನು.


“ಶಾಪ ತಟ್ಟಲಿ ಕಾನಾನಿಗೆ ದಾಸಾನುದಾಸನಾಗಲಿ ಅವನು ತನ್ನ ಸೋದರರಿಗೆ”


ಆಗ ಆ ಮುದುಕನು, “ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರೆದುಕೊಂಡು ಬರಬೇಕೆಂದು ಸರ್ವೆಶ್ವರನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ,” ಎಂದು ಹೇಳಿದನು. ಆದರೆ ಈ ಮಾತು ಸುಳ್ಳಾಗಿತ್ತು.


ಸರ್ವಶಕ್ತ ಸರ್ವೇಶ್ವರನ ನುಡಿಯಿದು: “ಪ್ರವಾದಿಗಳು ನಿಮಗೆ ಹೇಳುವ ಮಾತುಗಳನ್ನು ಕೇಳಬೇಡಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಂಬಿಕೆ ನಿರೀಕ್ಷೆಯನ್ನು ಹುಟ್ಟಿಸುತ್ತಾರಷ್ಟೆ. ಸರ್ವೇಶ್ವರನ ಬಾಯಿಂದ ಹೊರಟದ್ದನ್ನು ನುಡಿಯದೆ ತಮ್ಮ ಸ್ವಂತ ಮನಸ್ಸಿಗೆ ತೋಚಿದ್ದನ್ನೇ ಹೇಳುತ್ತಾರೆ.


‘ಸರ್ವೇಶ್ವರನ ಹೊರೆ’ ಎಂಬ ಮಾತನ್ನು ಎತ್ತಲೇಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೊಂದು ಹೊರೆ. ಜೀವಸ್ವರೂಪರಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ.


ಸಹೋದರರೇ, ನೀವು ಪಡೆದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರ ಸಹವಾಸವನ್ನೇ ಮಾಡಬೇಡಿರೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು