Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:9 - ಕನ್ನಡ ಸತ್ಯವೇದವು C.L. Bible (BSI)

9 ನೀವು ಅಂಗೀಕರಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ಸಾರುವವನು ಶಾಪಗ್ರಸ್ತನಾಗಲಿ ಎಂದು ನಾನು ಮೊದಲೇ ಹೇಳಿದಂತೆ, ಮತ್ತೊಮ್ಮೆ ಒತ್ತಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿದ್ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ನಿಮಗೆ ಇದನ್ನು ಮೊದಲೇ ತಿಳಿಸಿದ್ದರೂ ಈಗ ಮತ್ತೆ ಹೇಳುತ್ತೇನೆ. ನೀವು ಈಗಾಗಲೇ ಸ್ವೀಕರಿಸಿಕೊಂಡಿರುವ ಸತ್ಯಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ಸಾರಿದರೆ ಅವನು ಶಾಪಗ್ರಸ್ತನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ, ಅವನು ಶಾಪಗ್ರಸ್ತನಾಗಲಿ ಎಂದು ಮೊದಲು ಹೇಳಿದಂತೆಯೇ ಈಗಲೂ ನಾನು ಪುನಃ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅತ್ತಾ ಸಾಂಗಲ್ಲ್ಯಾ ಸಾರ್ಕೆ ಅನಿಪರ್ತುನ್ ಮಿಯಾ ತುಮ್ಕಾ ಸಾಂಗ್ತಾ: ತುಮಿ ಮಾನುನ್ ಘೆಟಲ್ಲಿ ಬರಿ ಖಬರ್ ಸೊಡುನ್, ಕೊನ್‍ಬಿ ಅನಿಎಕ್ ದುಸ್ರಿ ಖಬರ್ ಸಾಂಗ್ತಾ ಹೊಲ್ಯಾರ್, ತೆಂಚ್ಯಾ ವರ್‍ತಿ ಸರಾಪ್ ಪಡುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:9
13 ತಿಳಿವುಗಳ ಹೋಲಿಕೆ  

ಸಹೋದರರೇ, ನೀವು ಪಡೆದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರ ಸಹವಾಸವನ್ನೇ ಮಾಡಬೇಡಿರೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಇಲ್ಲವಾದರೆ ಆತ ನಿನ್ನನ್ನು ಖಂಡಿಸಿಯಾನು, ನೀನು ಸುಳ್ಳುಗಾರನಾಗಿ ತೋರಿಬಂದೀಯೆ!


ನಿಮ್ಮ ದೇವರಾದ ಸರ್ವೇಶ್ವರ ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಆಜ್ಞೆಗಳನ್ನು ನೀವು ಕೈಗೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು.


ಹೀಗೆ ಆಲೋಚಿಸುತ್ತಿದ್ದಾಗ ನಾನು ಚಂಚಲಚಿತ್ತನಾಗಿದ್ದೆನೋ? ಕೇವಲ ಪ್ರಾಪಂಚಿಕನಂತೆ ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವನಂತಿದ್ದೆನೋ?


ಕೊನೆಯದಾಗಿ ಸಹೋದರರೇ, ಪ್ರಭುವಿನಲ್ಲಿ ಆನಂದಿಸಿರಿ. ನಾನು ನಿಮಗೆ ಮೊದಲೇ ತಿಳಿಸಿದಂತೆ ಇದನ್ನು ಮತ್ತೆ ಮತ್ತೆ ಬರೆಯುವುದರಲ್ಲಿ ನನಗೆ ಬೇಸರವಿಲ್ಲ; ಇದು ನಿಮ್ಮ ಹಿತಕ್ಕಾಗಿಯೇ.


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ಸರ್ವಶಕ್ತ ಸರ್ವೇಶ್ವರನ ನುಡಿಯಿದು: “ಪ್ರವಾದಿಗಳು ನಿಮಗೆ ಹೇಳುವ ಮಾತುಗಳನ್ನು ಕೇಳಬೇಡಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಂಬಿಕೆ ನಿರೀಕ್ಷೆಯನ್ನು ಹುಟ್ಟಿಸುತ್ತಾರಷ್ಟೆ. ಸರ್ವೇಶ್ವರನ ಬಾಯಿಂದ ಹೊರಟದ್ದನ್ನು ನುಡಿಯದೆ ತಮ್ಮ ಸ್ವಂತ ಮನಸ್ಸಿಗೆ ತೋಚಿದ್ದನ್ನೇ ಹೇಳುತ್ತಾರೆ.


ಅಲ್ಲಿ ಕೆಲಕಾಲವಿದ್ದು ಪುನಃ ಹೊರಟು ಗಲಾತ್ಯ ಮತ್ತು ಫ್ರಿಜಿಯ ಪ್ರದೇಶಗಳಲ್ಲಿ ಸಂಚರಿಸುತ್ತಾ ಭಕ್ತರೆಲ್ಲರನ್ನು ದೃಢಪಡಿಸಿದನು.


ಸ್ವದೇಶಿಯರೂ ರಕ್ತಸಂಬಂಧಿಕರೂ ಆದ ನನ್ನ ಸಹೋದರರ ಪರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕೃತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು