Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:1 - ಕನ್ನಡ ಸತ್ಯವೇದವು C.L. Bible (BSI)

1 ಹದಿನಾಲ್ಕು ವರ್ಷಗಳು ಕಳೆದ ಮೇಲೆ ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ಪುನಃ ಜೆರುಸಲೇಮಿಗೆ ಹೋದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹದಿನಾಲ್ಕು ವರ್ಷಗಳ ನಂತರ ನಾನು ಬಾರ್ನಬನ ಜೊತೆಯಲ್ಲಿ ತೀತನನ್ನು ಸಹ ಕರೆದುಕೊಂಡು, ಮತ್ತೊಮ್ಮೆ ಯೆರೂಸಲೇಮಿಗೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹದಿನಾಲ್ಕು ವರುಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ತಿರಿಗಿ ಯೆರೂಸಲೇವಿುಗೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹದಿನಾಲ್ಕು ವರ್ಷಗಳ ನಂತರ ಬಾರ್ನಬನ ಜೊತೆಯಲ್ಲಿ ತೀತನನ್ನು ಕರೆದುಕೊಂಡು ಮತ್ತೆ ಜೆರುಸಲೇಮಿಗೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹದಿನಾಲ್ಕು ವರ್ಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ಪುನಃ ಯೆರೂಸಲೇಮಿಗೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಚೆವ್ದಾ ವರ್ಸಾಂಚ್ಯಾ ಮಾನಾ ಬಾರ್ನಾಬಾಸಾಚ್ಯಾ ವಾಂಗ್ಡಾ ಮಿಯಾ ಜೆರುಜಲೆಮಾಕ್ ಗೆಲೊ; ತಿತಾಕ್ಬಿ ಮಿಯಾ ಮಾಜ್ಯಾ ವಾಂಗ್ಡಾ ಘೆವ್ನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:1
20 ತಿಳಿವುಗಳ ಹೋಲಿಕೆ  

ಆಗ ನನ್ನ ಸಂಗಡವಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿ ಆಗಬೇಕೆಂದು ಯಾರೂ ಒತ್ತಾಯಪಡಿಸಲಿಲ್ಲ.


ನನ್ನೊಡನೆ ಸೆರೆಯಾಳಾಗಿರುವ ಅರಿಸ್ತಾರ್ಕನೂ ಬಾರ್ನಬನಿಗೆ ಹತ್ತಿರದ ನೆಂಟನಾದ ಮಾರ್ಕನೂ ನಿಮಗೆ ಶುಭಾಶಯಗಳನ್ನು ಕಳುಹಿಸಿದ್ದಾರೆ. ಮಾರ್ಕನು ನಿಮ್ಮ ಬಳಿಗೆ ಬಂದಾಗ ಅವನನ್ನು ಸ್ವಾಗತಿಸಿರಿ. ಅವನ ವಿಷಯದಲ್ಲಿ ನಿಮಗೆ ಸಲಹೆಗಳನ್ನು ಕೊಡಲಾಗಿದೆ.


ಅಂತೆಯೇ, ಕೇಫನ ಸಂಗಡ ಇದ್ದ ಮಿಕ್ಕ ಯೆಹೂದ್ಯರು ಕಪಟತನದಿಂದ ವರ್ತಿಸಿದರು. ಇವರ ವರ್ತನೆಗೆ ಬಾರ್ನಬನೂ ಸಹ ಮಾರುಹೋದನು.


ಮೂರು ವರ್ಷಗಳ ನಂತರವೇ ಕೇಫನನ್ನು ಕಂಡು ಮಾತನಾಡಲು ಜೆರುಸಲೇಮಿಗೆ ಹೋದೆ; ಹದಿನೈದು ದಿನ ಆತನೊಂದಿಗೆ ತಂಗಿದ್ದೆ.


ತೀತನ ವಿಷಯವಾಗಿ ಹೇಳುವುದಾದರೆ, ಆತನು ನನ್ನ ಸಹೋದ್ಯೋಗಿ; ನಿಮ್ಮ ಸೇವೆಯಲ್ಲಿ ನನ್ನ ಸಹಕಾರಿ, ಆತನ ಸಂಗಡ ಬರುತ್ತಿರುವ ಇತರ ಸಹೋದರರು ಸಭೆಗಳ ಪ್ರತಿನಿಧಿಗಳು. ಕ್ರಿಸ್ತಯೇಸುವಿನ ಮಹಿಮೆಯನ್ನು ಬೆಳಗುವಂಥವರು ಅವರು.


ನಿಮ್ಮ ಮೇಲೆ ನನಗಿರುವ ಅದೇ ಅಕ್ಕರೆಯನ್ನು ತೀತನಲ್ಲೂ ಮೂಡಿಸಿದ ದೇವರಿಗೆ ಕೃತಜ್ಞತೆ ಸಲ್ಲಬೇಕು.


ಜೀವನೋಪಾಯಕ್ಕಾಗಿ ಬಾರ್ನಬ ಮತ್ತು ನಾನು ಮಾತ್ರ ದುಡಿಯಬೇಕೇ?


ಆದುದರಿಂದ ನಾವೆಲ್ಲರೂ ಸಭೆಸೇರಿ ಪ್ರತಿನಿಧಿಗಳನ್ನು ಆರಿಸಿ ನಿಮ್ಮಲ್ಲಿಗೆ ಕಳುಹಿಸಲು ನಿರ್ಧರಿಸಿದೆವು.


ಆ ಜನರು ಬಾರ್ನಬನನ್ನು ‘ಜೆಯುಸ್’ ದೇವರೆಂದೂ ಪೌಲನು ಮುಖ್ಯ ಭಾಷಣಕಾರನಾದುದರಿಂದ, ಅವನನ್ನು ‘ಹೆರ್ಮೆ’ ದೇವರೆಂದೂ ಕರೆಯಲಾರಂಭಿಸಿದರು.


ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿಂಸಿಸುವಂತೆ ಹುರಿದುಂಬಿಸಿ, ಅವರನ್ನು ಆ ಪ್ರದೇಶದಿಂದ ಹೊರಗಟ್ಟಿದರು.


ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ಮೀಸಲಾಗಿಡಿ,” ಎಂದರು.


ಬಾರ್ನಬ ಮತ್ತು ಸೌಲನು ತಮ್ಮ ಧರ್ಮಕಾರ್ಯವನ್ನು ಮುಗಿಸಿಕೊಂಡು ಮಾರ್ಕ. ಎಂಬ ಹೆಸರುಗೊಂಡ ಯೊವಾನ್ನನೊಂದಿಗೆ ಜೆರುಸಲೇಮಿನಿಂದ ಹಿಂದಿರುಗಿದರು.


ಅಂತೆಯೇ ತಮ್ಮ ಸಹಾಯವನ್ನು ಬಾರ್ನಬ ಮತ್ತು ಸೌಲ ಇವರ ಮುಖಾಂತರ ಅಲ್ಲಿನ ಸಭಾಪ್ರಮುಖರಿಗೆ ಕಳುಹಿಸಿಕೊಟ್ಟರು.


ಅನಂತರ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಕ್ಕೆ ಹೋದನು.


ಆದರೆ ನನ್ನ ಸಹೋದರ ತೀತನನ್ನು ಅಲ್ಲಿ ಕಾಣದೆಹೋದುದರಿಂದ ನನ್ನ ಮನಸ್ಸಿಗೆ ನೆಮ್ಮದಿ ಇಲ್ಲವಾಯಿತು. ಕೂಡಲೇ ಅಲ್ಲಿಯ ಜನರಿಂದ ಬೀಳ್ಕೊಂಡು ಮಕೆದೋನಿಯಕ್ಕೆ ಹೊರಟೆ.


ನನಗೆ ಕೊಡಲಾಗಿದ್ದ ಈ ವಿಶೇಷ ವರವನ್ನು ಮನಗಂಡು ಸಭಾಸ್ತಂಭಗಳೆಂದು ಪರಿಗಣಿತರಾದ ಯಕೋಬ, ಕೇಫ ಮತ್ತು ಯೊವಾನ್ನರು ನನಗೂ ಬಾರ್ನಬನಿಗೂ ಕೈಯಲ್ಲಿ ಕೈಯನ್ನಿಟ್ಟು ಅನ್ಯೋನ್ಯತೆಯನ್ನು ಸೂಚಿಸಿದರು. ಅಲ್ಲದೆ, “ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ, ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ,” ಎಂದೂ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು