Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:11 - ಕನ್ನಡ ಸತ್ಯವೇದವು C.L. Bible (BSI)

11 ಆದರೆ ಕೇಫನು ಅಂತಿಯೋಕ್ಯಕ್ಕೆ ಬಂದಾಗ ಆತನು ತಪ್ಪಿತಸ್ಥನೆಂಬುದು ಸಿದ್ಧವಾಗಿದ್ದುದರಿಂದ ನಾನು ಆತನನ್ನು ಮುಖಾಮುಖಿಯಾಗಿ ಖಂಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದರಿಂದ ನಾನು ಅವನನ್ನು ಮುಖಾಮುಖಿಯಾಗಿ ಎದುರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ, ಅವನು ತಪ್ಪಿತಸ್ಥನೆಂದು ಸ್ಪಷ್ಟವಾಗಿ ತೋರಿದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕೇಫನು ಅಂತಿಯೋಕ್ಯ ಎಂಬ ಪಟ್ಟಣಕ್ಕೆ ಬಂದಾಗ ಅವನು ತಪ್ಪುಮಾಡಿದವನಾಗಿ ಇದ್ದುದರಿಂದ, ನಾನು ಅವನನ್ನು ಬಹಿರಂಗವಾಗಿ ಎದುರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಖರೆ ಪೆದ್ರು ಅಂತಿಯೊಕಾತ್ ಯೆಲ್ಲ್ಯಾ ತನ್ನಾ, ಮಿಯಾ ತೆಚ್ಯಾ ಇದ್ರಾಕುಚ್ ವಿರೊಧ್ ರ್‍ಹಾಲೊ. ಕಶ್ಯಾಕ್ ಮಟ್ಲ್ಯಾರ್ ತೊ ಸಮಾ ನ್ಹಯ್ ಹೊತ್ತೆ ಕರುಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:11
31 ತಿಳಿವುಗಳ ಹೋಲಿಕೆ  

ಯಾರಾದರೂ ಪಾಪದಲ್ಲಿಯೇ ಮುಂದುವರಿಯುತ್ತಾ ಇದ್ದರೆ, ಅಂಥವರನ್ನು ಬಹಿರಂಗವಾಗಿಯೇ ಖಂಡಿಸು. ಇದು ಇತರರಿಗೂ ಎಚ್ಚರಿಕೆಯಾಗಿರಲಿ.


ಅವರ ಈ ನಡತೆ, ಶುಭಸಂದೇಶದ ಸತ್ಯಕ್ಕೆ ಅನುಗುಣವಾದುದಲ್ಲ ಎಂದು ನನಗೆ ಮನದಟ್ಟಾಯಿತು. ಆಗ ನಾನು ಅವರೆಲ್ಲರ ಸಮ್ಮುಖದಲ್ಲೇ ಕೇಫನಿಗೆ: “ನೀನು ಯೆಹೂದ್ಯನಾಗಿದ್ದೂ ಯೆಹೂದ್ಯರಂತೆ ನಡೆಯದೆ ಅನ್ಯಧರ್ಮೀಯರಂತೆ ನಡೆದುಕೊಳ್ಳುತ್ತ ಇದ್ದಿಯಲ್ಲವೇ? ಹೀಗಿರುವಲ್ಲಿ ಅನ್ಯಧರ್ಮೀಯರು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ನೀನು ಒತ್ತಾಯಪಡಿಸುವುದಾದರೂ ಹೇಗೆ?” ಎಂದು ಕೇಳಿದೆ.


ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.


ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತ ವಿಶ್ವಾಸಿಗಳಿಗೆ, “ಮೋಶೆಯ ನಿಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ಧಾರ ಪಡೆಯಲಾರಿರಿ,” ಎಂದು ಬೋಧಿಸತೊಡಗಿದರು.


ಪ್ರಿಯ ಸಹೋದರರೇ, ನಮ್ಮೆಲ್ಲರಿಗೂ ಲಭಿಸಿರುವ ಜೀವೋದ್ಧಾರವನ್ನು ಕುರಿತು ಬರೆಯಲು ಅತ್ಯಾಸಕ್ತನಾಗಿದ್ದೆನು. ಆದರೆ, ದೇವಜನರಿಗೆ ಒಮ್ಮೆಗೇ ಶಾಶ್ವತವಾಗಿ ಕೊಡಲಾಗಿರುವ ವಿಶ್ವಾಸವನ್ನು ಕಾಪಾಡಿಕೊಳ್ಳುವುದಕ್ಕಾಗಿ ಹೋರಾಡಬೇಕೆಂದು ನಿಮ್ಮನ್ನು ಪ್ರೋತ್ಸಾಹಿಸಿ ಬರೆಯುವುದು ಅವಶ್ಯವೆಂದು ತೋರಿತು.


ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.


ನನಗೆ ಕೊಡಲಾಗಿದ್ದ ಈ ವಿಶೇಷ ವರವನ್ನು ಮನಗಂಡು ಸಭಾಸ್ತಂಭಗಳೆಂದು ಪರಿಗಣಿತರಾದ ಯಕೋಬ, ಕೇಫ ಮತ್ತು ಯೊವಾನ್ನರು ನನಗೂ ಬಾರ್ನಬನಿಗೂ ಕೈಯಲ್ಲಿ ಕೈಯನ್ನಿಟ್ಟು ಅನ್ಯೋನ್ಯತೆಯನ್ನು ಸೂಚಿಸಿದರು. ಅಲ್ಲದೆ, “ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ, ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ,” ಎಂದೂ ಹೇಳಿದರು.


ಬದಲಾಗಿ, ಯೆಹೂದ್ಯರಿಗೆ ಶುಭಸಂದೇಶವನ್ನು ಸಾರುವ ಸೇವೆಯನ್ನು ಪೇತ್ರನಿಗೆ ವಹಿಸಿಕೊಟ್ಟಂತೆಯೇ ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರುವ ಸೇವಾಕಾರ್ಯವನ್ನು ದೇವರು ನನಗೆ ವಹಿಸಿಕೊಟ್ಟಿದ್ದಾರೆ ಎಂಬುದನ್ನು ಆ ಗಣ್ಯವ್ಯಕ್ತಿಗಳು ಒಪ್ಪಿಕೊಂಡರು.


ಆದರೆ ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲಿಲ್ಲ. ಹೀಗೆ ನಿಮಗೋಸ್ಕರ ಶುಭಸಂದೇಶದ ಸತ್ಯಾರ್ಥವನ್ನು ಸುಭದ್ರವಾಗಿ ಇರಿಸಿದೆವು.


ಹೀಗೆ ಹೊಗಳಿಕೊಳ್ಳುವ ನಾನು ಹುಚ್ಚನೇ ಸರಿ. ಆದರೆ ಇದಕ್ಕೆ ಒತ್ತಾಯಪಡಿಸಿದವರು ನೀವೇ. ನೀವೇ ನನ್ನನ್ನು ಹೊಗಳಬೇಕಾಗಿತ್ತು. ಏಕೆಂದರೆ, ನಾನು ಶೂನ್ಯಸಮಾನನಾದರೂ ಆ “ಮಹಾಪ್ರೇಷಿತರು” ಎಂದು ಹೇಳಿಕೊಳ್ಳುವವರಿಗಿಂತ ಕೀಳಾದವನಲ್ಲ.


ಆದರೆ ಯೇಸು ಪೇತ್ರನತ್ತ ತಿರುಗಿ, “ಸೈತಾನನೇ, ತೊಲಗಿಲ್ಲಿಂದ; ನೀನು ನನಗೆ ಅಡೆತಡೆ; ನಿನ್ನ ಈ ಆಲೋಚನೆ ಮನುಷ್ಯರದ್ದೇ ಹೊರತು, ದೇವರದಲ್ಲ,” ಎಂದರು.


“ಮಹಾ ಪ್ರೇಷಿತರು” ಎನಿಸಿಕೊಳ್ಳುವ ಆ ಜನರಿಗಿಂತ ನಾನು ಯಾವುದರಲ್ಲೂ ಕಡಿಮೆಯಿಲ್ಲ.


ಸ್ತೇಫನನು ಕೊಲೆಯಾದ ಮೊದಲ್ಗೊಂಡು ಉಂಟಾದ ಹಿಂಸಾಚಾರದ ನಿಮಿತ್ತ ಭಕ್ತಾದಿಗಳು ಚದರಿಹೋದರು. ಅವರಲ್ಲಿ ಕೆಲವರು ಫೆನಿಷ್ಯ, ಸೈಪ್ರಸ್, ಅಂತಿಯೋಕ್ಯದವರೆಗೂ ಹೋಗಿ ಶುಭಸಂದೇಶವನ್ನು ಸಾರಿದರು. ಆದರೆ ಇದನ್ನು ಸಾರಿದ್ದು ಯೆಹೂದ್ಯರಿಗೆ ಮಾತ್ರ.


ಅದಕ್ಕೆ ದೇವರು: “ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು ಸರಿಯೇ?” ಎಂದು ಕೇಳಲು, ಯೋನನು, “ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?’ ಎಂದು ಉತ್ತರವಿತ್ತನು.


ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.


ನೀನು ಎದ್ದು ನಡುಕಟ್ಟಿಕೊ, ನಾನು ಆಜ್ಞಾಪಿಸುವುದನ್ನೆಲ್ಲ ಅವರಿಗೆ ತಿಳಿಸು, ಅವರಿಗೆ ಹೆದರಬೇಡ; ಹೆದರಿದರೆ ನಾನೂ ನಿನ್ನನ್ನು ಅವರ ಮುಂದೆ ಹೆದರಿಸುವೆನು.


ಬಳಿಕ ಸರ್ವೇಶ್ವರ ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದೇಹೋದಿರಿ. ಇಸ್ರಯೇಲರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದಿರಿ. ಆದುದರಿಂದ ಈ ಸಮಾಜದವರನ್ನು ನಾನು ವಾಗ್ದಾನಮಾಡಿದ ನಾಡಿಗೆ ನೀವು ಕರೆದುಕೊಂಡು ಹೋಗಕೂಡದು,” ಎಂದು ಹೇಳಿದರು.


ಅವನನ್ನು ಯೇಸುವಿನ ಬಳಿಗೆ ಕರತಂದನು. (’ಮೆಸ್ಸೀಯ’ ಎಂದರೆ ಅಭಿಷಿಕ್ತನಾದ ಲೋಕೋದ್ಧಾರಕ ಎಂದು ಅರ್ಥ). ಯೇಸು ಸಿಮೋನನನ್ನು ನೋಡಿ, “ಯೊವಾನ್ನನ ಮಗನಾದ ಸಿಮೋನನೇ, ಇನ್ನು ಮುಂದೆ ನಿನ್ನನ್ನು ಕೇಫನೆಂದು ಕರೆಯುವರು,” ಎಂದು ನುಡಿದರು. (’ಕೇಫ’ ಎಂದರೆ ‘ಪೇತ್ರ’ ಇಲ್ಲವೇ ‘ಬಂಡೆ’ ಎಂದರ್ಥ).


ಸೈಪ್ರಸ್ ಮತ್ತು ಸಿರೇನಿನ ಕೆಲವು ಭಕ್ತರಾದರೋ ಅಂತಿಯೋಕ್ಯಕ್ಕೆ ಹೋಗಿ ಪ್ರಭು ಯೇಸುವಿನ ಶುಭಸಂದೇಶವನ್ನು ಗ್ರೀಕರಿಗೂ ಸಾರಿದರು.


ಈ ಸಮಾಚಾರ ಜೆರುಸಲೇಮಿನ ಧರ್ಮಸಭೆಗೆ ತಲುಪಿತು. ಬಾರ್ನಬನನ್ನು ಅಂತಿಯೋಕ್ಯಕ್ಕೆ ಅವರು ಕಳುಹಿಸಿದರು.


ಆ ದಿನಗಳಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.


ಫರಿಸಾಯ ಪಂಥಕ್ಕೆ ಸೇರಿದ ಕೆಲವು ಭಕ್ತರು ಮಾತ್ರ ಎದ್ದುನಿಂತು, ಅನ್ಯಧರ್ಮೀಯರು ಸುನ್ನತಿಮಾಡಿಸಿಕೊಳ್ಳಲೇಬೇಕು, ಅವರು ಮೋಶೆಯ ನಿಯಮಗಳನ್ನು ಅನುಸರಿಸುವಂತೆ ಆಜ್ಞೆ ಮಾಡಲೇಬೇಕು,” ಎಂದರು.


ಮೂರು ವರ್ಷಗಳ ನಂತರವೇ ಕೇಫನನ್ನು ಕಂಡು ಮಾತನಾಡಲು ಜೆರುಸಲೇಮಿಗೆ ಹೋದೆ; ಹದಿನೈದು ದಿನ ಆತನೊಂದಿಗೆ ತಂಗಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು