ಗಲಾತ್ಯದವರಿಗೆ 2:12 - ಕನ್ನಡ ಸತ್ಯವೇದವು C.L. Bible (BSI)12 ಯಕೋಬನ ಕಡೆಯಿಂದ ಕೆಲವು ಸಹೋದರರು ಬರುವುದಕ್ಕೆ ಮುಂಚೆ ಆತನು ಅನ್ಯಧರ್ಮೀಯರೊಡನೆ ಊಟಮಾಡುತ್ತಿದ್ದನು. ಆದರೆ ಅವರು ಬಂದ ಮೇಲೆ ಸುನ್ನತಿ ಪರವಾದಿಗಳಿಗೆ ಅಂಜಿ ಅನ್ಯಧರ್ಮೀಯರಿಂದ ದೂರವಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯಾಕಂದರೆ ಯಾಕೋಬನ ಕಡೆಯಿಂದ ಕೆಲವರು ಬರುವದಕ್ಕೆ ಮುಂಚೆ ಅವನು ಅನ್ಯಜನರ ಸಂಗಡ ಊಟಮಾಡುತ್ತಿದ್ದನು; ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಡೆದ ಸಂಗತಿ ಏನೆಂದರೆ: ಪೇತ್ರನು ಮೊದಲು ಅಂತಿಯೋಕ್ಯಕ್ಕೆ ಬಂದಾಗ ಅವನು ಯೆಹೂದ್ಯರಲ್ಲದವರೊಂದಿಗೆ ಊಟಮಾಡಿದನು ಮತ್ತು ಅನ್ಯೋನ್ಯತೆಯಿಂದಿದ್ದನು. ಆ ಬಳಿಕ ಯಾಕೋಬನಿಂದ ಕಳುಹಿಸಲ್ಪಟ್ಟಿದ್ದ ಕೆಲವು ಯೆಹೂದ್ಯರು ಬಂದರು. ಆಗ, ಪೇತ್ರನು ಯೆಹೂದ್ಯರಲ್ಲದವರೊಂದಿಗೆ ಊಟಮಾಡುವುದನ್ನು ನಿಲ್ಲಿಸಿದನು. ಪೇತ್ರನು ತನ್ನನ್ನು ಯೆಹೂದ್ಯರಲ್ಲದವರಿಂದ ಬೇರ್ಪಡಿಸಿಕೊಂಡನು. ಯೆಹೂದ್ಯರಲ್ಲದವರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಂಬಿಕೊಂಡಿದ್ದ ಯೆಹೂದ್ಯರಿಗೆ ಅವನು ಹೆದರಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮುಂಚೆ ಪೇತ್ರನು ಯೆಹೂದ್ಯರಲ್ಲದವರೊಡನೆ ಊಟಮಾಡುತ್ತಿದ್ದನು. ಅವರು ಬಂದ ಮೇಲೆ ಯೆಹೂದ್ಯರಿಗೆ ಅವನು ಭಯಪಟ್ಟು ಯೆಹೂದ್ಯರಲ್ಲದವರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಜಾಕೊಬಾನ್ ಧಾಡುನ್ ದಿಲ್ಲಿ ಉಲ್ಲಿ ಲೊಕಾ ಥೈ ಯೆವ್ನ್ ಪಾವುಚ್ಯಾ ಅದ್ದಿ ಪೆದ್ರು ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ವಾಂಗ್ಡಾ ಬಸುನ್ ಜೆವಾನ್ ಕರುಕ್ ಲಾಗಲ್ಲೊ , ಖರೆ ತೆನಿ ಯೆಲ್ಲ್ಯಾ ತನ್ನಾ ಸುನ್ನತ್ ಕರುಕ್ ಪಾಜೆ ಮನುನ್ ಜಬರ್ದಸ್ತಿ ಕರ್‍ತಲ್ಯಾಂಚ್ಯಾ ಭಿಂಯಾನ್, ಜುದೆವ್ ನ್ಹಯ್ ಹೊತ್ತ್ಯಾ ಲೊಕಾನಿಕ್ನಾ ತೊ ಧುರ್ ರ್‍ಹಾಲೊ ಅನಿ ಎಗ್ಳೊ ರ್‍ಹಾಲೊ. ಅಧ್ಯಾಯವನ್ನು ನೋಡಿ |