ಗಲಾತ್ಯದವರಿಗೆ 2:14 - ಕನ್ನಡ ಸತ್ಯವೇದವು C.L. Bible (BSI)14 ಅವರ ಈ ನಡತೆ, ಶುಭಸಂದೇಶದ ಸತ್ಯಕ್ಕೆ ಅನುಗುಣವಾದುದಲ್ಲ ಎಂದು ನನಗೆ ಮನದಟ್ಟಾಯಿತು. ಆಗ ನಾನು ಅವರೆಲ್ಲರ ಸಮ್ಮುಖದಲ್ಲೇ ಕೇಫನಿಗೆ: “ನೀನು ಯೆಹೂದ್ಯನಾಗಿದ್ದೂ ಯೆಹೂದ್ಯರಂತೆ ನಡೆಯದೆ ಅನ್ಯಧರ್ಮೀಯರಂತೆ ನಡೆದುಕೊಳ್ಳುತ್ತ ಇದ್ದಿಯಲ್ಲವೇ? ಹೀಗಿರುವಲ್ಲಿ ಅನ್ಯಧರ್ಮೀಯರು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ನೀನು ಒತ್ತಾಯಪಡಿಸುವುದಾದರೂ ಹೇಗೆ?” ಎಂದು ಕೇಳಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯುವದಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ - ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ - ನೀವು ಯೆಹೂದ್ಯರ ಪದ್ಧತಿಗಳನ್ನು ಅನುಸರಿಸಬೇಕೆಂದು ನೀನು ಬಲಾತ್ಕಾರ ಮಾಡುವದು ಹೇಗೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಈ ಯೆಹೂದ್ಯರ ವರ್ತನೆಯನ್ನು ನಾನು ಗಮನಿಸಿದೆನು. ಅವರು ಸುವಾರ್ತೆಯ ಸತ್ಯವನ್ನು ಅನುಸರಿಸದೆ ಇರುವುದನ್ನು ಕಂಡು ಅಲ್ಲಿದ್ದ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ನಾನು ಪೇತ್ರನಿಗೆ, “ನೀನು ಯೆಹೂದ್ಯನಾಗಿರುವೆ. ಆದರೆ ನೀನು ಯೆಹೂದ್ಯನಂತೆ ಜೀವಿಸುತ್ತಿಲ್ಲ. ನೀನು ಯೆಹೂದ್ಯನಲ್ಲದವನಂತೆ ಜೀವಿಸುತ್ತಿರುವೆ. ಹೀಗಿರಲು ನೀನು ಯೆಹೂದ್ಯರಲ್ಲದವರಿಗೆ ಯೆಹೂದ್ಯರಂತೆ ಜೀವಿಸಬೇಕೆಂದು ಒತ್ತಾಯಮಾಡುವುದೇಕೆ?” ಎಂದು ಕೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ಅವರು ಸುವಾರ್ತೆಯ ಸತ್ಯದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ, “ನೀನು ಯೆಹೂದ್ಯನಾಗಿದ್ದು, ಯೆಹೂದ್ಯರಂತೆ ಜೀವಿಸದೆ ಯೆಹೂದ್ಯರಲ್ಲದವರಂತೆ ಜೀವಿಸಿ, ಯೆಹೂದ್ಯರಲ್ಲದವರು ಯೆಹೂದ್ಯರಂತೆ ಜೀವಿಸಬೇಕೆಂದು ನೀನು ಒತ್ತಾಯ ಮಾಡುವುದು ಹೇಗೆ?” ಎಂದು ಕೇಳಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಖರೆ ಬರ್‍ಯಾ ಖಬ್ರಿಚ್ಯಾ ಖರ್‍ಯಾಚ್ಯಾ ಪರ್‍ಕಾರ್ ತೆನಿ ನಿಟ್ಟ್ ಚಲಿನಾ ಹೊಲ್ಯಾತ್ ಮನುನ್ ಮಾಕಾ ದಿಸಲ್ಲ್ಯಾ ತನ್ನಾ ಸಗ್ಳ್ಯಾಂಚ್ಯಾ ಇದ್ರಾಕ್ ಪೆದ್ರುಕ್ ಮಿಯಾ; “ತಿಯಾ ಜಲ್ಮಾನ್ ಜುದೆವ್ ಹೊವ್ನ್, ಜುದೆವಾಂಚ್ಯಾ ಸಾರ್ಕೆ ಚಲಿನೆ, ಜುದೆವ್ ನ್ಹಯ್ ಅಸಲ್ಲ್ಯಾಂಚ್ಯಾ ಸಾರ್ಕೆ ಚಲ್ತೆ. ತಸೆ ಹೊಲ್ಯಾರ್ ತಿಯಾ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಜುದೆವಾಂಚ್ಯಾ ಸಾರ್ಕೆ ಚಲುಕ್ ಜಬರ್ದಸ್ತಿ ಕಶ್ಯಾಕ್ ಕರ್ತೆ?” ಅಧ್ಯಾಯವನ್ನು ನೋಡಿ |