Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:15 - ಕನ್ನಡ ಸತ್ಯವೇದವು C.L. Bible (BSI)

15 ನಾವಂತೂ ಹುಟ್ಟು ಯೆಹೂದ್ಯರು. ಪಾಪಿಗಳೆಂದು ಕರೆಯಲಾಗುವ ಅನ್ಯಧರ್ಮೀಯರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾವಂತೂ ಜನ್ಮತ ಯೆಹೂದ್ಯರು “ಪಾಪಿಗಳೆನಿಸಿಕೊಂಡ ಅನ್ಯಜನರಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾವಂತೂ ಹುಟ್ಟು ಯೆಹೂದ್ಯರು, ಪಾಪಿಗಳೆನಿಸಿಕೊಂಡ ಅನ್ಯಜನರಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾವಂತೂ ಹುಟ್ಟು ಯೆಹೂದ್ಯರು. ನಾವು ಪಾಪಿಗಳೆನಿಸಿಕೊಂಡಿರುವ ಅನ್ಯಜನರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನಾವಂತೂ ಹುಟ್ಟು ಯೆಹೂದ್ಯರು, ಪಾಪಿಗಳೆಂದು ಕರೆಯಲಾಗುವ ಯೆಹೂದ್ಯರಲ್ಲದವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜಲ್ಮಾನಿ ಅಮಿ ಜುದೆವ್, ಅನಿ ತೆನಿ ಸಾಂಗ್ತಲ್ಯಾ ಸಾರ್ಕೆ ಜುದೆವ್ ನ್ಹಯ್ ಹೊತ್ತೆ ಪಾಪಿ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:15
14 ತಿಳಿವುಗಳ ಹೋಲಿಕೆ  

ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು.


ಹಾಗಾದರೆ, ಯೆಹೂದ್ಯರಾದ ನಾವು ಇತರರಿಗಿಂತಲೂ ಶ್ರೇಷ್ಠರೋ? ಎಷ್ಟುಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ, ಇತರರೇ ಆಗಲಿ, ಎಲ್ಲರೂ ಪಾಪದ ಆಳ್ವಿಕೆಗೆ ಅಧೀನರು. ಇದನ್ನು ನಾನು ಈಗಾಗಲೇ ಸ್ಪಷ್ಟೀಕರಿಸಿದ್ದೇನೆ.


ಇಂಥ ಬಾಹ್ಯಾಚರಣೆಯಲ್ಲಿ ನಂಬಿಕೆ ಇಡಲು ತಮಗೆ ಹಕ್ಕು ಇದೆಯೆಂದು ಯಾರಾದರೂ ಭಾವಿಸಿದರೆ, ನನ್ನ ಹಕ್ಕು ಅದಕ್ಕೂ ಮಿಗಿಲಾದುದು ಎಂದೇ ಹೇಳುತ್ತೇನೆ.


ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ.


‘ಹೋಗು ನಾನು ನಿನ್ನನ್ನು ದೂರದಲ್ಲಿರುವ ಅನ್ಯಧರ್ಮೀಯರ ಬಳಿಗೆ ಕಳುಹಿಸುತ್ತೇನೆ,’ ಎಂದರು.


ಫರಿಸಾಯರು ಇದನ್ನು ಕಂಡದ್ದೇ ಯೇಸುವಿನ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮ ಗುರು ಇಂತಹ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇ?’ ಎಂದು ಆಕ್ಷೇಪಿಸಿದರು.


ಅವರು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದರು.


‘ನರಪುತ್ರನು ಪಾಪಿಮಾನವರ ಕೈವಶವಾಗಿ, ಶಿಲುಬೆಯ ಮರಣಕ್ಕೀಡಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ,’ ಎಂದು ತಿಳಿಸಿದ್ದನ್ನು ಮರೆತುಬಿಟ್ಟಿರೋ?” ಎಂದರು.


ಕ್ರಿಸ್ತಯೇಸುವಿನ ಮುಖಾಂತರ ದೇವರೊಡನೆ ಸತ್ಸಂಬಂಧವನ್ನು ಪಡೆಯಲು ಯತ್ನಿಸುತ್ತಿರುವ ನಾವು ಅನ್ಯಧರ್ಮೀಯರಂತೆ ಕಂಡುಬರುವುದಾದರೆ, ಕ್ರಿಸ್ತಯೇಸುವೇ ಪಾಪಕ್ಕೆ ಕಾರಣರೆಂದು ಹೇಳಿದಂತಾಗುತ್ತದೆ. ಆದರೆ ಅದೆಂದಿಗೂ ಆಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು