Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:2 - ಕನ್ನಡ ಸತ್ಯವೇದವು C.L. Bible (BSI)

2 ದೇವಪ್ರೇರಣೆಗೆ ಅನುಸಾರವಾಗಿಯೇ ಅಲ್ಲಿಗೆ ಹೋದೆ. ಅನ್ಯಧರ್ಮೀಯರಿಗೆ ನಾನು ಸಾರುತ್ತಿದ್ದ ಸಂದೇಶ ಏನೆಂಬುದನ್ನು ಅಲ್ಲಿದ್ದ ಕೆಲವು ಗಣ್ಯವ್ಯಕ್ತಿಗಳಿಗೆ ಪ್ರತ್ಯೇಕವಾಗಿ ತಿಳಿಸಿದೆ. ಅದುವರೆಗೆ ನಾನು ಪಟ್ಟ ಶ್ರಮವಾಗಲಿ ಈಗ ಪಡುತ್ತಿರುವ ಶ್ರಮವಾಗಲಿ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಹೀಗೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೈವಪ್ರೇರಣೆಗನುಸಾರವಾಗಿ ಹೋದೆನು. ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬದನ್ನು ಅಲ್ಲಿದ್ದವರಿಗೆ ತಿಳಿಸಿದೆನು. ಆದರೆ ನಾನು ಪಡುತ್ತಿರುವ ಪ್ರಯಾಸವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಹೋಗಲೇಬೇಕೆಂದು ದೇವರು ನನಗೆ ತಿಳಿಸಿದ್ದರಿಂದ ವಿಶ್ವಾಸಿಗಳ ನಾಯಕರಾದ ಈ ಜನರ ಬಳಿಗೆ ಹೋದೆನು. ನಾವಷ್ಟೇ ಇದ್ದಾಗ, ಯೆಹೂದ್ಯರಲ್ಲದವರಿಗೆ ಸಾರುವ ಸುವಾರ್ತೆಯನ್ನು ಇವರಿಗೆ ತಿಳಿಸಿದೆನು. ನಾನು ಮೊದಲು ಮಾಡಿದ ಸೇವೆ ಮತ್ತು ಈಗ ಮಾಡುತ್ತಿರುವ ಸೇವೆ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಇವರಿಗೆ ಅರ್ಥವಾಗುವಂತೆ ನನ್ನ ಸೇವೆಯ ಬಗ್ಗೆ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ನನಗೆ ದೊರೆತ ಪ್ರಕಟನೆಗೆ ಅನುಸಾರವಾಗಿ ಅಲ್ಲಿಗೆ ಹೋದೆನು. ಅಲ್ಲಿ ಇರುವ ಸಭೆಗೆ ಹೋಗಿ ಯೆಹೂದ್ಯರಲ್ಲದ ಜನರಿಗೆ ನಾನು ಸಾರುವ ಸುವಾರ್ತೆಯ ಬಗ್ಗೆ ವಿವರಿಸಿದೆನು. ಅಲ್ಲಿರುವ ಗಣ್ಯನಾಯಕರಿಗೆ ವೈಯಕ್ತಿಕವಾಗಿ ಅದರ ಬಗ್ಗೆ ವರದಿಮಾಡಿದೆನು. ಏಕೆಂದರೆ ನಾನು ಮಾಡಿದ ಸೇವೆ ಮತ್ತು ಮುಂದೆ ಮಾಡಲಿರುವ ಸೇವೆಯು ನಿಷ್ಫಲವಾಗಬಾರದೆಂಬ ಕಾರಣಕ್ಕಾಗಿ ಹೀಗೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಖರೆ ಮಿಯಾ ಥೈ ಗೆಲ್ಲೆ ಕಶ್ಯಾಕ್ ಮಟ್ಲ್ಯಾರ್, ಮಾಕಾ ಗಾವಲ್ಲ್ಯಾ ದೆವಾಚ್ಯಾ ಪ್ರೆರನಾಕ್ ಖಾಲ್ತಿ ಹೊವ್ನ್ ಗೆಲ್ಲೊ, ಅನಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಮಿಯಾ ಸಾಂಗುಕ್ ಲಾಗಲ್ಲೊ; ತ್ಯಾ ಬರ್‍ಯಾ ಖಬ್ರೆಚ್ಯಾ ವಿಶಯಾತ್ ಮಿಯಾ ಥೈತ್ಲ್ಯಾ ಮುಖಂಡಾಚ್ಯಾ ಇದ್ರಾಕ್ ಸೊಡ್ಸುನ್ ಸಾಂಗಟ್ಲೊ. ಕಶ್ಯಾಕ್ ಮಟ್ಲ್ಯಾರ್ ತವ್ಡೆ ಪತರ್ ಮಿಯಾ ಕರಲ್ಲೆ ಕಾಮ್ ಅನಿ ಅತ್ತಾ ಹೊತಲೆ ಕಾಮ್ ಪಾಯ್ದ್ಯಾಕ್ ಪಡಿನಸಲ್ಲೆ ಹೊವ್ಚೆ ನ್ಹಯ್ ಮನ್ತಲೆ ಮಾಕಾ ಪಾಜೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:2
26 ತಿಳಿವುಗಳ ಹೋಲಿಕೆ  

ಅಲ್ಲಿದ್ದ ಗಣ್ಯವ್ಯಕ್ತಿಗಳು ಕೂಡ (ಅವರು ಹಿಂದೆ ಎಂಥವರಾಗಿದ್ದರು ಎಂಬುದು ನನಗೆ ಮುಖ್ಯವಲ್ಲ; ದೇವರು ಮುಖನೋಡಿ ಮಣೆ ಹಾಕುವವರಲ್ಲ) ನನಗೆ ಯಾವ ಹೊಸ ಸಲಹೆ ನೀಡಲಿಲ್ಲ.


ಹೀಗೆ ನೀವು ನಡೆದುಕೊಂಡರೆ ನನ್ನ ಸೇವೆ ವ್ಯರ್ಥವಾಗದೆ, ಶ್ರಮೆ ನಿಷ್ಫಲವಾಗದೆ, ಫಲಪ್ರದವಾಯಿತೆಂದು ಕ್ರಿಸ್ತರ ದಿನದಂದು ನಾನು ಹೆಮ್ಮೆಪಡಬಹುದು.


ಆದುದರಿಂದ ನನಗೆ ಸಹಿಸಲು ಅಸಾಧ್ಯವಾಗಿ, ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಬೇಕಾಯಿತು. ಏಕೆಂದರೆ, ನಿಮ್ಮ ವಿಶ್ವಾಸದ ಬಗ್ಗೆ ನನಗೆ ತಿಳಿಯಬೇಕಾಗಿತ್ತು; ಪ್ರಲೋಭಕನು ಒಡ್ಡುವ ಬಲೆಗೆ ನೀವು ಸಿಲುಕಿ ನಮ್ಮ ಶ್ರಮವೆಲ್ಲ ನಿಷ್ಪ್ರಯೋಜಕವಾಯಿತೋ ಏನೋ ಎಂಬ ದಿಗಿಲು ನನಗಿತ್ತು.


ನನಗೆ ಕೊಡಲಾಗಿದ್ದ ಈ ವಿಶೇಷ ವರವನ್ನು ಮನಗಂಡು ಸಭಾಸ್ತಂಭಗಳೆಂದು ಪರಿಗಣಿತರಾದ ಯಕೋಬ, ಕೇಫ ಮತ್ತು ಯೊವಾನ್ನರು ನನಗೂ ಬಾರ್ನಬನಿಗೂ ಕೈಯಲ್ಲಿ ಕೈಯನ್ನಿಟ್ಟು ಅನ್ಯೋನ್ಯತೆಯನ್ನು ಸೂಚಿಸಿದರು. ಅಲ್ಲದೆ, “ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ, ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ,” ಎಂದೂ ಹೇಳಿದರು.


ನಾನಾದರೋ ಗೊತ್ತು ಗುರಿಯಿಲ್ಲದವನಂತೆ ಓಡುವುದಿಲ್ಲ, ಗಾಳಿಯೊಡನೆ ಗುದ್ದಾಡುವವನಂತೆ ಹೋರಾಡುವುದಿಲ್ಲ.


ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.


ನಿಮಗೆ ತಿಳಿದಿರುವಂತೆ ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ಆದರೆ ಪ್ರಥಮ ಬಹುಮಾನ ದೊರಕುವುದು ಒಬ್ಬನಿಗೆ ಮಾತ್ರ. ಅಂತೆಯೇ ಬಹುಮಾನವನ್ನು ಪಡೆದುಕೊಳ್ಳಲು ನೀವೂ ಓಡಿ.


ನಾನು ನಿಮ್ಮೊಡನೆ ಇದ್ದಾಗ, ಯೇಸುಕ್ರಿಸ್ತರನ್ನು, ಅದೂ ಶಿಲುಬೆಗೇರಿಸಲಾದ ಯೇಸುವನ್ನು ಹೊರತು ಬೇರೆ ಯಾವುದನ್ನೂ ಅರಿಯಲು ಆಶಿಸಲಿಲ್ಲ.


ಇದನ್ನು ಕೇಳಿದ್ದೇ, ಸಭೆ ಸೇರಿದ್ದವರೆಲ್ಲರೂ ಮೌನರಾದರು. ಪೌಲ ಮತ್ತು ಬಾರ್ನಬರಿಗೆ ಕಿವಿಗೊಟ್ಟರು. ದೇವರು ಅವರ ಮುಖಾಂತರ ಅನ್ಯಧರ್ಮೀಯರ ಮಧ್ಯೆ ಎಸಗಿದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕುರಿತು ಕೇಳಿದರು.


ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗೂ ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿಮಾಡಿದರು.


ಪ್ರಭುವಿನ ಹೆಸರಿನಲ್ಲಿ ನೀವು ಅವನನ್ನು ತುಂಬು ಹೃದಯದಿಂದ ಸ್ವಾಗತಿಸಿರಿ. ಅವನಂಥವರಿಗೆ ಸೂಕ್ತ ಗೌರವ ಸಲ್ಲಿಸಿರಿ.


ನಾನು ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರಬೇಕೆಂದು ದೇವರು ತಮ್ಮ ಮಗನನ್ನು ನನಗೆ ಶ್ರುತಪಡಿಸಿದರು. ಆಗ ಸಲಹೆಗಾಗಿ ನಾನು ಯಾರ ಬಳಿಗೂ ಹೋಗಲಿಲ್ಲ.


ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.


ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು,


ಆಗ ಆ ಸಭಾಸದಸ್ಯರಲ್ಲಿ ಒಬ್ಬನಾದ ಗಮಲಿಯೇಲ್ ಎಂಬ ಫರಿಸಾಯನು ಅಲ್ಲಿದ್ದನು. ಅವನೊಬ್ಬ ಗೌರವಾನ್ವಿತ ಮತ್ತು ಧರ್ಮಪಂಡಿತ. ಅವನು ಎದ್ದುನಿಂತು ಪ್ರೇಷಿತರನ್ನು ಸ್ವಲ್ಪಹೊತ್ತು ಸಭೆಯಿಂದ ಹೊರಗೆ ಕಳುಹಿಸುವಂತೆ ಹೇಳಿ


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಸತ್ತ ನೊಣಗಳಿಂದ ಗಂದಿಗನ ತೈಲ ಕೂಡ ನಾರುತ್ತದೆ. ಅಂತೆಯೇ ಹುಚ್ಚುತನ ಕೊಂಚವಾದರೂ ಜ್ಞಾನಮಾನಗಳನ್ನು ಕೆಡಿಸಿಬಿಡುತ್ತದೆ.


ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯೆಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು.


ದೇವರ ದಯೆ ದೊರಕುವುದು ಮಾನವನ ಇಚ್ಛೆಯಿಂದಲ್ಲ, ಅವನ ಪ್ರಯತ್ನದಿಂದಲೂ ಅಲ್ಲ. ಅದು ದೊರಕುವುದು ದೇವರ ಕರುಣೆಯಿಂದಲೇ.


ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳಬೇಕಾದ್ದು ಅನಿವಾರ್ಯವಾಗಿದೆ. ಆದುದರಿಂದ ಪ್ರಭು ನನಗಿತ್ತ ದರ್ಶನಗಳನ್ನು ಮತ್ತು ಶ್ರುತಪಡಿಸಿದ ಸತ್ಯಗಳನ್ನು ಕುರಿತು ಹೇಳುತ್ತೇನೆ:


ಕ್ರಿಸ್ತಯೇಸುವಿನ ಅನುಗ್ರಹದಿಂದ ನಿಮ್ಮನ್ನು ಕರೆದ ದೇವರನ್ನು ನೀವಿಷ್ಟು ಬೇಗನೆ ತ್ಯಜಿಸಿ, ಬೇರೊಂದು ‘ಶುಭಸಂದೇಶ’ವನ್ನು ಅಂಗೀಕರಿಸುತ್ತಿರುವಿರೆಂದು ಕೇಳಿ ನನಗೆ ಆಶ್ಚರ್ಯವಾಗುತ್ತಿದೆ.


ಈ ಶುಭಸಂದೇಶವನ್ನು ನಾನು ಮನುಷ್ಯರಿಂದ ಪಡೆಯಲಿಲ್ಲ; ಅದನ್ನು ಯಾರಿಂದಲೂ ಕಲಿತುಕೊಳ್ಳಲಿಲ್ಲ. ಯೇಸುಕ್ರಿಸ್ತರೇ ನನಗದನ್ನು ಶ್ರುತಪಡಿಸಿದರು.


ಇದುವರೆಗೂ ನಿಮ್ಮ ಬದುಕಿನ ಓಟ ಚೆನ್ನಾಗಿ ಸಾಗುತ್ತಿತ್ತು. ಸತ್ಯಕ್ಕೆ ಶರಣರಾಗದಂತೆ ಈಗ ನಿಮ್ಮನ್ನು ತಡೆದವರು ಯಾರು?


ಬಾಳಿನ ಸ್ಪರ್ಧೆಯಲ್ಲಿ ಭಾಗವಹಿಸಿದ್ದೇನೆ. ನನ್ನ ಓಟವನ್ನು ಮುಗಿಸಿದ್ದೇನೆ. ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.


ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು