ಗಲಾತ್ಯದವರಿಗೆ 2:9 - ಕನ್ನಡ ಸತ್ಯವೇದವು C.L. Bible (BSI)9 ನನಗೆ ಕೊಡಲಾಗಿದ್ದ ಈ ವಿಶೇಷ ವರವನ್ನು ಮನಗಂಡು ಸಭಾಸ್ತಂಭಗಳೆಂದು ಪರಿಗಣಿತರಾದ ಯಕೋಬ, ಕೇಫ ಮತ್ತು ಯೊವಾನ್ನರು ನನಗೂ ಬಾರ್ನಬನಿಗೂ ಕೈಯಲ್ಲಿ ಕೈಯನ್ನಿಟ್ಟು ಅನ್ಯೋನ್ಯತೆಯನ್ನು ಸೂಚಿಸಿದರು. ಅಲ್ಲದೆ, “ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ, ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ,” ಎಂದೂ ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸಭಾಸ್ತಂಭಗಳೆಂದು ಹೆಸರುಗೊಂಡಿರುವ ಯಾಕೋಬ ಕೇಫ ಯೋಹಾನರು ಕಂಡು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳುಕೊಂಡು ಐಕ್ಯವನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬನಿಗೂ ಬಲಗೈ ಕೊಟ್ಟು - ನೀವು ಅನ್ಯಜನರ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರು ನನಗೆ ಈ ವಿಶೇಷವಾದ ವರವನ್ನು ಕೊಟ್ಟಿದ್ದಾನೆಂಬುದನ್ನು ನಾಯಕರೆನಿಸಿಕೊಂಡಿದ್ದ ಯಾಕೋಬ, ಪೇತ್ರ, ಯೋಹಾನರು ಕಂಡುಕೊಂಡರು. ಆದ್ದರಿಂದ ಅವರು ಬಾರ್ನಬನನ್ನು ಮತ್ತು ನನ್ನನ್ನು ಸ್ವೀಕರಿಸಿಕೊಂಡರು. ಅವರು ನಮಗೆ, “ಪೌಲ ಮತ್ತು ಬಾರ್ನಬರೇ, ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ. ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತನ್ನಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚೆ ಖಾಂಬೆ ಸಾರ್ಕೆ ಹೊವ್ನ್ ಹೊತ್ತ್ಯಾ ಜಾಕೊಬಾನ್ ಪೆದ್ರುನ್ ಅನಿ ಜುವಾಂವಾನ್, ದೆವಾಕ್ನಾಚ್ ಮಾಕಾ ಗಾವಲ್ಲೆ; ಹೆ ಎಕ್ ವಿಶೆಸ್ ಭೊಮಾನ್ ಮನುನ್ ವಳ್ಕುನ್, ಮಾಕಾ ಅನಿ ಬಾರ್ನಾಬಾಸಾಕ್ ಅಪ್ನಾಚೆ ವಾಂಗ್ಡಿ ಮನುನ್ ಘೆಟ್ಲ್ಯಾನಿ , ಅನಿ ಅಮ್ಕಾ ಎಕಾಮೆಕಾಕ್ ಒಪ್ಕಿ ಹಾಯ್ ಮನುನ್ ದಾಕ್ವುಸಾಟ್ನಿ ಅಮಿ ಎಕಾಮೆಕಾಚೆ ಹಾತ್ ಮಿಳ್ವುಲಾವ್, ಮಿಯಾ ಅನಿ ಬಾರ್ನಾಬಾಸ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ, ಅನಿ ತೆನಿ ಜುದೆವ್ ಲೊಕಾಂಚ್ಯಾ ಮದ್ದಿ ಜಾವ್ಕ್ ಮನುನ್ ನಿರ್ಧಾರ್ ಕರ್ಲ್ಯಾಂವ್. ಅಧ್ಯಾಯವನ್ನು ನೋಡಿ |
ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿದನು. “ನಿನ್ನ ವಿಷಯದಲ್ಲಿ ನನ್ನ ಮನಸ್ಸು ಯಥಾರ್ಥವಾಗಿರುವಂತೆ ನಿನ್ನ ಮನಸ್ಸು ಯಥಾರ್ಥವಾಗಿ ಇರುತ್ತದೋ?’ ಎಂದು ಕೇಳಿದನು. ಅವನು, “ಹೌದು,” ಎಂದು ಉತ್ತರಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಕೊಡು,” ಎನ್ನಲು ಅವನು ಕೈಕೊಟ್ಟನು. ಯೇಹುವು ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.