Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:1 - ಕನ್ನಡ ಸತ್ಯವೇದವು C.L. Bible (BSI)

1 ಎಲೈ ಮತಿಗೆಟ್ಟ ಗಲಾತಿಯರೇ, ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸುಕ್ರಿಸ್ತರು ಶಿಲುಬೆಯ ಮೇಲೆ ಪ್ರಾಣಾರ್ಪಣೆ ಮಾಡಿದ್ದನ್ನು ನಿಮ್ಮ ಕಣ್ಣೆದುರಿಗೇ ಚಿತ್ರಿತಗೊಳಿಸಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಎಲೈ ಬುದ್ಧಿಯಿಲ್ಲದ ಗಲಾತ್ಯದವರೇ, ಯಾರು ನಿಮ್ಮನ್ನು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ವರ್ಣಿಸಲ್ಪಟ್ಟನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಕ್ರಿಸ್ತನು ಶಿಲುಬೆಯ ಮೇಲೆ ಮರಣ ಹೊಂದಿದ್ದರ ಬಗ್ಗೆ ಗಲಾತ್ಯದಲ್ಲಿರುವ ನಿಮಗೆ ಬಹು ಸ್ಪಷ್ಟವಾಗಿ ತಿಳಿಸಲಾಯಿತು. ಆದರೆ ನೀವು ಬಹು ಬುದ್ಧಿಹೀನರಾಗಿದ್ದೀರಿ. ನಿಮ್ಮನ್ನು ಮೋಸಗೊಳಿಸಲು ಬೇರೊಬ್ಬನಿಗೆ ಅವಕಾಶ ಮಾಡಿಕೊಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬುದ್ಧಿಯಿಲ್ಲದ ಗಲಾತ್ಯದವರೇ, ನಿಮಗೆ ಮಾಟಮಾಡಿಸಿದವರು ಯಾರು? ಯೇಸು ಕ್ರಿಸ್ತರು ಶಿಲುಬೆಗೆ ಹಾಕಿಸಿಕೊಂಡದ್ದನ್ನು ನಾನು ನಿಮ್ಮ ಕಣ್ಣೆದುರಿನಲ್ಲಿಯೇ ಚಿತ್ರೀಕರಿಸಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅರೆ ಬುದ್ದ್ ನತ್ತ್ಯಾ ಗಾಲಾತ್‌ಕಾರಾನು!, ತುಮ್ಕಾ ಕೊನ್ ಪಸ್ವುಲೆ? ಕುರ್ಸಾರ್ ಮಾರಲ್ಲ್ಯಾ ಜೆಜು ಕ್ರಿಸ್ತಾಚ್ಯಾ ವಿಶಯಾತ್ ತುಮ್ಚ್ಯಾ ಡೊಳ್ಯಾಚ್ಯಾ ಇದ್ರಾಕ್ ಬರೆ ಕರುನ್ ಸೊಡ್ಸುನ್ ಥವಲ್ಲೆ ಹಾಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:1
38 ತಿಳಿವುಗಳ ಹೋಲಿಕೆ  

ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ.


ಕ್ರಿಸ್ತಯೇಸುವಿನ ಅನುಗ್ರಹದಿಂದ ನಿಮ್ಮನ್ನು ಕರೆದ ದೇವರನ್ನು ನೀವಿಷ್ಟು ಬೇಗನೆ ತ್ಯಜಿಸಿ, ಬೇರೊಂದು ‘ಶುಭಸಂದೇಶ’ವನ್ನು ಅಂಗೀಕರಿಸುತ್ತಿರುವಿರೆಂದು ಕೇಳಿ ನನಗೆ ಆಶ್ಚರ್ಯವಾಗುತ್ತಿದೆ.


ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು?


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು.


ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ಈಗಲಾದರೋ ನಿಜದೇವರನ್ನು ಅರಿತುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ, ದುರ್ಬಲ ಹಾಗೂ ದರಿದ್ರವಾದ ಮೂಲಭೂತ ಶಕ್ತಿಗಳಿಗೆ ನೀವು ಮರಳುವುದೇಕೆ? ಪುನಃ ಅವುಗಳಿಗೆ ಗುಲಾಮರಾಗಲು ಇಚ್ಛಿಸುವುದೇಕೆ?


ನೀವು ಪವಿತ್ರಾತ್ಮ ಸಂಬಂಧವಾದ ಆಧ್ಯಾತ್ಮಿಕ ಜೀವನವನ್ನು ಪ್ರಾರಂಭಿಸಿಯೂ ಈಗ ಅದನ್ನು ಕೇವಲ ದೇಹಸಂಬಂಧವಾದ ವಿಧಿಯಿಂದ ಪೂರೈಸಬೇಕೆಂದಿದ್ದೀರೋ? ನೀವು ಅಷ್ಟು ಮತಿಗೆಟ್ಟವರೋ?


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ಆದುದರಿಂದ ನಿಮ್ಮ ನಡತೆಯ ವಿಷಯದಲ್ಲಿ ನೀವು ಅತ್ಯಂತ ಜಾಗರೂಕರಾಗಿರಿ; ಮೂಢರಂತಿರದೆ ಜಾಣರಾಗಿ ಜೀವಿಸಿರಿ.


ಅಂಥವನಿಗೆ ಒಣ ವಾಗ್ವಾದಗಳಲ್ಲಿ ಮತ್ತು ಬರಡು ಮಾತುಗಳಲ್ಲಿ ಬಲು ಹಂಬಲ. ಇವುಗಳು ಅಸೂಯೆ, ಕಲಹ, ದೂಷಣೆ, ಅನುಮಾನ ಮತ್ತು ಕಚ್ಚಾಟಗಳಿಗೆ ಎಡೆಕೊಡುತ್ತವೆ.


ಅವರ ಈ ನಡತೆ, ಶುಭಸಂದೇಶದ ಸತ್ಯಕ್ಕೆ ಅನುಗುಣವಾದುದಲ್ಲ ಎಂದು ನನಗೆ ಮನದಟ್ಟಾಯಿತು. ಆಗ ನಾನು ಅವರೆಲ್ಲರ ಸಮ್ಮುಖದಲ್ಲೇ ಕೇಫನಿಗೆ: “ನೀನು ಯೆಹೂದ್ಯನಾಗಿದ್ದೂ ಯೆಹೂದ್ಯರಂತೆ ನಡೆಯದೆ ಅನ್ಯಧರ್ಮೀಯರಂತೆ ನಡೆದುಕೊಳ್ಳುತ್ತ ಇದ್ದಿಯಲ್ಲವೇ? ಹೀಗಿರುವಲ್ಲಿ ಅನ್ಯಧರ್ಮೀಯರು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ನೀನು ಒತ್ತಾಯಪಡಿಸುವುದಾದರೂ ಹೇಗೆ?” ಎಂದು ಕೇಳಿದೆ.


ಎಂದೇ, ನೀವು ಈ ರೊಟ್ಟಿಯನ್ನು ಭುಜಿಸಿ ಈ ಪಾತ್ರೆಯಿಂದ ಪಾನಮಾಡುವಾಗಲೆಲ್ಲಾ ಪ್ರಭು ಬರುವ ತನಕ ಅವರ ಮರಣವನ್ನು ಸಾರುತ್ತೀರಿ.


ನಾನು ನಿಮ್ಮೊಡನೆ ಇದ್ದಾಗ, ಯೇಸುಕ್ರಿಸ್ತರನ್ನು, ಅದೂ ಶಿಲುಬೆಗೇರಿಸಲಾದ ಯೇಸುವನ್ನು ಹೊರತು ಬೇರೆ ಯಾವುದನ್ನೂ ಅರಿಯಲು ಆಶಿಸಲಿಲ್ಲ.


ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ;


ಸ್ವಾರ್ಥಸಾಧಕರಾಗಿದ್ದು, ಸತ್ಯಕ್ಕೆ ಮಣಿಯದೆ, ದುರ್ಮಾರ್ಗವನ್ನೇ ಅವಲಂಬಿಸಿ ನಡೆಯುವವರ ಮೇಲೆ ದೇವರ ಕೋಪವೂ ಆಕ್ರೋಶವೂ ಎರಗುತ್ತವೆ.


ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.


ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ದೈವಜ್ಞಾನಕ್ಕೆ ವಿರುದ್ಧ ತಲೆ ಎತ್ತುವ ದುರ್ಗಗಳನ್ನು ಧ್ವಂಸಮಾಡಬಲ್ಲೆವು. ಮಾನವನ ಪ್ರತಿಯೊಂದು ಆಲೋಚನೆಗಳನ್ನೂ ಬಂಧಿಸಬಲ್ಲೆವು.


ಆಗ ಸಮುವೇಲನು, “ನೀನು ಬುದ್ಧಿಹೀನ ಕಾರ್ಯವನ್ನು ಮಾಡಿದೆ; ನಿನ್ನ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಕೈಗೊಂಡಿದ್ದರೆ ನಿನ್ನ ರಾಜ್ಯವನ್ನು ಇಸ್ರಯೇಲರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದರು.


ಆದರೂ ಈ ಶುಭಸಂದೇಶವನ್ನು ಎಲ್ಲರೂ ಅಂಗೀಕರಿಸಲಿಲ್ಲ. ಆದ್ದರಿಂದಲೇ, ಯೆಶಾಯನು, “ಪ್ರಭುವೇ, ನಾವು ಸಾರಿದ ಸಂದೇಶವನ್ನು ನಂಬಿದವರು ಯಾರು?” ಎಂದು ಮೊರೆಯಿಟ್ಟಿದ್ದಾನೆ.


ದುರಾಚಾರಿಗಳೇ, ಅವಿವೇಕಿಗಳೇ, ಸರ್ವೇಶ್ವರನ ಬಗ್ಗೆ ಹೀಗೆ ವರ್ತಿಸಬಹುದೇ? ಆತ ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೆ? ನಿಮ್ಮನ್ನೊಂದು ರಾಷ್ಟ್ರವಾಗಿ ಸ್ಥಾಪಿಸಿದವನಲ್ಲವೆ?


ಆಗ ಯೇಸು, “ಎಂಥ ಮತಿಹೀನರು ನೀವು! ಪ್ರವಾದಿಗಳು ಹೇಳಿರುವುದೆಲ್ಲವನ್ನು ನಂಬುವುದರಲ್ಲಿ ಎಷ್ಟು ಮಂದಮತಿಗಳು ನೀವು!


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಮನೆ ಕಟ್ಟಿಕೊಂಡ ಬುದ್ಧಿಹೀನನನ್ನು ಹೋಲುತ್ತಾನೆ.


ಏಷ್ಯದಲ್ಲಿ ಅವರು ಶುಭಸಂದೇಶವನ್ನು ಸಾರಕೂಡದೆಂದು ಪವಿತ್ರಾತ್ಮ ನಿಷೇಧಿಸಿದ್ದರಿಂದ ಅವರು ಫ್ರಿಜಿಯ ಮತ್ತು ಗಲಾತ್ಯಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು.


ಮಾನವರಿಂದಾಗಲಿ ಮಾನವ ಅಧಿಕಾರದಿಂದಾಗಲಿ ನಾನು ಪ್ರೇಷಿತನಾಗಿರದೆ ಯೇಸುಕ್ರಿಸ್ತರಿಂದಲೂ ಮತ್ತು ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಪ್ರೇಷಿತನಾಗಿರುತ್ತೇನೆ.


ಸಹೋದರರೇ, ಸುನ್ನತಿಮಾಡಿಸಿಕೊಳ್ಳುವುದು ಅವಶ್ಯಕವೆಂದು ನಾನು ಇನ್ನೂ ಬೋಧಿಸುತ್ತಿರುವುದಾಗಿ ಕೆಲವರು ಹೇಳುತ್ತಿದ್ದಾರಲ್ಲವೇ? ಹಾಗೆ ಬೋಧಿಸುತ್ತಿರುವುದಾದರೆ ನಾನೇಕೆ ಹೀಗೆ ಹಿಂಸೆಬಾಧೆಗಳನ್ನು ಅನುಭವಿಸಬೇಕಾಗುತ್ತಿತ್ತು? ನಾನು ಹಾಗೇನಾದರೂ ಬೋಧಿಸಿದ್ದರೆ, ಶಿಲುಬೆಯ ಸಂದೇಶದಿಂದ ಯಾವ ಅಡ್ಡಿ ಆತಂಕವೂ ಉಂಟಾಗುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು