Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:13 - ಕನ್ನಡ ಸತ್ಯವೇದವು C.L. Bible (BSI)

13 ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ಸರಾಪಾತ್ ಹೊತ್ತ್ಯಾ ಅಮ್ಕಾ ಖಾಯ್ದ್ಯಾನ್ ಹಾನ್ತಲ್ಯಾ ಸರಾಪಾತ್ನಾ ಸೊಡ್ವುಸಾಟ್ನಿ; ಕ್ರಿಸ್ತಾನ್ ತೊ ಸರಾಪ್ ಅಪ್ನಾ ವರ್‍ತಿ ಘೆಟ್ಲ್ಯಾನ್, ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕ್ ಮನ್ತಾ “ಜೆ ಕೊನಾಕ್ ಝಾಡಾಕ್ ಲೊಂಬಾತ್ ಘಾಟಲ್ಲೆ ಹಾಯ್ ತೊ ದೆವಾಚ್ಯಾ ಸರಾಪಾತ್ ಹಾಯ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:13
43 ತಿಳಿವುಗಳ ಹೋಲಿಕೆ  

ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಅವನ ಶವವನ್ನು ನೀವು ರಾತ್ರಿಯೆಲ್ಲಾ ಆ ಮರದ ಮೇಲೆ ಇರಿಸಬಾರದು; ಅದನ್ನು ಅದೇ ದಿನ ನೆಲದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ಹೀಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡನ್ನು ನೀವೇ ಅಪವಿತ್ರಗೊಳಿಸಬಾರದು.


ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.


ಈ ಕಾರಣ, ಯೇಸು ಹೊಸ ಒಡಂಬಡಿಕೆಯನ್ನು ಏರ್ಪಡಿಸಿದ ಮಧ್ಯಸ್ಥರಾಗಿದ್ದಾರೆ. ದೈವಕರೆ ಹೊಂದಿದವರು ದೇವರು ವಾಗ್ದಾನಮಾಡಿದ ಅಮರ ಸೌಭಾಗ್ಯವನ್ನು ಬಾಧ್ಯವಾಗಿ ಪಡೆಯುವಂತೆ ಈ ಒಡಂಬಡಿಕೆಯನ್ನು ಏರ್ಪಡಿಸಲಾಯಿತು. ಇದು ಯೇಸುವಿನ ಮರಣದ ಮೂಲಕವೇ ಉಂಟಾಯಿತು. ಈ ಮರಣವು ಹಳೆಯ ಒಡಂಬಡಿಕೆಯನ್ನು ಮೀರಿ ಮಾಡಿದ ಅಪರಾಧಗಳನ್ನೂ ಪರಿಹರಿಸುತ್ತದೆ.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಇದು ನನ್ನ ರಕ್ತ, ಸಮಸ್ತ ಜನರ ಪಾಪಕ್ಷಮೆಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜಗುಣ ತೋರಿಬರುತ್ತದೆ.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ನೀವು ಶಿಲುಬೆಗೇರಿಸಿ ಕೊಂದುಹಾಕಿದ ಯೇಸುಸ್ವಾಮಿಯನ್ನು ನಮ್ಮ ಪಿತೃಗಳ ದೇವರು ಜೀವಕ್ಕೆ ಎಬ್ಬಿಸಿದ್ದಾರೆ.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ನಮ್ಮ ಪಾಪಗಳ ನಿಮಿತ್ತ ಯೇಸುವನ್ನು ಮರಣಕ್ಕೆ ಗುರಿಪಡಿಸಲಾಯಿತು. ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿ ಇರಿಸುವುದಕ್ಕಾಗಿ ಅವರು ಪುನರುತ್ಥಾನ ಹೊಂದಿದರು.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲಿಗೆ ಅವನನ್ನು ಏರಿಸಿದರು. ಅರಸನ ಕೋಪವು ಶಾಂತವಾಯಿತು.


‘ನಾನು ಈ ನಾಡನ್ನೂ ನಿವಾಸಿಗಳನ್ನೂ ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುದನ್ನು ನೀನು ಕೇಳಿದಾಗ, ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ಸ್ವದೇಶಿಯರೂ ರಕ್ತಸಂಬಂಧಿಕರೂ ಆದ ನನ್ನ ಸಹೋದರರ ಪರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕೃತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.


ಇದನ್ನು ನೋಡಿದ ಒಬ್ಬ ವ್ಯಕ್ತಿ ಯೋವಾಬನಿಗೆ, “ನೋಡಿ, ಆ ಓಕ್ ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆ,” ಎಂದು ಹೇಳಿದನು.


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ಆಗ ಅವನು ಆ ಹಣವನ್ನು ದೇವಾಲಯದಲ್ಲೇ ಎಸೆದು, ಹೊರಟುಹೋಗಿ ನೇಣುಹಾಕಿಕೊಂಡು ಸತ್ತನು.


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ಬೊಚ್ರ ನಗರವು ಪಾಳುಬೀಳುವುದು. ಜನರು ಅದನ್ನು ನೋಡಿ ಬೆಚ್ಚಿಬೀಳುವರು. ಅದು ಶಾಪಕ್ಕೂ ನಿಂದೆ ಪರಿಹಾಸ್ಯಕ್ಕೂ ಗುರಿಯಾಗುವುದು. ಅದಕ್ಕೆ ಸೇರಿದ ಊರುಗಳೆಲ್ಲ ನಿತ್ಯನಾಶ ಹೊಂದುವುವು. ಇದನ್ನು ಆಣೆಯಿಟ್ಟು ಹೇಳಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.


ಆಗ ಅರಸ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮ್ಮ ಪರವಾಗಿ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಕೊಟ್ಟರೆ ನೀವು ಸರ್ವೇಶ್ವರನ ಪ್ರಜೆಯನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಅರಸನು ಎಸ್ತೇರಳಿಗೆ ತನ್ನ ಇಚ್ಛೆಯಂತೆ ಮಾಡಲು ಅಪ್ಪಣೆಕೊಟ್ಟನು. ಕೂಡಲೆ ಇದಕ್ಕೆ ಸಂಬಂಧಪಟ್ಟ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾಯಿತು. ಹಾಮಾನನ ಹತ್ತುಮಂದಿ ಮಕ್ಕಳ ಶವಗಳನ್ನು ಗಲ್ಲಿಗೇರಿಸಲಾಯಿತು.


ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


ಅವರು ಇವರನ್ನು ಕೊಂದು ಗುಡ್ಡದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕಿದರು. ಈ ಏಳುಮಂದಿ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭ ಆಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು