Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:16 - ಕನ್ನಡ ಸತ್ಯವೇದವು C.L. Bible (BSI)

16 ಹಾಗೆಯೇ, ದೇವರು ಅಬ್ರಹಾಮನಿಗೂ ಆತನ ಸಂತತಿಗೂ ವಾಗ್ದಾನಗಳನ್ನು ಮಾಡಿದರು. "ನಿನ್ನ ಸಂತತಿಗಳಿಗೆ" ಎಂದು ಹೇಳಿ ಅನೇಕರನ್ನು ಸೂಚಿಸದೆ “ನಿನ್ನ ಸಂತತಿಗೆ” ಎಂದು ಹೇಳಿ ಒಬ್ಬ ವ್ಯಕ್ತಿಯನ್ನೇ ಆ ವಾಗ್ದಾನದಲ್ಲಿ ಸೂಚಿಸಿದರು. ಆ ವ್ಯಕ್ತಿಯೇ ಕ್ರಿಸ್ತಯೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹಾಗೆಯೇ, ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. ಆ ಒಬ್ಬನು ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಒಳ್ಳೇದು, ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು. ಆತನು ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬನು ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರು ಅಬ್ರಹಾಮನಿಗೂ ಅವನ ಸಂತಾನದವರಿಗೂ ವಾಗ್ದಾನಗಳನ್ನು ಮಾಡಿದನು. “ನಿನ್ನ ಸಂತತಿಗಳಿಗೆ” ಎಂದು ದೇವರು ಹೇಳಲಿಲ್ಲ. ಏಕೆಂದರೆ ಅನೇಕ ಜನರು ಎಂಬರ್ಥವನ್ನು ಅದು ಕೊಡುತ್ತದೆ. ಆದರೆ ದೇವರು ಅವನಿಗೆ, “ನಿನ್ನ ಸಂತತಿಗೆ” ಎಂದು ಹೇಳಿದನು. ಅದರರ್ಥವೇನೆಂದರೆ, ಒಬ್ಬನೇ ಒಬ್ಬ ವ್ಯಕ್ತಿ. ಆತನೇ ಕ್ರಿಸ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹಾಗೆಯೇ ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳು ಮಾಡಲಾದವು. ಅದರಲ್ಲಿ, “ನಿನ್ನ ಸಂತತಿಗಳಿಗೆ,” ಎಂದು ಹೇಳಿ ಅನೇಕರನ್ನು ಸೂಚಿಸದೆ, “ನಿನ್ನ ಸಂತತಿಗೆ,” ಎಂದು ಹೇಳಿದ ಒಬ್ಬರನ್ನೇ ಸೂಚಿಸಿದೆ. ಆ ಒಬ್ಬ ವ್ಯಕ್ತಿ ಕ್ರಿಸ್ತ ಯೇಸುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ದೆವಾನ್ ಅಬ್ರಾಹಾಮಾಕ್ ಅನಿ ತೆಚ್ಯಾ ಪಿಳ್ಗಿಕ್ ಗೊಸ್ಟಿಯಾ ದಿಲ್ಯಾನ್, ಪವಿತ್ರ್ ಪುಸ್ತಕ್ ಪಿಳ್ಗಿಯಾಕ್ನಿ ಮನುನ್ ಸಾಂಗಿನಾ ತಸೆ ಮಟ್ಲ್ಯಾರ್ ಲೈ ಲೊಕಾ ಮನುನ್ ಹೊತಾ ಖರೆ ತೆ “ಪಿಳ್ಗಿಕ್” ಮನ್ತಾ, ಕಶ್ಯಾಕ್ ಮಟ್ಲ್ಯಾರ್ ತೊ ಎಕ್ಲ್ಯಾಕುಚ್ ದಾಕ್ವುತಾ, ತೊ ಎಕ್ಲೊ ಕೊನ್ ಮಟ್ಲ್ಯಾರ್ ಕ್ರಿಸ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:16
28 ತಿಳಿವುಗಳ ಹೋಲಿಕೆ  

ಅಬ್ರಹಾಮನಿಗೂ ಆತನ ಸಂತತಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದರು. ಈ ವಾಗ್ದಾನವನ್ನು ಅಬ್ರಹಾಮನು ಪಡೆದದ್ದು ಧರ್ಮಶಾಸ್ತ್ರದ ಪಾಲನೆಯಿಂದ ಅಲ್ಲ, ಆದರೆ ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರಿಂದ.


ಮರೆಯಲಿಲ್ಲ ಆತ ಕರುಣೆತೋರಲು ಅಬ್ರಹಾಮನಿಗೆ I ಅವನ ಸಂತತಿಗೆ, ಯುಗಯುಗಾಂತರದವರೆಗೆ II


ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ.


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಈ ವಿಶ್ವಾಸದ ಮೂಲಕವೇ ಅನ್ಯಧರ್ಮೀಯರನ್ನು ಕೂಡ ದೇವರು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ, ಎಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆಯಲಾಗಿತ್ತು. ಈ ಕಾರಣದಿಂದಲೇ ಅಬ್ರಹಾಮನಿಗೆ, “ನಿನ್ನ ಮುಖಾಂತರವೇ ಎಲ್ಲಾ ಜನಾಂಗಗಳು ಆಶೀರ್ವಾದವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಮುಂಚಿತವಾಗಿ ತಿಳಿಸಲಾಯಿತು.


"ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”


ದೇವರು ಪ್ರವಾದಿಗಳ ಮುಖಾಂತರ ಮಾಡಿದ ವಾಗ್ದಾನಗಳಿಗೂ ನಿಮ್ಮ ಪೂರ್ವಜರೊಂದಿಗೆ ಮಾಡಿದ ಒಡಂಬಡಿಕೆಗೂ ನೀವು ಉತ್ತರಾಧಿಕಾರಿಗಳು; ಪೂರ್ವಜ ಅಬ್ರಹಾಮನಿಗೆ, ‘ನಿನ್ನ ಸಂತತಿಯ ಮುಖಾಂತರ ವಿಶ್ವದ ಎಲ್ಲಾ ಜನಾಂಗಗಳು ಧನ್ಯರಾಗುವರು’ ಎಂದಿದ್ದಾರೆ ದೇವರು.


ಆದರೆ ದೇವರು, ಅಬ್ರಹಾಮನಿಗೆ, “ನಿನ್ನ ಮಗನ ಹಾಗೂ ದಾಸಿಯ ಬಗ್ಗೆ ನಿನಗೆ ಚಿಂತೆಬೇಡ; ಸಾರಳು ಹೇಳಿದಂತೆಯೇ ಮಾಡು, ಏಕೆಂದರೆ ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು.


ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, “ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!” ಎಂದರು.


ನೀವೆಲ್ಲರೂ ಕ್ರಿಸ್ತಯೇಸುವಿನ ದೇಹ ಆಗಿದ್ದೀರಿ; ಪ್ರತಿಯೊಬ್ಬನೂ ಈ ದೇಹದ ಅಂಗವಾಗಿದ್ದಾನೆ.


ದೇಹ ಒಂದೇ; ಅಂಗಗಳು ಹಲವು. ಆ ಅಂಗಗಳು ಅನೇಕವಿದ್ದರೂ ಅವು ಸೇರಿ ಒಂದೇ ದೇಹವಾಗುತ್ತದೆ. ಅಂತೆಯೇ ಕ್ರಿಸ್ತಯೇಸು.


ಅಂತೆಯೇ, ನಾವು ಅನೇಕ ಮಂದಿ ಇದ್ದರೂ ಕ್ರಿಸ್ತಯೇಸುವಿನಲ್ಲಿ ನಾವೆಲ್ಲರೂ ಒಂದೇ ದೇಹವಾಗಿದ್ದೇವೆ. ಒಬ್ಬರಿಗೊಬ್ಬರು ದೇಹದ ವಿವಿಧ ಅಂಗಗಳಂತೆ ಹೊಂದಿಕೊಂಡಿದ್ದೇವೆ.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಈ ಶಿರಸ್ಸಿನಿಂದಲೇ ಇಡೀ ದೇಹವು, ಕೀಲು-ನರಗಳ ಮೂಲಕ ಒಂದಾಗಿ ಸೇರಿ, ಪೋಷಣೆ ಪಡೆದು, ದೇವರು ನಿಯೋಜಿಸಿರುವ ಪ್ರಕಾರ ಬೆಳೆಯುತ್ತಲಿದೆ.


ಈ ಗಹನವಾದ ರಹಸ್ಯವು ಯೇಸುಕ್ರಿಸ್ತರಿಗೂ ಧರ್ಮಸಭೆಗೂ ಇರುವ ಸಂಬಂಧವನ್ನು ಸೂಚಿಸುತ್ತದೆ ಎಂಬುದೇ ನನ್ನ ಅಭಿಪ್ರಾಯ.


ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ:


ಅವರೇ ಇಸ್ರಯೇಲರು. ದೇವರೇ ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡರು; ಇವರಿಗೆ ತಮ್ಮ ಮಹಿಮೆಯನ್ನು ವ್ಯಕ್ತಪಡಿಸಿದರು; ಇವರೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಇವರಿಗೆ ಧರ್ಮಶಾಸ್ತ್ರವನ್ನೂ ಸಭಾರಾಧನೆಯನ್ನೂ ವಾಗ್ದಾನಗಳನ್ನೂ ದಯಪಾಲಿಸಿದರು.


ಅವರು ಹಿಬ್ರಿಯರೋ? ನಾನೂ ಹಿಬ್ರಿಯನೇ. ಅವರು ಇಸ್ರಯೇಲರೋ? ನಾನೂ ಇಸ್ರಯೇಲನೇ. ಅವರು ಅಬ್ರಹಾಮನ ವಂಶದವರೋ? ನಾನೂ ಅದೆ ವಂಶದವನೇ.


ಹಾಗಾದರೆ ಧರ್ಮಶಾಸ್ತ್ರದ ಉದ್ದೇಶವಾದರೂ ಏನು? ಅಪರಾಧದ ಅರಿವನ್ನು ಮೂಡಿಸುವುದಕ್ಕಾಗಿ ಅದನ್ನು ಕಾಲಕ್ರಮೇಣ ಸೇರಿಸಲಾಯಿತು. ದೇವವಾಗ್ದಾನವನ್ನು ಪಡೆದ ಆ ಸಂತತಿ ಬರುವ ತನಕ ಮಾತ್ರ ಅದು ಇರಲೆಂದು ಕೊಡಲಾಯಿತು. ಅಲ್ಲದೆ, ಕೇವಲ ದೇವದೂತರ ಮುಖಾಂತರ, ಒಬ್ಬ ಮಾನವ ಮಧ್ಯಸ್ಥನ ಮೂಲಕ ಮಾತ್ರ ಅದನ್ನು ನೀಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು