Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:20 - ಕನ್ನಡ ಸತ್ಯವೇದವು C.L. Bible (BSI)

20 ಒಂದೇ ಪಕ್ಷ ಇರುವಾಗ ಮಧ್ಯಸ್ಥನು ಬೇಕಿಲ್ಲ, ದೇವರಾದರೋ ಒಬ್ಬರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಒಂದೇ ಪಕ್ಷವಿದ್ದರೆ ಮಧ್ಯಸ್ಥನು ಬೇಕಿಲ್ಲ. ದೇವರಾದರೋ ಒಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಒಂದೇ ಪಕ್ಷವಿದ್ದರೆ ಮಧ್ಯಸ್ಥನು ಬೇಕಿಲ್ಲ, ದೇವರಾದರೋ ಒಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಒಂದೇ ಪಕ್ಷವಿದ್ದರೆ ಮಧ್ಯಸ್ತನು ಬೇಕಿಲ್ಲ. ದೇವರು ಒಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಒಂದು ಪಕ್ಷಕ್ಕಿಂತಲೂ ಹೆಚ್ಚಿನವನಾಗಿದ್ದರೆ ಮಾತ್ರ ಮಧ್ಯಸ್ಥನ ಅಗತ್ಯವಿರುವುದು; ದೇವರಾದರೋ ಒಬ್ಬರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ ಎಕುಚ್ ಎಕ್ ಮಾನುಸ್ ರಾತಾನಾ ಮಧ್ಯಸ್ತಾಚಿ ಗರಜ್ ನತ್ತಿ; ದೆವ್ ಎಕ್ಲೊಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:20
11 ತಿಳಿವುಗಳ ಹೋಲಿಕೆ  

ದೇವರು ಒಬ್ಬರೇ; ದೇವರನ್ನೂ ಮಾನವರನ್ನೂ ಒಂದುಗೂಡಿಸುವ ಮಧ್ಯಸ್ಥರೂ ಒಬ್ಬರೇ; ಅವರೇ ಮಾನವರಾಗಿರುವ ಕ್ರಿಸ್ತಯೇಸು.


“ಇಸ್ರಯೇಲ್ ಜನಾಂಗವೇ ಕೇಳು; ನಿನ್ನ ದೇವರಾದ ಸರ್ವೇಶ್ವರ ಸ್ವಾಮಿ ಒಬ್ಬರೇ ದೇವರು.


ಈ ಕಾರಣ, ಯೇಸು ಹೊಸ ಒಡಂಬಡಿಕೆಯನ್ನು ಏರ್ಪಡಿಸಿದ ಮಧ್ಯಸ್ಥರಾಗಿದ್ದಾರೆ. ದೈವಕರೆ ಹೊಂದಿದವರು ದೇವರು ವಾಗ್ದಾನಮಾಡಿದ ಅಮರ ಸೌಭಾಗ್ಯವನ್ನು ಬಾಧ್ಯವಾಗಿ ಪಡೆಯುವಂತೆ ಈ ಒಡಂಬಡಿಕೆಯನ್ನು ಏರ್ಪಡಿಸಲಾಯಿತು. ಇದು ಯೇಸುವಿನ ಮರಣದ ಮೂಲಕವೇ ಉಂಟಾಯಿತು. ಈ ಮರಣವು ಹಳೆಯ ಒಡಂಬಡಿಕೆಯನ್ನು ಮೀರಿ ಮಾಡಿದ ಅಪರಾಧಗಳನ್ನೂ ಪರಿಹರಿಸುತ್ತದೆ.


ಯೇಸು, ಆ ಯಾಜಕರ ಸೇವೆಗಿಂತಲೂ ಶ್ರೇಷ್ಠವಾದ ಯಾಜಕಸೇವೆಯನ್ನು ಕೈಗೊಂಡಿದ್ದಾರೆ. ಯೇಸುವನ್ನು ಮಧ್ಯಸ್ಥರನ್ನಾಗಿ ಪಡೆದಿರುವ ಒಡಂಬಡಿಕೆಯು ಅಷ್ಟೇ ಶ್ರೇಷ್ಠವಾದುದು. ಏಕೆಂದರೆ ಅದು, ಹಿಂದಿನ ವಾಗ್ದಾನಗಳಿಗಿಂತಲೂ ಉತ್ತಮವಾದ ವಾಗ್ದಾನಗಳನ್ನು ಆಧರಿಸಿದೆ.


ನಮ್ಮಿಬ್ಬರ ನಡುವೆ ನಿರ್ಣಯಿಸತಕ್ಕವನು ಇಲ್ಲ ಮಧ್ಯಸ್ಥನಾಗಬಲ್ಲ ನ್ಯಾಯಾಧಿಪತಿ ಇಲ್ಲ.


ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ.


ದೇವರು ಅಬ್ರಹಾಮನೊಂದಿಗೆ ಮಾಡಿಮುಗಿಸಿದ ಒಪ್ಪಂದವನ್ನು ನಾನೂರ ಮೂವತ್ತು ವರ್ಷಗಳಾದ ಮೇಲೆ ಬಂದ ಧರ್ಮಶಾಸ್ತ್ರದಿಂದ ರದ್ದುಪಡಿಸಲಾಗದು; ಆ ವಾಗ್ದಾನವನ್ನು ವ್ಯರ್ಥಪಡಿಸಲಾಗದು.


ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ಹೆರೋದನು ಟೈರ್ ಮತ್ತು ಸಿದೋನಿನ ಜನರ ಮೇಲೆ ಕಡುಕೋಪಗೊಂಡಿದ್ದನು. ಅವರೆಲ್ಲರೂ ಒಟ್ಟಾಗಿ ಅವನನ್ನು ಸಂದರ್ಶಿಸಲು ಹೋದರು. ಮೊದಲು ಅರಮನೆಯ ಮೇಲ್ವಿಚಾರಕನಾದ ಬ್ಲಾಸ್ತನ ಮನಸ್ಸನ್ನು ತಮ್ಮ ಕಡೆ ಒಲಿಸಿಕೊಂಡರು. ಅನಂತರ ಅವರು ಹೆರೋದನೊಡನೆ ಸಂಧಾನಮಾಡಿಕೊಳ್ಳಲು ಯತ್ನಿಸಿದರು. ಏಕೆಂದರೆ, ಅವರು ದವಸಧಾನ್ಯಗಳಿಗಾಗಿ ಹೆರೋದನ ನಾಡನ್ನು ಅವಲಂಬಿಸಬೇಕಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು