Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:8 - ಕನ್ನಡ ಸತ್ಯವೇದವು C.L. Bible (BSI)

8 ಈ ವಿಶ್ವಾಸದ ಮೂಲಕವೇ ಅನ್ಯಧರ್ಮೀಯರನ್ನು ಕೂಡ ದೇವರು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ, ಎಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆಯಲಾಗಿತ್ತು. ಈ ಕಾರಣದಿಂದಲೇ ಅಬ್ರಹಾಮನಿಗೆ, “ನಿನ್ನ ಮುಖಾಂತರವೇ ಎಲ್ಲಾ ಜನಾಂಗಗಳು ಆಶೀರ್ವಾದವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಮುಂಚಿತವಾಗಿ ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರು ಅನ್ಯಜನರನ್ನು ನಂಬಿಕೆಯ ನಿವಿುತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬದಾಗಿ ಶಾಸ್ತ್ರವು ಮೊದಲೇ ಕಂಡು ಅಬ್ರಹಾಮನಿಗೆ - ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಶುಭವರ್ತಮಾನವನ್ನು ಮುಂಚಿತವಾಗಿಯೇ ತಿಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರು ಯೆಹೂದ್ಯರಲ್ಲದವರನ್ನು ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ. “ಅಬ್ರಹಾಮನೇ, ನಿನ್ನ ಮೂಲಕ ದೇವರು ಭೂಮಿಯ ಮೇಲಿರುವ ಜನರನ್ನೆಲ್ಲ ಆಶೀರ್ವದಿಸುತ್ತಾನೆ” ಎಂಬ ಸುವಾರ್ತೆಯನ್ನು ಅವನಿಗೆ ಮೊದಲೇ ತಿಳಿಸಲಾಯಿತೆಂದು ಪವಿತ್ರ ಗ್ರಂಥವು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಪವಿತ್ರ್ ಪುಸ್ತಕ್ ದೆವ್ ಜುದೆವ್ ನ್ಹಯ್ ಹೊತ್ತ್ಯಾಕ್ನಿ ವಿಶ್ವಾಸಾಚ್ಯಾ ವೈನಾ ನಿತಿವಂತ್ ಮನುನ್ ನಿರ್ನಯ್ ಕರ್‍ತಾ, ತೆಚ್ಯಾಸಾಟ್ನಿ ಪವಿತ್ರ್ ಪುಸ್ತಕ್ ಅಬ್ರಾಹಾಮಾಕ್ ಎಕ್ ಬರಿ ಖಬರ್ ಸಾಂಗ್ತಾ; “ತುಜ್ಯಾ ವೈನಾ ದೆವ್ ಸಗ್ಳ್ಯಾ ಬಾಶಾಂಚ್ಯಾ ಲೊಕಾಕ್ನಿ ಆಶಿರ್ವಾದ್ ದಿತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:8
25 ತಿಳಿವುಗಳ ಹೋಲಿಕೆ  

"ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”


ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.


ನಿನ್ನ ಸಂತತಿ ಭೂಮಿಯ ಧೂಳಿನಂತೆ ಅಸಂಖ್ಯ ಆಗುವುದು; ನೀನು ಪೂರ್ವಪಶ್ಚಿಮ - ದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವೆ. ನಿನ್ನ ಮುಖಾಂತರ ಹಾಗೂ ನಿನ್ನ ಸಂತತಿಯ ಮುಖಾಂತರ ಜಗದ ಎಲ್ಲ ರಾಷ್ಟ್ರಗಳೂ ಆಶೀರ್ವಾದ ಪಡೆಯುವುವು.


ನಿನ್ನ ತಂದೆ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿದನು; ನನ್ನ ಆಜ್ಞಾವಿಧಿಗಳನ್ನೂ ನೇಮನಿಯಮಗಳನ್ನೂ ಕೈಗೊಂಡು ನಡೆದನು. ಆದುದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುತ್ತೇನೆ.


ಅವನಿಂದ ಮಹಾ ಬಲಿಷ್ಠವಾದ ರಾಷ್ಟ್ರವೊಂದು ಹುಟ್ಟಬೇಕಾಗಿದೆ. ಅವನ ಮುಖಾಂತರ ಜಗದ ಎಲ್ಲ ರಾಷ್ಟ್ರಗಳಿಗೆ ನನ್ನ ಆಶೀರ್ವಾದ ದೊರಕಬೇಕಾಗಿದೆ.


ಶುಭವಾರ್ತೆಯನ್ನು ಅವರಿಗೆ ಸಾರಲಾದಂತೆ ನಮಗೂ ಸಾರಲಾಯಿತು. ಅವರು ಅದನ್ನು ಆಲಿಸಿದರು; ಆದರೆ ಅವರಲ್ಲಿ ವಿಶ್ವಾಸವಿರಲಿಲ್ಲ. ಈ ಕಾರಣ, ಅವರು ಕೇಳಿದ ಸಂದೇಶದಿಂದ ಫಲ ಪಡೆಯದೆ ಹೋದರು.


ಅದಕ್ಕೆ ಬದಲಾಗಿ ಸಮಸ್ತ ಲೋಕವೂ ಪಾಪಕ್ಕೆ ಒಳಗಾಯಿತು ಎಂದು ಪವಿತ್ರಗ್ರಂಥ ಸ್ಪಷ್ಟೀಕರಿಸುತ್ತದೆ. ಹೀಗೆ, ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.


ಹಾಗೆಯೇ, ದೇವರು ಅಬ್ರಹಾಮನಿಗೂ ಆತನ ಸಂತತಿಗೂ ವಾಗ್ದಾನಗಳನ್ನು ಮಾಡಿದರು. "ನಿನ್ನ ಸಂತತಿಗಳಿಗೆ" ಎಂದು ಹೇಳಿ ಅನೇಕರನ್ನು ಸೂಚಿಸದೆ “ನಿನ್ನ ಸಂತತಿಗೆ” ಎಂದು ಹೇಳಿ ಒಬ್ಬ ವ್ಯಕ್ತಿಯನ್ನೇ ಆ ವಾಗ್ದಾನದಲ್ಲಿ ಸೂಚಿಸಿದರು. ಆ ವ್ಯಕ್ತಿಯೇ ಕ್ರಿಸ್ತಯೇಸು.


ಪವಿತ್ರಗ್ರಂಥದಲ್ಲಿ ಹೇಳಿರುವಂತೆ, ‘ನನ್ನಲ್ಲಿ ವಿಶ್ವಾಸವಿಡುವವನ ಹೃದಯದಿಂದ ಜೀವಜಲ ಹೊನಲುಹೊನಲಾಗಿ ಹರಿಯುವುದು,’ “ ಎಂದು ಕೂಗಿ ಹೇಳಿದರು.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಇಸ್ರಯೇಲರಾದರೋ ದೇವರೊಡನೆ ಸತ್ಸಂಬಂಧವನ್ನು ದೊರಕಿಸುವ ಧರ್ಮವನ್ನು ಅರಸುತ್ತಿದ್ದರೂ ಅದನ್ನು ಕಂಡುಹಿಡಿದಿಲ್ಲ.


ಪವಿತ್ರಗ್ರಂಥದಲ್ಲಿ ಫರೋಹನಿಗೆ ಹೀಗೆಂದು ಹೇಳಲಾಗಿದೆ: “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ಪ್ರದರ್ಶಿಸುವ ಸಲುವಾಗಿ ಹಾಗು ಜಗತ್ತಿನಲ್ಲೆಲ್ಲಾ ನನ್ನ ಹೆಸರನ್ನು ಪ್ರಖ್ಯಾತಪಡಿಸಿಕೊಳ್ಳುವ ಸಲುವಾಗಿ ನಿನ್ನನ್ನು ಉನ್ನತಸ್ಥಾನಕ್ಕೆ ಏರಿಸಿದೆನು.


ಯಕೋಬನಿಂದ ಒಂದು ಸಂತಾನವನ್ನು ಉತ್ಪನ್ನಮಾಡುವೆನು; ಯೆಹೂದ ವಂಶದಿಂದ, ನನ್ನ ಪರ್ವತಗಳ ಸೊತ್ತಿಗೆ ಹಕ್ಕುಬಾಧ್ಯತೆಯುಳ್ಳ ಒಂದು ಸಂತತಿಯನ್ನು ಬರಮಾಡುವೆನು. ನನ್ನಿಂದ ಆಯ್ಕೆಯಾದವರು ಆ ಸೊತ್ತನ್ನು ಅನುಭವಿಸುವರು, ನನ್ನ ಭಕ್ತಾದಿಗಳು ಅಲ್ಲಿ ವಾಸಮಾಡುವರು.


ಪವಿತ್ರಗ್ರಂಥ ಹೇಳುವುದಾದರೂ ಏನು? “ದಾಸಿಯನ್ನೂ ಅವಳ ಮಗನನ್ನೂ ಹೊರಕ್ಕೆ ದೂಡು; ದಾಸಿಯ ಮಗನು ಧರ್ಮಪತ್ನಿಯ ಮಗನೊಂದಿಗೆ ಪಾಲುಗಾರನಾಗಕೂಡದು.” ಎಂದಲ್ಲವೇ?


‘ಆತ ದಾವೀದ ವಂಶಜನು; ಆತನು ಹುಟ್ಟುವುದು ದಾವೀದನ ಊರಾದ ಬೆತ್ಲೆಹೇಮಿನಲ್ಲಿ’ ಎಂದು ಪವಿತ್ರಗ್ರಂಥವೇ ಹೇಳಿದೆಯಲ್ಲವೆ?” ಎಂದು ವಾದಿಸಿದರು.


“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ I ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ II


‘ತಾವು ಇರಿದವನನ್ನೇ ಅವರು ನಿರೀಕ್ಷಿಸುವರು’ ಎನ್ನುತ್ತದೆ ಇನ್ನೊಂದು ವಾಕ್ಯ.


‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು