Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:1 - ಕನ್ನಡ ಸತ್ಯವೇದವು C.L. Bible (BSI)

1 ನಾನು ಮತ್ತೆ ಹೇಳುವುದೇನೆಂದರೆ; ವಾರಸುದಾರನು ತಂದೆಯ ಆಸ್ತಿಗೆಲ್ಲಾ ಹಕ್ಕುದಾರನಾಗಿದ್ದರೂ, ಅವನು ಬಾಲಕನಾಗಿರುವ ತನಕ ಅವನಿಗೂ ಆಳಿಗೂ ವ್ಯತ್ಯಾಸವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದರೆ ನಾನು ಹೇಳುವುದೇನಂದರೆ, ವಾರಸುದಾರನು, ತಾನು ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆಯೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದರೆ ನಾನು ಹೇಳುವದೇನಂದರೆ ಬಾಧ್ಯನು ತಾನು ಆಸ್ತಿಗೆಲ್ಲಾ ಧಣಿಯಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆ ಇರುವನೇ ಹೊರತು ಬೇರೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಮತ್ತೆ ಹೇಳುವುದೇನೆಂದರೆ: ಬಾಧ್ಯಸ್ತನು ಬಾಲಕನಾಗಿರುವಾಗ ಅವನಿಗೂ ಗುಲಾಮನಿಗೂ ಯಾವ ವ್ಯತ್ಯಾಸವೂ ಇಲ್ಲ. ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಅವನು ಗುಲಾಮನಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದರೆ ನಾನು ಹೇಳುವುದೇನೆಂದರೆ, ವಾರಸುದಾರನು ತಾನು ಇಡೀ ಆಸ್ತಿಗೆಲ್ಲಾ ಧಣಿಯಾಗಿದ್ದರೂ ಬಾಲಕನಾಗಿರುವ ತನಕ ಅವನಿಗೂ ದಾಸನಿಗೂ ವ್ಯತ್ಯಾಸವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅತ್ತಾ ಮಿಯಾ ಸಾಂಗ್ತಲೆ ಕಾಯ್ ಮಟ್ಲ್ಯಾರ್, ಎಕ್ ಹಕ್ಕ್ ದಾರ್ ಮಾನುಸ್ ಅಪ್ನಿ ಸಗ್ಳ್ಯಾ ಆಸ್ತಿಕ್ಬಿ ಧನಿ ಹೊವ್ನ್ ರ್‍ಹಾಲ್ಯಾರ್‍ಬಿ, ಬಾರಿಕ್ ರ್‍ಹಾತಾನಾ ತೆಕಾ ಅನಿ ಗುಲಾಮಾಕ್ ಕಾಯ್ಬಿ ಫರಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:1
9 ತಿಳಿವುಗಳ ಹೋಲಿಕೆ  

ಅಂದು ಪ್ರಕೃತಿಸಹಜವಾಗಿ ಹುಟ್ಟಿದವನು ದೇವರಾತ್ಮದಿಂದ ಹುಟ್ಟಿದವನನ್ನು ಹಿಂಸೆಪಡಿಸಿದಂತೆ ಇಂದೂ ನಡೆಯುತ್ತದೆ.


ದಾಸಿಯ ಮಗ ಪ್ರಕೃತಿ ಸಹಜವಾಗಿ ಹುಟ್ಟಿದವನು; ಧರ್ಮಪತ್ನಿಯ ಮಗನಾದರೋ ವಾಗ್ದಾನದ ಫಲವಾಗಿ ಹುಟ್ಟಿದವನು.


ಯೆಹೋಯಾದವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆಹೊಡೆದು, ‘ಅರಸನು ಚಿರಂಜೀವಿಯಾಗಿರಲಿ!’ ಎಂದು ಜಯಕಾರ ಮಾಡಿದರು.


ಯಾಜಕನಾದ ಯೆಹೋಯಾದವನು ಅವನಿಗೆ ಬೋಧಕನಾಗಿದ್ದನು. ಆಗ ಅವನು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.


ನೀವು ಕ್ರಿಸ್ತಯೇಸುವಿಗೆ ಸೇರಿದವರಾಗಿದ್ದರೆ ಅಬ್ರಹಾಮನ ಸಂತತಿಯೂ ಆಗಿದ್ದೀರಿ; ದೈವವಾಗ್ದಾನದ ಪ್ರಕಾರ ವಾರಸುದಾರರೂ ಆಗಿದ್ದೀರಿ.


ತಂದೆ ಗೊತ್ತುಮಾಡಿದ ದಿನದವರೆಗೂ ಅವನು ಪೋಷಕರ ಹಾಗೂ ಕಾರ್ಯನಿರ್ವಾಹಕರ ಕೈಕೆಳಗೆ ಇರುತ್ತಾನೆ.


ದೇವರ ಪುತ್ರನಲ್ಲಿ ವಿಶ್ವಾಸವಿಡುವವನು ಈ ಸಾಕ್ಷ್ಯವನ್ನು ತನ್ನ ಅಂತರಂಗದಲ್ಲೇ ಹೊಂದಿರುತ್ತಾನೆ. ದೇವರಲ್ಲಿ ವಿಶ್ವಾಸವಿಡದವನಾದರೋ ಅವರನ್ನು ಸುಳ್ಳುಗಾರರನ್ನಾಗಿಸುತ್ತಾನೆ. ಹೇಗೆಂದರೆ, ದೇವರು ತಮ್ಮ ಪುತ್ರನ ಪರವಾಗಿ ಕೊಟ್ಟ ಸಾಕ್ಷ್ಯದಲ್ಲಿ ಅವನಿಗೆ ನಂಬಿಕೆಯಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು