Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:19 - ಕನ್ನಡ ಸತ್ಯವೇದವು C.L. Bible (BSI)

19 ನನ್ನ ಪ್ರಿಯ ಮಕ್ಕಳೇ, ತಾಯಿ ತನ್ನ ಮಗುವಿಗಾಗಿ ಪ್ರಸವವೇದನೆಪಡುವ ಪ್ರಕಾರ ಕ್ರಿಸ್ತಯೇಸು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಿಮಗಾಗಿ ನಾನು ಮತ್ತೆ ಅಂಥ ವೇದನೆಯನ್ನು ಪಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ಪ್ರಿಯರಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಪ್ರಿಯವಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವವೇದನೆ ಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ಪ್ರಿಯ ಮಕ್ಕಳೇ, ಪ್ರಸವವೇದನೆಪಡುವ ತಾಯಿಯಂತೆ ನಾನು ನಿಮ್ಮ ವಿಷಯದಲ್ಲಿ ನೋವುಳ್ಳವನಾಗಿದ್ದೇನೆ. ನೀವು ನಿಜವಾಗಿಯೂ ಕ್ರಿಸ್ತನಂತಾಗುವ ತನಕ ನನಗೆ ಈ ನೋವಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನನ್ನ ಮಕ್ಕಳೇ, ಕ್ರಿಸ್ತ ಯೇಸುವು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಾನು ನಿಮಗಾಗಿ ಪುನಃ ಪ್ರಸವವೇದನೆ ಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಾಜ್ಯಾ ಪ್ರೆಮಾಚ್ಯಾ ಪೊರಾಂಚ್ಯಾ ಸಾರ್ಕೆ ಹೊತ್ತ್ಯಾ ಗಾಲಾತ್ಕಾರಾನು, ಪೊರ್ ಹೊತಾನಾ ತರಾಸ್ ಸೊಸ್ತಲ್ಯಾ ಅವ್ಸಿ ಸಾರ್ಕೆ ಮಿಯಾ ತುಮ್ಚ್ಯಾ ವಿಶಯಾತ್ ತರಾಸಾನ್ ಭರಲ್ಲೊ ಹಾಂವ್. ಕ್ರಿಸ್ತಾಚೊ ಸ್ವಬಾವ್ ತುಮ್ಚ್ಯಾ ಭುತ್ತುರ್ ದಿಸುನ್ ಯೆಯ್ ಪತರ್ ಮಾಕಾ ಅಸ್ಲ್ಯಾ ತರಾಸಾಚೊ ಅನ್ಭೊಗ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:19
28 ತಿಳಿವುಗಳ ಹೋಲಿಕೆ  

ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ.


ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ.


ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಇದು ದೇವರ ಅನುರೂಪದಲ್ಲಿ ನಿರ್ಮಿತವಾದ ಸ್ವಭಾವ; ದೇವರೊಂದಿಗೆ ಸತ್ಸಂಬಂಧವುಳ್ಳ ಹಾಗೂ ನೈಜವಾದ ಪಾವನ ಸ್ವಭಾವ.


ಕ್ರಿಸ್ತಯೇಸುವಿನ ಸೇವಕನೂ ನಿಮ್ಮ ಸಭೆಗೆ ಸೇರಿದವನೂ ಆದ ಎಪಫ್ರನಿಂದಲೂ ನಿಮಗೆ ವಂದನೆಗಳು. ನೀವು ಮಾಡುವ ಎಲ್ಲಾ ಕಾರ್ಯಗಳಲ್ಲೂ ದೇವರ ಚಿತ್ತಕ್ಕೆ ವಿಧೇಯರಾಗಿ ಸ್ಥಿರ ಹಾಗೂ ಸಿದ್ಧ ಕ್ರೈಸ್ತರಾಗಿ ಬಾಳಬೇಕೆಂದು ಅವನು ನಿಮಗಾಗಿ ಸದಾ ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದಾನೆ.


ಮಾತ್ರವಲ್ಲ, ನೂತನ ಸ್ವಭಾವವನ್ನು ಧರಿಸಿಕೊಂಡಿದ್ದೀರಿ. ನೀವು ಸೃಷ್ಟಿಕರ್ತನನ್ನು ಸಂಪೂರ್ಣವಾಗಿ ಅರಿತುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಸ್ವಭಾವವನ್ನು ಅನುದಿನವೂ ನವೀಕರಿಸಲಾಗುತ್ತಿದೆ.


ಕ್ರಿಸ್ತಯೇಸುವಿನಲ್ಲಿರುವ ಮನೋಭಾವ ನಿಮ್ಮಲ್ಲೂ ನೆಲಸಿರಲಿ:


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ಇವನು ಯೇಸುವಿನಲ್ಲಿ ನನ್ನ ಸ್ವಂತ ಮಗನಂತಿದ್ದಾನೆ. ಸೆರೆಮನೆಯಲ್ಲೇ ನಾನು ಅವನನ್ನು ಆಧ್ಯಾತ್ಮಿಕವಾಗಿ ಪಡೆದೆನು.


ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ಹಾಗೂ ನನ್ನ ನೇರ ಪರಿಚಯ ಇಲ್ಲದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆಂಬುದನ್ನು ತಿಳಿಸಬಯಸುತ್ತೇನೆ.


ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ.


ಕ್ರಿಸ್ತಯೇಸುವಿನಲ್ಲಿರುವ ಉತ್ಕಟ ಪ್ರೀತಿಯಿಂದಲೇ ನಾನು ನಿಮ್ಮೆಲ್ಲರಿಗಾಗಿ ಹಂಬಲಿಸುತ್ತಿದ್ದೇನೆ; ಇದಕ್ಕೆ ದೇವರೇ ಸಾಕ್ಷಿ.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


ಪ್ರಿಯ ಮಕ್ಕಳೇ, ಮಿಥ್ಯ ದೇವರುಗಳಿಂದ ನೀವು ದೂರವಿರಿ.


ಬರೆಯುತಿಹೆನು ಪ್ರಿಯಮಕ್ಕಳಿರಾ, ಇದನ್ನು ಏಕೆನೆ, ಕ್ರಿಸ್ತನಾಮದ ನಿಮಿತ್ತ ಕ್ಷಮಿಸಲಾಯಿತು ನಿಮ್ಮ ಪಾಪಗಳನ್ನು.


ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ಅದನ್ನು ಪೌಲನೆಂಬ ನಾನೇ ಕೊಟ್ಟು ತೀರಿಸುತ್ತೇನೆ ಎಂದು ನನ್ನ ಹಸ್ತಾಕ್ಷರದಲ್ಲೇ ಬರೆದುಕೊಡುತ್ತಿದ್ದೇನೆ. ಆದರೆ ಈಗ ನೀನು ಏನಾಗಿದ್ದೀಯೋ ಅದು ನನ್ನಿಂದಲೇ. ಹೀಗೆ ನೀನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಹೇಳಬೇಕಾಗಿಲ್ಲ.


ನಮ್ಮ ಉದ್ಧಾರಕರಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತಯೇಸುವಿನ ಆಜ್ಞಾನುಸಾರ, ನಾನು ಕ್ರಿಸ್ತಯೇಸುವಿನ ಪ್ರೇಷಿತನಾಗಿದ್ದೇನೆ. ಪಿತನಾದ ದೇವರೂ ನಮ್ಮ ಪ್ರಭುವಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ!


ಕಡುಯಾತನೆಯಲ್ಲಿದ್ದ ಅವರು ಇನ್ನೂ ಶ್ರದ್ಧೆಯಿಂದ ಪ್ರಾರ್ಥಿಸಿದರು. ಅವರ ಬೆವರು ರಕ್ತದ ಹನಿಯಂತೆ ತೊಟ್ಟುತೊಟ್ಟಾಗಿ ನೆಲದ ಮೇಲೆ ಬೀಳುತ್ತಿತ್ತು.


ಇಗೋ ಮೂರನೆಯ ಬಾರಿಗೆ ನಾನು ನಿಮ್ಮ ಬಳಿಗೆ ಬರಲು ಸಿದ್ಧನಿದ್ದೇನೆ. ಈ ಸಾರಿಯೂ ನಾನು ನಿಮಗೆ ಹೊರೆಯಾಗಿರಲಾರೆ. ನನಗೆ ಬೇಕಾದವರು ನೀವೇ ಹೊರತು ನಿಮ್ಮ ಹಣಕಾಸು ಅಲ್ಲ. ಮಕ್ಕಳು ಹೆತ್ತವರಿಗಾಗಿ ಅಲ್ಲ, ಹೆತ್ತವರು ಮಕ್ಕಳಿಗಾಗಿ ಆಸ್ತಿಪಾಸ್ತಿಯನ್ನು ಕೂಡಿಡುವುದು ನ್ಯಾಯ.


ತಾಯಿ ತನ್ನ ಮಕ್ಕಳನ್ನು ಸಾಕಿಸಲಹುವಂತೆಯೇ, ನಾವು ನಿಮ್ಮನ್ನು ವಾತ್ಸಲ್ಯದಿಂದ ಕಂಡೆವು.


ನನ್ನ ಪ್ರಿಯಮಕ್ಕಳು ಸತ್ಯಸಂಧರಾಗಿ ನಡೆಯುತ್ತಿದ್ದಾರೆಂದು ಕೇಳುವುದಕ್ಕಿಂತ ಮಿಗಿಲಾದ ಆನಂದ ನನಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು