Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:26 - ಕನ್ನಡ ಸತ್ಯವೇದವು C.L. Bible (BSI)

26 ಆದರೆ ಸ್ವರ್ಗೀಯ ಜೆರುಸಲೇಮ್ ದಾಸಿ ಅಲ್ಲ, ಸ್ವತಂತ್ರಳು, ಈಕೆಯೇ ನಮ್ಮ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ಪರಲೋಕದಲ್ಲಿರುವ ಜೆರುಸಲೇಮ್ ಸ್ವತಂತ್ರಳಾದ ಸ್ತ್ರೀಯಂತಿದೆ. ಇದೇ ನಮ್ಮ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ಸ್ವರ್ಗೀಯ ಯೆರೂಸಲೇಮ್ ಸ್ವತಂತ್ರಳು. ಈಕೆಯೇ ನಮ್ಮ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಖರೆ ಸರ್ಗಾತ್ಲೆ ಜೆರುಜಲೆಮ್ ಸ್ವತಂತ್ರ್ ಹೊಲ್ಲ್ಯಾ ಬಾಯ್ಕೊಮಾನ್ಸಿ ಸರ್ಕೆ ಹಾಯ್, ತಿಚ್ ಅಮ್ಚಿ ಬಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:26
27 ತಿಳಿವುಗಳ ಹೋಲಿಕೆ  

ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;


ನಾವಾದರೋ ಸ್ವರ್ಗಸಾಮ್ರಾಜ್ಯದ ಪ್ರಜೆಗಳು, ಉದ್ಧಾರಕರಾದ ಪ್ರಭು ಯೇಸುಕ್ರಿಸ್ತರು ಪುನರಾಗಮಿಸುವುದು ಅಲ್ಲಿಂದಲೇ ಎಂದು ಎದುರುನೋಡುತ್ತಿದ್ದೇವೆ.


ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು.


ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


“ಜೆರುಸಲೇಮನ್ನು ಪ್ರೀತಿಸುವವರೇ, ನೀವೆಲ್ಲರೂ ಆನಂದಿಸಿರಿ ಆಕೆಯೊಂದಿಗೆ, ಹರ್ಷಗೊಳ್ಳಿರಿ ಆಕೆಯ ಬಗ್ಗೆ.


ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು: ಒಬ್ಬನು ದಾಸಿಯಿಂದ ಹುಟ್ಟಿದವನು; ಇನ್ನೊಬ್ಬನು ಧರ್ಮಪತ್ನಿಯಿಂದ ಹುಟ್ಟಿದವನು.


ಪಾಪಬಂಧನದಿಂದ ಬಿಡುಗಡೆ ಹೊಂದಿ ದೇವಸಂಬಂಧಕ್ಕೆ ಒಳಗಾದಿರಿ.


ಏಕೆಂದರೆ ಪಾಪವು ಇನ್ನೆಂದಿಗೂ ನಿಮ್ಮ ಮೇಲೆ ದಬ್ಬಾಳಿಕೆ ನಡೆಸಲಾಗದು; ನೀವಿನ್ನು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ದೈವಾನುಗ್ರಹಕ್ಕೆ ಮಾತ್ರ ಅಧೀನರು.


ಪುತ್ರನು ನಿಮಗೆ ಸ್ವಾತಂತ್ರ್ಯ ನೀಡಿದರೆ, ನೀವು ನಿಜವಾಗಿಯೂ ಸ್ವತಂತ್ರರು.


“ಇಸ್ರಯೇಲರೇ, ಕೇಳಿ, ಪವಿತ್ರಪರ್ವತವಾದ ಸಿಯೋನಿನಲ್ಲಿ ನೆಲೆಯಾಗಿರುವ ನಿಮ್ಮ ಸರ್ವೇಶ್ವರಸ್ವಾಮಿ ದೇವರು ನಾನೇ ಎಂದು ಆಗ ನಿಮಗೆ ಮನದಟ್ಟಾಗುವುದು. ಜೆರುಸಲೇಮ್ ಪುಣ್ಯಕ್ಷೇತ್ರವೆನಿಸಿಕೊಳ್ಳುವುದು. ಪರಕೀಯರು ಅದನ್ನೆಂದಿಗೂ ಆಕ್ರಮಿಸರು.


ನಾನು ಮಾಡುವ ಸೃಷ್ಟಿಕಾರ್ಯದಲ್ಲೇ ಸಂತೋಷಿಸಿ, ಎಂದೆಂದಿಗೂ ಆನಂದಿಸಿರಿ : ಹೌದು, ನಾನು ಜೆರುಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಸುವೆನು; ಅದರ ಜನರನ್ನು ಹರ್ಷಭರಿತರನ್ನಾಗಿಸುವೆನು.


ಹಗಲಿನಲ್ಲೇ ನೀವು ಮುಗ್ಗರಿಸುತ್ತೀರಿ. ರಾತ್ರಿಯಲ್ಲಿ ಪ್ರವಾದಿಗಳು ಸಹ ನಿಮ್ಮೊಂದಿಗೆ ಮುಗ್ಗರಿಸುತ್ತಾರೆ. ನಿಮ್ಮ ವಂಶವೃಕ್ಷವನ್ನೇ ನಾನು ನಿರ್ಮೂಲಮಾಡುವೆನು.


ಅವರ ತಾಯಿ ವೇಶ್ಯೆಯಾಗಿದ್ದಾಳೆ. ಲಜ್ಜೆಗೆಟ್ಟ ಹೆಂಗಸಾಗಿ ವರ್ತಿಸಿದ್ದಾಳೆ. ‘ನನಗೆ ಅನ್ನಪಾನ, ಉಣ್ಣೆ ಉಡಿಗೆ, ಎಣ್ಣೆತೈಲ, ಪಾಯಸಪಾನಕಗಳನ್ನು ಕೊಡುವಂಥ ನಲ್ಲರ ಹಿಂದೆ ಹೋಗುವೆನು’ ಎಂದುಕೊಂಡಿದ್ದಾಳೆ.


ಮಕ್ಕಳೇ, ವಾದಿಸಿರಿ; ನಿಮ್ಮ ತಾಯಿಯೊಡನೆ ವಾದಿಸಿರಿ. ಅವಳು ನನ್ನ ಪತ್ನಿಯಲ್ಲ, ನಾನು ಅವಳ ಪತಿಯಲ್ಲ. ತನ್ನ ಮುಖದಿಂದ ವೇಶ್ಯಾಚಾರದ ಸೋಗನ್ನೂ ಸ್ತನಮಧ್ಯದಿಂದ ವ್ಯಭಿಚಾರದ ಬೆಡಗನ್ನೂ ತ್ಯಜಿಸಲಿ.


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


ಸ್ವತಂತ್ರರಂತೆ ಬಾಳಿರಿ; ಆದರೆ ಕೆಟ್ಟತನವನ್ನು ಮರೆಮಾಚಲು ನಿಮ್ಮ ಸ್ವಾತಂತ್ರ್ಯವನ್ನು ದುರುಪಯೋಗಮಾಡಿಕೊಳ್ಳಬೇಡಿ; ದೇವರಿಗೆ ದಾಸರಾಗಿ ಬಾಳಿರಿ.


ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತಯೇಸು ನಮ್ಮನ್ನು ಬಿಡುಗಡೆಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ.


ಜೆರುಸಲೇಮಿನ ಹಾಳುಬಿದ್ದ ಪ್ರದೇಶಗಳೇ, ಜಯಕಾರಮಾಡಿ ತಟ್ಟನೆ, ಹಾಡಿರಿ ಒಟ್ಟಿಗೆ, ಬಿಡುಗಡೆ ಮಾಡಿರುವನು ಸರ್ವೇಶ್ವರ ಜೆರುಸಲೇಮನು ತಂದಿರುವನು ತನ್ನ ಜನರಿಗೆ ಸಮಾಧಾನವನು.


ಅವಳ ಹಣೆಯ ಮೇಲೆ : ಬಾಬಿಲೋನ್ ಮಹಾನಗರಿ ವೇಶ್ಯೆಯರ ಮಹಾತಾಯಿ ಜಗತ್ತಿನ ದುರ್ನಡತೆಗಳ ಜನನಿ,” ಎಂಬ ನಿಗೂಢವಾದ ಹೆಸರಿತ್ತು.


ಅರೇಬಿಯಾದಲ್ಲಿರುವ ಸೀನಾಯ್ ಪರ್ವತವನ್ನು ಪ್ರತಿನಿಧಿಸುವ ಈ ಹಾಗರಳು ಈಗಿನ ಜೆರುಸಲೇಮ್ ನಗರವನ್ನು ಹೋಲುತ್ತಾಳೆ. ಹೇಗೆಂದರೆ, ಜೆರುಸಲೇಮ್ ತನ್ನ ಮಕ್ಕಳ ಸಮೇತವಾಗಿ ದಾಸತ್ವದಲ್ಲಿ ಇದೆ.


ಆಕಾಶದಲ್ಲಿ ಚಿಹ್ನೆಯೊಂದು ಕಾಣಿಸಿಕೊಂಡಿತು. ಮಹಿಳೆಯೊಬ್ಬಳು ಸೂರ್ಯಭೂಷಿತಳಾಗಿದ್ದಳು. ಆಕೆಯ ಪಾದದಡಿ ಚಂದ್ರನಿದ್ದನು. ತಲೆಯ ಮೇಲೆ ಹನ್ನೆರಡು ನಕ್ಷತ್ರ ಖಚಿತವಾದ ಕಿರೀಟವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು