Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:6 - ಕನ್ನಡ ಸತ್ಯವೇದವು C.L. Bible (BSI)

6 ನೀವು ದೇವರ ಮಕ್ಕಳಾಗಿರುವುದರಿಂದಲೇ, “ಅಪ್ಪಾ, ತಂದೆಯೇ,” ಎಂದು ಕರೆಯುವ ತಮ್ಮ ಪುತ್ರನ ಆತ್ಮವನ್ನು ದೇವರು ನಮ್ಮ ಹೃದಯಗಳಿಗೆ ಕಳುಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಪುತ್ರರಾಗಿರುವುದರಿಂದ ದೇವರು, “ಅಪ್ಪಾ ತಂದೆಯೇ” ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ಪುತ್ರರಾಗಿರುವದರಿಂದ ದೇವರು ಅಪ್ಪಾ ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ದೇವರ ಮಕ್ಕಳು. ಆದಕಾರಣವೇ ದೇವರು ತನ್ನ ಆತ್ಮವನ್ನು ನಿಮ್ಮ ಹೃದಯಗಳಿಗೆ ಕಳುಹಿಸಿದನು. “ತಂದೆಯೇ, ಅಪ್ಪಾ ತಂದೆಯೇ” ಎಂದು ಆತ್ಮನು ಕೂಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ದೇವರ ಪುತ್ರರಾಗಿರುವುದರಿಂದ, ದೇವರು ತಮ್ಮ ಪುತ್ರ ಆಗಿರುವವರ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿ, “ಅಪ್ಪಾ ತಂದೆಯೇ!” ಎಂದು ಕರೆಯುವಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತುಮಿ ತೆಚಿ ಲೆಕಾ ಅನಿ ಲೆಕಿಯಾ ಮನುನ್ ದಾಕ್ವುಸಾಟ್ನಿ ದೆವಾನ್ ಅಪ್ನಾಚ್ಯಾ ಲೆಕಾಚೊ ಆತ್ಮೊ ಅಮ್ಚ್ಯಾ ಮನಾತ್ ಧಾಡ್ಲ್ಯಾನ್ ತೊ ಆತ್ಮೊ “ಅಬ್ಬಾ! ಬಾಬಾ!” ಮನುನ್ ಬಲ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:6
30 ತಿಳಿವುಗಳ ಹೋಲಿಕೆ  

ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.


ನಿಮ್ಮಲ್ಲಿ ನಿಜವಾಗಿಯೂ ದೇವರ ಆತ್ಮವು ನೆಲಸಿದ್ದರೆ ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಜೀವಿಸದೆ ಪವಿತ್ರಾತ್ಮ ಅವರ ಚಿತ್ತಕ್ಕೆ ಅನುಸಾರವಾಗಿ ಜೀವಿಸುತ್ತೀರಿ. ಯಾರಲ್ಲಿ ಕ್ರಿಸ್ತಯೇಸುವಿನ ಆತ್ಮ ಇಲ್ಲವೋ ಅಂಥವನು ಕ್ರಿಸ್ತಯೇಸುವಿಗೆ ಸೇರಿದವನಲ್ಲ.


ಹೌದು, ನನಗದು ತುಂಬಾ ಸಂತೋಷದ ವಿಷಯ. ನಿಮ್ಮ ಪ್ರಾರ್ಥನಾ ಫಲದಿಂದಲೂ ಯೇಸುಕ್ರಿಸ್ತರು ಕೊಡುವ ಆತ್ಮದ ನೆರವಿನಿಂದಲೂ ನನಗೆ ಬಿಡುಗಡೆ ಖಚಿತವೆಂದು ಬಲ್ಲೆ.


ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾರ್ಗವಾಯಿತು.


ಈ ವಾಕ್ಯದಲ್ಲಿ, ‘ಪ್ರಭು’ ಎಂದರೆ ದೇವರ ಆತ್ಮವೇ. ಪ್ರಭುವಿನ ಆತ್ಮ ಎಲ್ಲಿದೆಯೋ ಅಲ್ಲಿ ವಿಮೋಚನೆಯೂ ಇದೆ.


ದೇವರ ಪವಿತ್ರಾತ್ಮರನ್ನು ನೋಯಿಸದಿರಿ; ವಿಮೋಚನೆಯ ದಿನದಂದು ನೀವು ದೇವರಿಗೆ ಸೇರಿದವರು ಎಂಬುದನ್ನು ತೋರಿಸಲು ನಿಮ್ಮ ಮೇಲೆ ಒತ್ತಲಾಗಿರುವ ಮುದ್ರೆಯು ಅವರೇ.


ಪ್ರಿಯರೇ, ನೀವಾದರೋ ಅತಿ ಪರಿಶುದ್ಧ ವಿಶ್ವಾಸದ ಆಧಾರದ ಮೇಲೆ ನಿರ್ಮಿಸಲಾದ ಮಂದಿರದಂತೆ ಪ್ರವರ್ಧಿಸಿರಿ; ಪವಿತ್ರಾತ್ಮ ಅವರಿಂದ ಪ್ರೇರಿತರಾಗಿ ಪ್ರಾರ್ಥಿಸಿರಿ.


ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ.


ನಾನೂ ಪಿತನನ್ನು ಕೇಳಿಕೊಳ್ಳುವೆನು; ಅವರು ನಿಮಗೆ ಬೇರೊಬ್ಬ ಪೋಷಕರನ್ನು ಕೊಡುವರು. ಇವರು ನಿಮ್ಮೊಡನೆ ಯಾವಾಗಲೂ ಇರುವರು.


ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”


ಅವರೇ ನಮ್ಮ ಮೇಲೆ ತಮ್ಮ ಮುದ್ರೆಯನ್ನೊತ್ತಿ ನಮ್ಮ ಅಂತರಂಗದಲ್ಲಿ ಪವಿತ್ರಾತ್ಮ ಅವರನ್ನು ಖಾತರಿಯಾಗಿ ಇರಿಸಿದ್ದಾರೆ.


ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು.


ನಿಮ್ಮ ಪವಿತ್ರನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ.


ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.


“ಈಗತಾನೆ. ‘ನೀವೆ ನನ್ನ ತಂದೆ, ನನ್ನ ಯೌವನದ ಆಪ್ತರು’ ಎಂದು ಕರೆಯುತ್ತಿರುವೆ.


ಕ್ರಿಸ್ತಯೇಸು ಅನುಭವಿಸಬೇಕಾಗಿದ್ದ ಮರಣವನ್ನು, ಯಾತನೆಯನ್ನು ಮತ್ತು ಅನಂತರದ ಪುನರುತ್ಥಾನದ ಮಹಿಮೆಯನ್ನು ಈ ಪ್ರವಾದಿಗಳು ಪ್ರವಾದಿಸುವಾಗ, ತಮ್ಮಲ್ಲಿದ್ದ ಕ್ರಿಸ್ತಾತ್ಮವು ಇದಕ್ಕೆ ಯಾವ ಸಮಯ ಸಂದರ್ಭವನ್ನು ಸೂಚಿಸುತ್ತದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಿದರು.


ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಎಲೈ ಇಸ್ರಯೇಲ್, ನಾನು ಎಷ್ಟೋ ಆದರದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು, ಅಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು ‘ತಂದೆ’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆಯೆಂದಿದ್ದೆ.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ಧಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ.


ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ.


ಮೂಸಿಯದ ಗಡಿಯನ್ನು ತಲುಪಿದಾಗ ಅವರು ಬಿಥೂನಿಯ ಪ್ರಾಂತ್ಯಕ್ಕೆ ಹೋಗಲು ಯತ್ನಿಸಿದರು. ಯೇಸುವಿನ ಆತ್ಮ ಅಲ್ಲಿಗೆ ಹೋಗಲು ಸಹ ಅವರನ್ನು ಬಿಡಲಿಲ್ಲ.


ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ.


ಅನಂತರ, “ಅಪ್ಪಾ, ಪಿತನೇ, ನಿಮಗೆ ಎಲ್ಲವೂ ಸಾಧ್ಯ. ಈ ಕಷ್ಟದ ಕೊಡವನ್ನು ನನ್ನಿಂದ ತೆಗೆದುಬಿಡಿ. ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತವಿದ್ದಂತೆಯೇ ಆಗಲಿ,” ಎಂದರು.


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು