Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:10 - ಕನ್ನಡ ಸತ್ಯವೇದವು C.L. Bible (BSI)

10 ಭಿನ್ನಾಭಿಪ್ರಾಯಗಳಿಗೆ ನೀವು ಮಣಿಯುವುದಿಲ್ಲವೆಂದು ನಿಮ್ಮನ್ನು ಕುರಿತು ಪ್ರಭುವಿನಲ್ಲಿ ನನಗೆ ದೃಢವಾದ ನಂಬಿಕೆ ಇದೆ. ನಿಮ್ಮಲ್ಲಿ ಗೊಂದಲ ಎಬ್ಬಿಸುವವನು ಯಾರೇ ಆಗಿರಲಿ, ಅವನು ದೈವದಂಡನೆಗೆ ಗುರಿಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗುವುದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತಾಗಿ ನನಗೆ ಭರವಸೆ ಉಂಟು. ನಿಮ್ಮಲ್ಲಿ ಬೇಧವನ್ನು ಹುಟ್ಟಿಸುವವನು ಯಾವನಾದರೂ ಸರಿಯೇ, ಅವನು ದಂಡನೆಯನ್ನು ಅನುಭವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನಗಂತೂ ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ಭರವಸ ಉಂಟು. ನಿಮ್ಮಲ್ಲಿ ಭೇದವನ್ನು ಹುಟ್ಟಿಸುವವನು ಯಾವನಾದರೂ ಸರಿಯೇ ಬರುವ ದಂಡನೆಯನ್ನು ಅನುಭವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಬೇರೆ ಅಭಿಪ್ರಾಯಗಳನ್ನು ನೀವು ನಂಬುವುದಿಲ್ಲವೆಂದು ಪ್ರಭುವಿನಲ್ಲಿ ನಿಮ್ಮನ್ನು ಕುರಿತು ಭರವಸೆಯಿಂದಿದ್ದೇನೆ. ಯಾರೊ ಒಬ್ಬನು ಆ ಅಭಿಪ್ರಾಯಗಳಿಂದ ನಿಮ್ಮನ್ನು ಗಲಿಬಿಲಿಗೊಳಿಸುತ್ತಿದ್ದಾನೆ. ಅವನು ಯಾರೇ ಆಗಿದ್ದರೂ ದಂಡನೆ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀವು ಬೇರೆ ರೀತಿಯಿಂದ ಯೋಚಿಸುವುದಿಲ್ಲವೆಂದು ಕರ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಇದೆ. ಆದರೆ ನಿಮ್ಮನ್ನು ತೊಂದರೆ ಪಡಿಸುವವನು ಯಾವನಾದರೂ ಸರಿ, ಅವನು ದಂಡನೆಯನ್ನು ಅನುಭವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ಅಜುನ್‍ಬಿ ಧನಿಯಾಚ್ಯಾ ಎಕ್ವಟ್ಟಾ ವೈನಾ ತುಮ್ಚ್ಯಾ ವಿಶಯಾತ್ ಮಾಕಾ ಬರೊಸೊ ಹಾಯ್, ಅಮ್ಚೊ ಜಿವ್ ತುಮಿ; ತ್ಯಾ ತುಮ್ಕಾ ಬೆಜಾರ್ ಕರ್‍ತಲ್ಯಾ ಮಾನ್ಸಾಚ್ಯಾ ದುಸ್ರ್ಯಾ ವಾಟೆನ್ ಜಯ್‌ನ್ಯಾಶಿ ಮನುನ್, ಮಿಯಾ ಬರೊಸೊ ಕರಿನಾ ಸಾರ್ಕೆ ಕರ್‍ತಾ. ತೊ ಕೊನ್‍ಬಿ ರ್‍ಹಾಂವ್ದಿತ್ ತೆಕಾ ದೆವಾಕ್ನಾ ಶಿಕ್ಷಾ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:10
28 ತಿಳಿವುಗಳ ಹೋಲಿಕೆ  

ನಿಮಗೆ ಕಿರುಕುಳ ಕೊಡುತ್ತಿರುವವರು ತಮ್ಮ ಅಂಗಚ್ಛೇದವನ್ನಾದರೂ ಮಾಡಿಕೊಂಡರೆ ಲೇಸು.


ನಮ್ಮಲ್ಲಿ ಪರಿಣತರಾದವರು ಈ ವಿಷಯದಲ್ಲಿ ಇದೇ ಮನೋಭಾವನೆಯಿಂದ ಇರಬೇಕು. ಯಾವುದಾದರೂ ಒಂದು ವಿಷಯದಲ್ಲಿ ನೀವು ಭಿನ್ನಾಭಿಪ್ರಾಯ ಉಳ್ಳವರಾಗಿದ್ದರೆ ದೇವರು ನಿಜಾಂಶವನ್ನು ಸ್ಪಷ್ಟೀಕರಿಸುವರು.


ವಾಸ್ತವವಾಗಿ, ಬೇರೆ ಯಾವ ಶುಭಸಂದೇಶವೂ ಇಲ್ಲ. ಆದರೆ ಕೆಲವರು ನಿಮ್ಮಲ್ಲಿ ಗೊಂದಲವೆಬ್ಬಿಸಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಮಾರ್ಪಡಿಸಲು ಯತ್ನಿಸುತ್ತಾ ಇದ್ದಾರೆ.


ಇದಕ್ಕಾಗಿಯೇ ನಾನು ಆ ಪತ್ರವನ್ನು ಬರೆದದ್ದು; ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮ ಸಂತೋಷವೆಂದು ನೀವು ಭಾವಿಸುತ್ತೀರೆಂದು ಬಲ್ಲೆ.


ಹುಮೆನಾಯನೂ ಅಲೆಗ್ಸಾಂಡರನೂ ಇದಕ್ಕೆ ನಿದರ್ಶನವಾಗಿದ್ದಾರೆ. ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನ ವಶಕ್ಕೆ ಒಪ್ಪಿಸಿಬಿಟ್ಟಿದ್ದೇನೆ.


ಇನ್ನು ಮೇಲೆ ಯಾರೂ ನನಗೆ ತೊಂದರೆ ಕೊಡದಿರಲಿ. ಯೇಸುವಿನ ದಾಸನೆಂದು ಸೂಚಿಸುವ ಕೆಂಗುರುತುಗಳು ನನ್ನ ದೇಹದಲ್ಲಿ ಮುದ್ರಿತವಾಗಿವೆ.


ಆ ನನ್ನ ವಿರೋಧಿಗಳು ನಿಮ್ಮನ್ನು ಮೆಚ್ಚಿಸಲು ತುಂಬ ಆಸಕ್ತಿಯನ್ನು ತೋರಿಸುತ್ತಿದ್ದಾರೆ. ಆದರೆ ಅವರ ಉದ್ದೇಶ ಒಳ್ಳೆಯದಲ್ಲ. ನೀವು ಸಹ ಅವರನ್ನು ಅಷ್ಟೇ ಆಸಕ್ತಿಯಿಂದ ಮೆಚ್ಚಿಸಬೇಕೆಂಬುದೇ ಅವರ ಉದ್ದೇಶ. ಆದ್ದರಿಂದಲೇ ನಿಮ್ಮನ್ನು ನನ್ನಿಂದ ಬೇರ್ಪಡಿಸಲು ಯತ್ನಿಸುತ್ತಿದ್ದಾರೆ.


ಎಲೈ ಮತಿಗೆಟ್ಟ ಗಲಾತಿಯರೇ, ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸುಕ್ರಿಸ್ತರು ಶಿಲುಬೆಯ ಮೇಲೆ ಪ್ರಾಣಾರ್ಪಣೆ ಮಾಡಿದ್ದನ್ನು ನಿಮ್ಮ ಕಣ್ಣೆದುರಿಗೇ ಚಿತ್ರಿತಗೊಳಿಸಲಿಲ್ಲವೆ?


ಅಲ್ಲಿದ್ದ ಗಣ್ಯವ್ಯಕ್ತಿಗಳು ಕೂಡ (ಅವರು ಹಿಂದೆ ಎಂಥವರಾಗಿದ್ದರು ಎಂಬುದು ನನಗೆ ಮುಖ್ಯವಲ್ಲ; ದೇವರು ಮುಖನೋಡಿ ಮಣೆ ಹಾಕುವವರಲ್ಲ) ನನಗೆ ಯಾವ ಹೊಸ ಸಲಹೆ ನೀಡಲಿಲ್ಲ.


ಗೂಢಾಚಾರರಾಗಿ ಬಂದಿದ್ದ ಕೆಲವು ಸಹೋದರರು ಅಲ್ಲಿದ್ದುದರಿಂದ ಒತ್ತಾಯ ನಡೆದೀತೆಂಬ ಶಂಕೆ ಇತ್ತು. ಇವರು ಕ್ರಿಸ್ತಯೇಸುವಿನಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯದ ಬಗ್ಗೆ ಗುಟ್ಟಾಗಿ ವಿಚಾರಿಸಲು ಬಂದಿದ್ದರು. ನಮ್ಮನ್ನು ಪುನಃ ದಾಸತ್ವದಲ್ಲಿ ಸಿಕ್ಕಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು.


ನೀವು ಸಂಪೂರ್ಣರಾಗಿ ವಿಧೇಯರಾದ ಮೇಲೆ ಪ್ರತಿಯೊಂದು ಅವಿಧೇಯ ಕೃತ್ಯವನ್ನು ಶಿಕ್ಷಿಸಲು ನಾವು ಹಿಂಜರಿಯೆವು.


ಅವನ ದೇಹವು ದಂಡನೆಗೊಳಗಾದರೂ ಅವನ ಆತ್ಮ ಪ್ರಭು ಯೇಸುವಿನ ದಿನದಂದು ಉದ್ಧಾರವಾಗುವಂತೆ ಹೀಗೆ ಮಾಡಬೇಕು.


ನಮ್ಮ ಕಡೆಯ ಕೆಲವು ಜನರು ನಮ್ಮಿಂದ ಯಾವ ಆದೇಶವನ್ನೂ ಪಡೆಯದೆ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮ ಮನಸ್ಸನ್ನು ಕಲಕಿದರೆಂಬ ಸಮಾಚಾರ ನಮ್ಮ ಗಮನಕ್ಕೆ ಬಂದಿದೆ.


ನನ್ನ ಕೋರಿಕೆಯನ್ನು ನೆರವೇರಿಸುವೆ ಎಂಬ ಭರವಸೆಯಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ. ನಾನು ಕೇಳಿದ್ದಕ್ಕಿಂತಲೂ ಹೆಚ್ಚಾಗಿಯೇ ಮಾಡುವೆಯೆಂದು ನನಗೆ ಗೊತ್ತಿದೆ.


ನಾವು ನಿಮಗಿತ್ತ ಆಜ್ಞೆಗಳನ್ನು ಪಾಲಿಸಿಕೊಂಡು ಬರುತ್ತಿದ್ದೀರಿ; ಇನ್ನು ಮುಂದೆಯೂ ಪಾಲಿಸುತ್ತೀರಿ ಎಂದು ನಿಮ್ಮ ವಿಷಯವಾಗಿ ಪ್ರಭುವಿನಲ್ಲಿ ನಮಗೆ ಭರವಸೆಯಿದೆ.


ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ವೈಖರಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ!


ನಿಮಗಾಗಿ ನಾನು ಪಟ್ಟ ಪ್ರಯಾಸವೆಲ್ಲ ವ್ಯರ್ಥವಾಯಿತೇನೋ ಎಂಬ ಶಂಕೆ ನನ್ನನ್ನು ಕಾಡುತ್ತಿದೆ.


ಆದ್ದರಿಂದಲೇ ನಿಮ್ಮ ಬಳಿಗೆ ಬರುವುದಕ್ಕೆ ಮುಂಚೆಯೇ ಇದನ್ನೆಲ್ಲಾ ಬರೆಯುತ್ತಿದ್ದೇನೆ. ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿಯೇ ಪ್ರಭು ನನಗೆ ಅಧಿಕಾರವನ್ನು ಕೊಟ್ಟಿರುವುದು. ಎಂದೇ, ನಿಮ್ಮ ಮಧ್ಯೆ ಬಂದಾಗ ಅಧಿಕಾರ ಪ್ರಯೋಗಿಸಿ ಕಠಿಣವಾಗಿ ವರ್ತಿಸಲು ಅವಕಾಶವಿರಬಾರದೆಂಬುದೇ ನನ್ನ ಅಪೇಕ್ಷೆ.


ನಾನು ನಿಮ್ಮ ಬಳಿಗೆ ಬಂದಾಗ, ಕಠಿಣನಾಗಿ ವರ್ತಿಸಲು ಅವಕಾಶ ಕೊಡಬೇಡಿ. ನಾವು ಪ್ರಾಪಂಚಿಕ ರೀತಿನೀತಿಗಳಿಗೆ ಅನುಗುಣವಾಗಿ ನಡೆಯುತ್ತಿದ್ದೇವೆಂದು ದೂಷಿಸುವವರ ವಿರುದ್ಧ ಖಂಡಿತವಾಗಿಯೂ ಕಠಿಣನಾಗಿಯೇ ವರ್ತಿಸಬೇಕೆಂದಿದ್ದೇನೆ.


ಇವರಿಬ್ಬರ ಸಂಗಡ ಮತ್ತೊಬ್ಬ ಸಹೋದರನನ್ನೂ ಕಳುಹಿಸುತ್ತಿದ್ದೇವೆ. ಈತನು ಆಸಕ್ತಿ ಉಳ್ಳವನೆಂದು ಅನುಭವದಿಂದ ಕಂಡುಕೊಂಡಿದ್ದೇವೆ. ನಿಮ್ಮಲ್ಲಿ ಪೂರ್ಣ ಭರವಸೆಯಿಟ್ಟು ನಿಮಗೆ ನೆರವಾಗಲು ಆತನು ಹೆಚ್ಚು ಉತ್ಸುಕನಾಗಿದ್ದಾನೆ.


ನಿಮ್ಮ ಮೇಲೆ ನನಗೆ ಪೂರ್ಣಭರವಸೆ ಇದೆ. ಇದೇ ನನ್ನ ಸಂತೋಷ.


ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.


ನಿಮ್ಮಲ್ಲಿ ಬಹುಮಂದಿ ಅವನಿಗೆ ವಿಧಿಸಿರುವ ಶಿಕ್ಷೆಯೇ ಸಾಕಾಗಿದೆ.


ಈ ನಂಬಿಕೆಯಿಂದಲೇ ನಿಮಗೆ ಇಮ್ಮಡಿ ಸಂತೋಷ ಲಭಿಸಬೇಕೆಂದು ನಾನು ನಿಮ್ಮ ಬಳಿಗೆ ಈ ಮುಂಚಿತವಾಗಿಯೇ ಬರಬೇಕೆಂದಿದ್ದೆ.


ಇದುವರೆಗೂ ನಿಮ್ಮ ಬದುಕಿನ ಓಟ ಚೆನ್ನಾಗಿ ಸಾಗುತ್ತಿತ್ತು. ಸತ್ಯಕ್ಕೆ ಶರಣರಾಗದಂತೆ ಈಗ ನಿಮ್ಮನ್ನು ತಡೆದವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು