Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:15 - ಕನ್ನಡ ಸತ್ಯವೇದವು C.L. Bible (BSI)

15 ಆದರೆ ನೀವು ನಿಮ್ಮ ಕಚ್ಚಾಟ, ಕಿತ್ತಾಟ, ನುಂಗಾಟ - ಇವುಗಳನ್ನು ನಿಲ್ಲಿಸದಿದ್ದರೆ ಒಬ್ಬರಿಂದೊಬ್ಬರು ವಿನಾಶವಾದೀರಿ ಎಚ್ಚರಿಕೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಾಡಿ, ಹರಕೊಂಡು, ತಿನ್ನುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ಹರಕೊಂಡು ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀವು ಒಬ್ಬರನ್ನೊಬ್ಬರು ಕಚ್ಚಿ ಹರಿದುಹಾಕಿ ನುಂಗುವುದಾದರೆ ಒಬ್ಬರಿಂದೊಬ್ಬರು ನಾಶವಾಗುತ್ತೀರಿ. ಆದ್ದರಿಂದ ಎಚ್ಚರಿಕೆಯಿಂದಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ತುಮಿ ಅಪಾಯ್ ಕರ್‍ತಲ್ಯಾ ಜನಾವರಾಂಚ್ಯಾ ಸಾರ್ಕೆ ದುಕ್ವುತಲೆ ಅನಿ ಎಕಾಮೆಕಾಕ್ ಅಪಾಯ್ ಕರ್ಲ್ಯಾಸಿ ತರ್ ಉಶ್ಯಾರ್‍ಕಿನ್ ರ್‍ಹಾವಾ! ಎಕಾಮೆಕಾಕ್ ಸತ್ತ್ಯಾನಾಸ್ ಹೊವ್ನ್ ಜಾತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:15
16 ತಿಳಿವುಗಳ ಹೋಲಿಕೆ  

ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ, ಸಾಧಾರಣ ಮನುಷ್ಯರಂತೆ ವರ್ತಿಸುತ್ತಿದ್ದೀರಲ್ಲವೆ?


ನಾವು ಅಹಂಕಾರಿಗಳಾಗಿರಬಾರದು; ಒಬ್ಬರನ್ನೊಬ್ಬರು ಕೆಣಕಬಾರದು; ಒಬ್ಬರ ಮೇಲೊಬ್ಬರು ಹೊಟ್ಟೆಕಿಚ್ಚು ಪಡಬಾರದು.


ನಿಮ್ಮ ಹೃದಯದಲ್ಲಿ ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ತುಂಬಿರುವಾಗ ಜ್ಞಾನಿಗಳೆಂದು ಕೊಚ್ಚಿಕೊಳ್ಳಬೇಡಿ; ಸತ್ಯಕ್ಕೆ ವಿರುದ್ಧವಾಗಿ ಸುಳ್ಳಾಡಬೇಡಿ.


ಯಾರಾದರೂ ನಿಮ್ಮನ್ನು ಅಧೀನಪಡಿಸಿಕೊಂಡರೂ ಕಬಳಿಸಿದರೂ ಮರುಳುಗೊಳಿಸಿದರೂ ತುಚ್ಛೀಕರಿಸಿದರೂ ಕೆನ್ನೆಗೆ ಬಿಗಿದರೂ ಎಲ್ಲವನ್ನೂ ಸಹಿಸಿಕೊಳ್ಳುತ್ತೀರಿ.


ನಾನು ನಿಮ್ಮಲ್ಲಿ ಬಂದಾಗ ಒಂದು ವೇಳೆ ನೀವು ನನ್ನ ನಿರೀಕ್ಷೆಗೆ ತಕ್ಕಂತೆ ಇರುವುದಿಲ್ಲವೇನೋ ಮತ್ತು ನಿಮ್ಮ ನಿರೀಕ್ಷೆಗೆ ತಕ್ಕಂತೆ ನಾನು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ನಿಮ್ಮಲ್ಲಿ ಜಗಳ, ದ್ವೇಷ, ಅಸೂಯೆ, ಸ್ವಾರ್ಥ, ಚಾಡಿಮಾತು, ಹರಟೆ, ಅಹಂಕಾರ, ಅನೀತಿ - ಇವುಗಳು ಇರಬಹುದೇನೋ ಎಂಬ ದಿಗಿಲೂ ನನಗಿದೆ.


ತೊಲಗುವುದು ಎಫ್ರಯಿಮಿನ ಹೊಟ್ಟೆಕಿಚ್ಚು, ನಿರ್ಮೂಲವಾಗುವುದು ಜುದೇಯದ ವೈರಿಗಳ ಒಳಸಂಚು. ಎಫ್ರಯಿಮ್, ಜುದೇಯವನ್ನು ಮತ್ಸರಿಸದು; ಜುದೇಯ, ಎಫ್ರಯಿಮನ್ನು ವಿರೋಧಿಸದು.


ನಿಮಗೆ ಸುನ್ನತಿಯಾಗಬೇಕೆಂದು ಬೋಧಿಸುವವರ ವಿಷಯದಲ್ಲಿ ಜಾಗರೂಕರಾಗಿರಿ. ಅವರು ದುಷ್ಕರ್ಮಿಗಳು, ಶ್ವಾನಗಳಿಗೆ ಸಮಾನರು.


ವಿಗ್ರಹಾರಾಧನೆ, ಮಾಟಮಂತ್ರ, ಹಗೆತನ, ಜಗಳ, ಹೊಟ್ಟೆಕಿಚ್ಚು, ಕ್ರೋಧ, ಸ್ವಾರ್ಥಭೇದ, ಪಕ್ಷಪಾತ, ಮತ್ಸರ, ಕುಡಿಕತನ, ದುಂದೌತಣ - ಇತ್ಯಾದಿಗಳು.


ಪ್ರಪಂಚದ ಪ್ರಬಲ ಶಕ್ತಿಗಳಿಂದಲೂ ಮಾನವ ವಿವೇಚನೆಯ ಶುಷ್ಕತರ್ಕ ಸಿದ್ಧಾಂತಗಳಿಂದಲೂ ಯಾರೂ ನಿಮ್ಮನ್ನು ಮೋಸಗೊಳಿಸಿ ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಇವುಗಳು ಪ್ರಾಪಂಚಿಕ ಪಾರಂಪರ್ಯಕ್ಕೆ ಮತ್ತು ವಿಶ್ವದ ಮೂಲಭೂತ ಶಕ್ತಿಗಳಿಗೆ ಸಂಬಂಧಿಸಿದವುಗಳೇ ಹೊರತು ಯೇಸುಕ್ರಿಸ್ತರಿಗಲ್ಲ.


ಅಬೀಮೆಲೆಕನೂ ಅವನ ಸಂಗಡ ಇದ್ದ ಗುಂಪಿನವರೂ ಓಡಿಬಂದು ಊರಬಾಗಿಲಲ್ಲಿ ನಿಂತರು; ಉಳಿದ ಎರಡು ಗುಂಪಿನವರು ಬೈಲಿನಲ್ಲಿದ್ದ ಶೆಕೆಮಿನವರ ಮೇಲೆ ಬಿದ್ದು ಅವರನ್ನು ಹತಮಾಡಿದರು.


ಒಂದು ಕುಟುಂಬದ ಸದಸ್ಯರು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ಕುಟುಂಬ ಬಾಳದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು