Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:17 - ಕನ್ನಡ ಸತ್ಯವೇದವು C.L. Bible (BSI)

17 ಏಕೆಂದರೆ, ದೈಹಿಕ ವ್ಯಾಮೋಹವು ಪವಿತ್ರಾತ್ಮರಿಗೆ ವಿರುದ್ಧವಾಗಿದೆ. ಪವಿತ್ರಾತ್ಮ ಆ ವ್ಯಾಮೋಹಕ್ಕೆ ವಿರುದ್ಧವಾಗಿದ್ದಾರೆ. ಇವೆರಡೂ ಒಂದಕ್ಕೊಂದು ಕಾದಾಡುವುದರಿಂದ ನಿಮ್ಮ ಬಯಕೆ ಕೈಗೂಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಏಕೆಂದರೆ ಶರೀರಾಭಿಲಾಷೆಯೂ ಆತ್ಮನಿಗೆ ವಿರುದ್ಧವಾಗಿದೆ, ಆತ್ಮನ ಅಭಿಲಾಷೆಯು ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಚಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾಕಂದರೆ ಶರೀರಭಾವವು ಅಭಿಲಾಷಿಸುವದು ಆತ್ಮನಿಗೆ ವಿರುದ್ಧವಾಗಿದೆ, ಆತ್ಮನು ಅಭಿಲಾಷಿಸುವದು ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಫಿಸುವದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಮ್ಮ ಶರೀರಭಾವವು ದೇವರಾತ್ಮನಿಗೆ ವಿರುದ್ಧವಾದ ಸಂಗತಿಗಳನ್ನು ಬಯಸುತ್ತದೆ. ದೇವರಾತ್ಮನು ನಮ್ಮ ಶರೀರಭಾವಕ್ಕೆ ವಿರುದ್ಧವಾದ ಸಂಗತಿಗಳನ್ನು ಬಯಸುತ್ತಾನೆ. ಆದ್ದರಿಂದ ನೀವು ನಿಜವಾಗಿಯೂ ಬಯಸುವಂಥವುಗಳನ್ನು ಮಾಡಲಾಗದಂತೆ ಅವು ಒಂದಕ್ಕೊಂದು ಹೋರಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ಮಾಂಸಭಾವವು ಆತ್ಮನಿಗೆ ವಿರುದ್ಧವಾಗಿಯೂ ಆತ್ಮನು ಮಾಂಸಭಾವಕ್ಕೆ ವಿರುದ್ಧವಾಗಿಯೂ ಆಶಿಸುತ್ತದೆ. ನೀವು ಮಾಡಬಯಸುವುದನ್ನು ಮಾಡದಂತೆ ಇವು ಒಂದಕ್ಕೊಂದು ವಿರೋಧವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಕಶ್ಯಾಕ್ ಮಟ್ಲ್ಯಾರ್ ಅಮ್ಚೊ ಮಾನ್ಸಾಚೊ ಸ್ವಬಾವ್ ಪವಿತ್ರ್ ಆತ್ಮ್ಯಾಕ್ ಪಾಜೆ ಹೊಲ್ಲೆ ಕರಿನಾ, ಅನಿ ಪವಿತ್ರ್ ಆತ್ಮೊ ಮಾನ್ಸಾಚ್ಯಾ ಸ್ವಬಾವಾಕ್ ವಿರೊದ್ ಅಸಲ್ಲೆ ಕರ್‍ತಾ, ತೆನಿ ದೊಗೆಬಿ ಎಕಾಮೆಕಾಕ್ ದುಶ್ಮನ್ , ಹೆಚ್ಯಾಸಾಟ್ನಿ ತುಮಿ ಕಾಯ್ ಕರುಚೆ ಮನುನ್ ಯವಜ್ತ್ಯಾಶಿ ತೆ ತುಮ್ಚ್ಯಾನ್ ಕರುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:17
35 ತಿಳಿವುಗಳ ಹೋಲಿಕೆ  

ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಬಾಳಿದರೆ ಖಂಡಿತವಾಗಿ ಸಾಯುವಿರಿ. ಪವಿತ್ರಾತ್ಮ ಅವರ ನೆರವಿನಿಂದ ದೈಹಿಕ ದುರಭ್ಯಾಸಗಳನ್ನು ದಮನಮಾಡಿದರೆ ಜೀವಿಸುವಿರಿ.


ಶರೀರದಿಂದ ಹುಟ್ಟಿದ್ದು ಶರೀರಮಯ, ದೇವರಿಂದ ಹುಟ್ಟಿದ್ದು ದೈವಮಯ.


ಪ್ರಲೋಭನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥನೆಮಾಡಿರಿ. ಆತ್ಮಕ್ಕೇನೊ ಆಸಕ್ತಿ ಇದೆ, ಆದರೆ ದೇಹಕ್ಕೆ ಶಕ್ತಿಸಾಲದು,” ಎಂದರು.


ನಿನ್ನ ವಿಧಿಗಳನೆ ಹಂಬಲಿಸುತಿರುವೆ ಅನುದಿನ I ಇದು ಕಾರಣ ಕರಗಿಹೋಗುತಿದೆ ಎನ್ನ ಚೇತನ II


ಪಾಪಮಾಡದೆ ಧರ್ಮವನ್ನೇ ಆಚರಿಸುವ ಸತ್ಪುರುಷ ಜಗದಲ್ಲಿ ಇಲ್ಲವೇ ಇಲ್ಲ.


ಹಿಡಿದಿರುವೆನು ನಿನ್ನ ಆಜ್ಞಾಮಾರ್ಗವನು I ಏಕೆನೆ ಹಿರಿದಾಗಿಸಿರುವೆ ನೀ ನನ್ನ ಅರಿವನು II


ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.


ಆದರೆ ಯೇಸು ಪೇತ್ರನತ್ತ ತಿರುಗಿ, “ಸೈತಾನನೇ, ತೊಲಗಿಲ್ಲಿಂದ; ನೀನು ನನಗೆ ಅಡೆತಡೆ; ನಿನ್ನ ಈ ಆಲೋಚನೆ ಮನುಷ್ಯರದ್ದೇ ಹೊರತು, ದೇವರದಲ್ಲ,” ಎಂದರು.


ಇದನ್ನು ಕಂಡು, “ನೀವು ನಿದ್ರಿಸುತ್ತೀರೇನು? ಎದ್ದು, ನೀವು ಪ್ರಲೋಭನೆಗೆ ಒಳಗಾಗದಂತೆ ಪ್ರಾರ್ಥನೆಮಾಡಿ,” ಎಂದರು.


ನನ್ನ ಪರವಾಗಿ ಇಲ್ಲದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.


ಹಾಗಾದರೆ, ಧರ್ಮಶಾಸ್ತ್ರ ದೇವರ ವಾಗ್ದಾನಕ್ಕೆ ವಿರುದ್ಧವಾಗಿದೆಯೆಂದು ಹೇಳೋಣವೇ? ಎಂದಿಗೂ ಇಲ್ಲ. ಸಜ್ಜೀವಗೊಳಿಸುವ ಶಕ್ತಿಯನ್ನು ಧರ್ಮಶಾಸ್ತ್ರ ಹೊಂದಿದ್ದರೆ ಅದನ್ನು ಅನುಸರಿಸುವುದರಿಂದ ನಿಸ್ಸಂದೇಹವಾಗಿ ದೇವರೊಡನೆ ಸತ್ಸಂಬಂಧ ದೊರಕುತ್ತಿತ್ತು.


ಅದಕ್ಕೆ ಪೇತ್ರನು, “ಗುರುದೇವಾ, ನಿಮ್ಮ ಸಂಗಡ ಸೆರೆಗೆ ಹೋಗುವುದಕ್ಕೂ ಸಾಯುವುದಕ್ಕೂ ಸಿದ್ಧನಿದ್ದೇನೆ,” ಎಂದನು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.


ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು.


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭು I ನಿನ್ನ ಮುಂದೆ ಯಾರುತಾನೆ ನಿಲ್ಲಬಲ್ಲರು ವಿಭು? II


ಪ್ರಭು, ದಾರಿತಪ್ಪಿದ ಕುರಿ ನಾನು I ಪರಾಂಬರಿಸು ನಿನ್ನ ದಾಸನನು I ಮರೆಯೆನು ನಿನ್ನಾಜ್ಞೆಗಳನು II


ನಿನ್ನ ನೇಮನಿಯಮಗಳು ಪ್ರಭು, ಎನಿತೋ ಪ್ರಿಯ I ಕಾಪಾಡೆನ್ನನು ನಿನ್ನ ಪ್ರೀತಿಗನುಸಾರ II


ನಿನ್ನ ನುಡಿಗನುಸಾರ ದೃಢಪಡಿಸು ನನ್ನ ನಡತೆಯನು I ಕೆಡುಕೊಂದೂ ಅಧೀನಪಡಿಸದಿರಲಿ ನನ್ನನು II


ನಿನ್ನ ನಿಬಂಧನೆಗಳ ಅಭಿಮಾನಿಯು ನಾನು I ನೀತಿಗನುಸಾರ ಚೇತನಗೊಳಿಸೆನ್ನ ನೀನು II


ಎನ್ನ ನಡೆಸು ನಿನ್ನ ಆಜ್ಞಾಮಾರ್ಗದಲಿ I ಪಡೆಯುವೆ ಹರ್ಷಾನಂದವನು ಅದರಲಿ II


ಪಾಪದ ಹೊರೆ ಹೊತ್ತವರು ನಾವಯ್ಯಾ I ಅವುಗಳ ಪರಿಹಾರಕನು ನೀನಯ್ಯಾ II


ಆಗ ಸರ್ವೇಶ್ವರ ಸ್ಸ್ವಾಮಿ, “ನನ್ನ ಆತ್ಮವು ಮನುಷ್ಯನಿಗೆ ಶಾಶ್ವತವಾಗಿ ಹೊಣೆಯಾಗಿರಲಾರದು. ಭ್ರಷ್ಟರಾದ ಅವರು ಮರ್ತ್ಯರು. ಅವರ ಆಯುಷ್ಯ ಕೇವಲ ನೂರಿಪ್ಪತ್ತು ವರ್ಷ ಇರಲಿ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು