Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:20 - ಕನ್ನಡ ಸತ್ಯವೇದವು C.L. Bible (BSI)

20 ವಿಗ್ರಹಾರಾಧನೆ, ಮಾಟಮಂತ್ರ, ಹಗೆತನ, ಜಗಳ, ಹೊಟ್ಟೆಕಿಚ್ಚು, ಕ್ರೋಧ, ಸ್ವಾರ್ಥಭೇದ, ಪಕ್ಷಪಾತ, ಮತ್ಸರ, ಕುಡಿಕತನ, ದುಂದೌತಣ - ಇತ್ಯಾದಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕಕ್ಷಭೇದ ಭಿನ್ನಮತ ಮತ್ಸರ ಕುಡಿಕತನ ದುಂದೌತಣ ಇಂಥವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸುಳ್ಳುದೇವರುಗಳ ಆರಾಧನೆ, ಮಾಟಮಂತ್ರ, ದ್ವೇಷ, ಜಗಳ, ಹೊಟ್ಟೆಕಿಚ್ಚು, ಕಡುಕೋಪ, ಸ್ವಾರ್ಥ, ಸಿಟ್ಟು, ಕಕ್ಷಭೇದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಸ್ವಾರ್ಥತ್ವ, ವಿರೋಧತ್ವ, ಭಿನ್ನತೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮುರ್ತಿಯಾಂಚಿ ಪುಜಾ, ಮಾಟ್ಮಂತರ್, ಲೊಕಾ ಎಕಾಮೆಕಾಕ್ ವೈರಿ ಹೊವ್ನ್ ಝಗಡ್ತಲೆ, ಕುಸ್ಡೆಪಾನ್, ರಾಗ್, ಅಸ್ಬುರ್ಕೆಪಾನ್, ಅನಿ ತೆನಿ ಎಕಾಮೆಕಾಕ್ ತಾಂಡೆ ಹೊವ್ನ್ ಎಗಾಳ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:20
17 ತಿಳಿವುಗಳ ಹೋಲಿಕೆ  

ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಇರುವುದು ಸಹಜ. ಹಾಗಿರುವಾಗಲೇ ಪ್ರಾಮಾಣಿಕರು ಯಾರೆಂದು ಕಂಡುಕೊಳ್ಳಲು ಸಾಧ್ಯ.


ಕ್ರೈಸ್ತಸಭೆಯಲ್ಲಿ ಭೇದಭಾವ ಹುಟ್ಟಿಸುವವನಿಗೆ ಒಂದೆರಡು ಸಾರಿ ಬುದ್ಧಿಹೇಳು. ಅನಂತರ ಅವನಷ್ಟಕ್ಕೇ ಬಿಟ್ಟುಬಿಡು.


ನೀವಾದರೋ ಮಹಾ ಬುದ್ಧಿವಂತರು! ಬುದ್ಧಿಹೀನರನ್ನು ಬಹಳವಾಗಿ ಸಹಿಸಿಕೊಳ್ಳುತ್ತೀರಿ.


ಮಕ್ಕಳನ್ನು ಆಹುತಿಕೊಡುವವರು, ಕಣಿಹೇಳುವವರು, ಶಕುನ ನೋಡುವವರು, ಯಂತ್ರಮಂತ್ರಗಳನ್ನು ಮಾಡುವವರು,


ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.


“ನರಪುತ್ರನೇ, ಇಸ್ರಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಅದೆಲ್ಲಾ ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ; ಅದು ಕಂದುಲೋಹ.


ಇದಲ್ಲದೆ, ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದನು; ಕಣಿ ಹೇಳಿಸುವುದು, ಶಕುನ ನೋಡಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪ ಬರಿಸಿದನು.


ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ. ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು,” ಎಂದು ನುಡಿದನು.


ಸ್ವಾರ್ಥಸಾಧಕರಾಗಿದ್ದು, ಸತ್ಯಕ್ಕೆ ಮಣಿಯದೆ, ದುರ್ಮಾರ್ಗವನ್ನೇ ಅವಲಂಬಿಸಿ ನಡೆಯುವವರ ಮೇಲೆ ದೇವರ ಕೋಪವೂ ಆಕ್ರೋಶವೂ ಎರಗುತ್ತವೆ.


ನಾನು ನಿಮ್ಮಲ್ಲಿ ಬಂದಾಗ ಒಂದು ವೇಳೆ ನೀವು ನನ್ನ ನಿರೀಕ್ಷೆಗೆ ತಕ್ಕಂತೆ ಇರುವುದಿಲ್ಲವೇನೋ ಮತ್ತು ನಿಮ್ಮ ನಿರೀಕ್ಷೆಗೆ ತಕ್ಕಂತೆ ನಾನು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ನಿಮ್ಮಲ್ಲಿ ಜಗಳ, ದ್ವೇಷ, ಅಸೂಯೆ, ಸ್ವಾರ್ಥ, ಚಾಡಿಮಾತು, ಹರಟೆ, ಅಹಂಕಾರ, ಅನೀತಿ - ಇವುಗಳು ಇರಬಹುದೇನೋ ಎಂಬ ದಿಗಿಲೂ ನನಗಿದೆ.


ಆದರೆ ನೀವು ನಿಮ್ಮ ಕಚ್ಚಾಟ, ಕಿತ್ತಾಟ, ನುಂಗಾಟ - ಇವುಗಳನ್ನು ನಿಲ್ಲಿಸದಿದ್ದರೆ ಒಬ್ಬರಿಂದೊಬ್ಬರು ವಿನಾಶವಾದೀರಿ ಎಚ್ಚರಿಕೆ!


ನಿಮ್ಮ ಹೃದಯದಲ್ಲಿ ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ತುಂಬಿರುವಾಗ ಜ್ಞಾನಿಗಳೆಂದು ಕೊಚ್ಚಿಕೊಳ್ಳಬೇಡಿ; ಸತ್ಯಕ್ಕೆ ವಿರುದ್ಧವಾಗಿ ಸುಳ್ಳಾಡಬೇಡಿ.


ತನ್ನ ಸಹೋದರರನ್ನು ದ್ವೇಷಿಸುವವನು ಕೊಲೆಗಾರನೇ ಹೌದು. ಯಾವ ಕೊಲೆಗಾರನಲ್ಲೂ ನಿತ್ಯಜೀವ ಇರದೆಂದು ನೀವು ಬಲ್ಲಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು