Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:21 - ಕನ್ನಡ ಸತ್ಯವೇದವು C.L. Bible (BSI)

21 ಇಂಥ ಕೃತ್ಯಗಳನ್ನು ಮಾಡುವವರು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ ಎಂದು ಈಗಾಗಲೇ ನಿಮ್ಮನ್ನು ಎಚ್ಚರಿಸಿದ್ದೇನೆ; ಈಗಲೂ ಎಚ್ಚರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇವುಗಳ ವಿಷಯದಲ್ಲಿ - ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ಹಿಂದೆ ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮತ್ಸರ, ಕುಡಿಕತನ ಮತ್ತು ಸ್ವೇಚ್ಫಾಚಾರದ ಕೂಟ, ಮೊದಲಾದವುಗಳೇ. ನಾನು ನಿಮ್ಮನ್ನು ಮೊದಲು ಎಚ್ಚರಿಸಿದಂತೆ ಈಗಲೂ ಎಚ್ಚರಿಸುತ್ತೇನೆ. ಇಂಥವುಗಳನ್ನು ಮಾಡುವ ಜನರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮತ್ಸರ, ಕುಡಿಕತನ, ದುಂದೌತಣ ಈ ಮೊದಲಾದವುಗಳೇ. ಇಂಥ ಕೃತ್ಯಗಳನ್ನು ನಡೆಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆನಿ ಪೊಜ್ಡೆ, ಫಿದೊಡೆ, ಬುರ್ಶ್ಯಾಪಾನಾತ್ ಗರ್‍ದಿ ಕರ್‍ತಲೆ, ಅಸ್ಲಿ ಕಾಮಾ ತೆನಿ ಕರಿತ್ ರ್‍ಹಾತ್ಯಾತ್ ತೆನಿ ದೆವಾಚ್ಯಾ ರಾಜಾಚೆ ವಾರಿಸ್ದಾರ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:21
19 ತಿಳಿವುಗಳ ಹೋಲಿಕೆ  

ದುಂದೌತಣ - ಕುಡಿತಗಳಲ್ಲಾಗಲೀ, ಕಾಮವಿಲಾಸ-ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ-ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ.


ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಬಾಳಿದರೆ ಖಂಡಿತವಾಗಿ ಸಾಯುವಿರಿ. ಪವಿತ್ರಾತ್ಮ ಅವರ ನೆರವಿನಿಂದ ದೈಹಿಕ ದುರಭ್ಯಾಸಗಳನ್ನು ದಮನಮಾಡಿದರೆ ಜೀವಿಸುವಿರಿ.


ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ.


ಆದರೆ ತಾನು ಕ್ರೈಸ್ತ ಸಹೋದರ ಎನಿಸಿಕೊಂಡು, ದುರಾಚಾರಿಯಾಗಿಯೋ ಲೋಭೀಯಾಗಿಯೋ ವಿಗ್ರಹಾರಾಧಕನಾಗಿಯೋ ಪರನಿಂದಕನಾಗಿಯೋ ಕುಡುಕನಾಗಿಯೋ ಸುಲಿಗೆಗಾರನಾಗಿಯೋ ಯಾರಾದರೂ ಇದ್ದರೆ, ಅಂಥವನ ಸಹವಾಸ ನಿಮಗೆ ಸಲ್ಲದು. ಇದು ನನ್ನ ಪತ್ರದ ಉದ್ದೇಶ.


ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ಕ್ರೈಸ್ತರಲ್ಲದವರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಮಾಡಿದ್ದು ಸಾಕು. ಆಗ ನೀವು ಅಶ್ಲೀಲತೆ, ಕಾಮ, ಕುಡುಕುತನ, ಅಮಲೇರುವಿಕೆ, ದುಂದೌತಣ ಮತ್ತು ಯೋಗ್ಯವಲ್ಲದ ವಿಗ್ರಹಾರಾಧನೆ - ಈ ಮುಂತಾದವುಗಳಿಗೆ ಒಳಗಾಗಿದ್ದಿರಿ.


ಇಂಥವುಗಳಿಗೆ ಈಡಾಗುವ ದುಷ್ಕರ್ಮಿಗಳು ದೇವರ ಕೋಪಾಗ್ನಿಗೆ ಗುರಿಯಾಗುತ್ತಾರೆ.


ನಿದ್ರೆಯೂ ಕುಡುಕತನವೂ ರಾತ್ರಿಗೆ ಸಂಬಂಧಿಸಿದವುಗಳು.


ಸಹೋದರರೇ, ನಾನು ನಿಮಗೆ ಹೇಳುವುದೇನೆಂದರೆ: ರಕ್ತಮಾಂಸವು ದೇವರ ಸಾಮ್ರಾಜ್ಯಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ. ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ಅಲ್ಲಿ ಅವರಿಗೆ, ‘ಈ ನಮ್ಮ ಮಗ ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ,ತುಂಟ’ ಎಂದು ಸಾಕ್ಷಿ ಹೇಳಬೇಕು.


ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ನಾನು ನಿಮ್ಮೊಡನೆ ಇದ್ದಾಗಲೇ ಇದೆಲ್ಲವನ್ನು ತಿಳಿಸಿದ ನೆನಪು ನಿಮಗಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು