Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:25 - ಕನ್ನಡ ಸತ್ಯವೇದವು C.L. Bible (BSI)

25 ಪವಿತ್ರಾತ್ಮ ನಮ್ಮ ಜೀವಾಳವಾಗಿದ್ದರೆ, ಅವರೇ ನಮ್ಮ ಜೀವನದ ಮಾರ್ಗದರ್ಶಿಯೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಮ್ಮ ಹೊಸ ಜೀವಿತವನ್ನು ಪವಿತ್ರಾತ್ಮನಿಂದ ಪಡೆದುಕೊಂಡಿರುವುದರಿಂದ ನಾವು ಆತನನ್ನೇ ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಾವು ದೇವರ ಆತ್ಮದಿಂದ ಜೀವಿಸುತ್ತಿರಲಾಗಿ ಆತ್ಮರನ್ನನುಸರಿಸಿ ನಡೆಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಪವಿತ್ರ್ ಆತ್ಮ್ಯಾನ್ ಅಮ್ಕಾ ಜಿವ್ ದಿಲ್ಲೆ ಹಾಯ್; ತೆನಿಚ್ ಅಮ್ಚೆ ಜಿವನ್ ಚಾಲ್ವುನ್ ನೆವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:25
10 ತಿಳಿವುಗಳ ಹೋಲಿಕೆ  

ನಾನು ಹೇಳುವುದೇನೆಂದರೆ: ನೀವು ಪವಿತ್ರಾತ್ಮರ ಪ್ರೇರಣೆಗನುಸಾರವಾಗಿ ನಡೆದುಕೊಳ್ಳಬೇಕು. ಆಗ, ದೈಹಿಕ ವ್ಯಾಮೋಹಕ್ಕೆ ನೀವು ಈಡಾಗಲಾರಿರಿ.


ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ.


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂಥ ಸಾಮರ್ಥ್ಯವನ್ನು ನೀಡಿದವರು ದೇವರೇ. ಈ ಒಡಂಬಡಿಕೆ ಲಿಖಿತ ಶಾಸನಕ್ಕೆ ಸಂಬಂಧಿಸಿದ್ದಲ್ಲ, ಪವಿತ್ರಾತ್ಮರಿಗೆ ಸಂಬಂಧಿಸಿದ್ದು. ಲಿಖಿತವಾದುದು ಮೃತ್ಯುಕಾರಕವಾದುದು; ಪವಿತ್ರಾತ್ಮ ಸಂಬಂಧವಾದುದು ಸಜ್ಜೀವದಾಯಕವಾದುದು.


ಮೃತರಿಗೂ ಶುಭಸಂದೇಶವನ್ನು ಬೋಧಿಸಲಾಯಿತು. ಏಕೆಂದರೆ, ದೇಹದ ಮಟ್ಟಿಗೆ ಸಕಲ ಮಾನವರಂತೆ ಮರಣವೆಂಬ ತೀರ್ಪನ್ನು ಹೊಂದಿದ್ದರೂ ದೇವರ ಆತ್ಮದ ಮಟ್ಟಿಗೆ ದೇವರಂತೆಯೇ ಜೀವಿಸಲೆಂದು ಆ ಸಂದೇಶವನ್ನು ಬೋಧಿಸಲಾಯಿತು.


ಆದರೆ ಕ್ರಿಸ್ತಯೇಸು ನಿಮ್ಮಲ್ಲಿ ವಾಸಿಸಿದರೆ, ಪಾಪದ ನಿಮಿತ್ತ ನಿಮ್ಮಶರೀರ ಮರಣಕ್ಕೆ ಗುರಿಯಾಗಿದ್ದರೂ ನೀವು ದೇವರೊಡನೆ ಸತ್ಸಂಬಂಧವನ್ನು ಪಡೆದಿರುವುದರಿಂದ ಪವಿತ್ರಾತ್ಮ ನಿಮಗೆ ಜೀವಾಳವಾಗಿರುತ್ತಾರೆ.


ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ.


ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವದಾಯಕ ಉಸಿರು ಬಂದು ಆ ಶವಗಳನ್ನು ಹೊಕ್ಕಾಗ ಅವರು ಎದ್ದುನಿಂತರು. ಇದನ್ನು ಕಂಡವರೆಲ್ಲರೂ ಭಯದಿಂದ ನಡುಗಿದರು.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು