Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:3 - ಕನ್ನಡ ಸತ್ಯವೇದವು C.L. Bible (BSI)

3 ಸುನ್ನತಿಮಾಡಿಸಿಕೊಳ್ಳುವ ಪ್ರತಿಯೊಬ್ಬನೂ ಇಡೀ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಲು ಬದ್ಧನಾಗಿದ್ದಾನೆ ಎಂದು ಪುನಃ ನಿಮಗೆ ನಾನು ಒತ್ತಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸುನ್ನತಿ ಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ, ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವುದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರುಗಿ ಪ್ರಮಾಣವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸುನ್ನತಿಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ - ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮತ್ತೆ ನಾನು ಪ್ರತಿಯೊಬ್ಬನನ್ನೂ ಎಚ್ಚರಿಸುತ್ತೇನೆ. ನೀವು ಸುನ್ನತಿ ಮಾಡಿಸಿಕೊಂಡರೆ, ಧರ್ಮಶಾಸ್ತ್ರವನ್ನೆಲ್ಲಾ ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸುನ್ನತಿ ಮಾಡಿಸಿಕೊಳ್ಳಲು ಬಯಸುವ ಪ್ರತಿಯೊಬ್ಬನೂ ನಿಯಮವನ್ನೆಲ್ಲಾ ಕೈಗೊಳ್ಳುವ ಹಂಗಿನಲ್ಲಿದ್ದಾನೆ ಎಂದು ಪುನಃ ದೃಢವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿಎಗ್ದಾ ಹರ್ ಎಕ್ಲ್ಯಾಕ್ ಮಿಯಾ ಉಶಾರ್ಕಿ ದಿತಾ, ಸುನ್ನತ್ ಕರುನ್ ಘೆಟಲ್ಲೊ ಹರ್ ಎಕ್ಲೊ ಮಾನುಸ್, ಸಗ್ಳೊ ಖಾಯ್ದೆ ಪಾಳ್ತಲ್ಯಾ ಮುಲಾಜಾತ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:3
19 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


ನೀನು ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ನಡೆದರೆ, ನೀನು ಮಾಡಿಸಿಕೊಂಡಿರುವ ಸುನ್ನತಿಗೆ ಅರ್ಥವಿದೆ. ಆದರೆ ನಿನ್ನ ನಡತೆ ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾಗಿದ್ದರೆ ನೀನು ಸುನ್ನತಿ ಮಾಡಿಸಿಕೊಂಡಿದ್ದರೂ ಮಾಡಿಸಿಕೊಳ್ಳದಂತೆಯೇ ಸರಿ.


“ಅವರು, ಈ ಧರ್ಮಶಾಸ್ತ್ರ ವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ಪ್ರಭುವಿನ ಹೆಸರಿನಲ್ಲಿ ನಾನು ನಿಮಗೆ ಒತ್ತಿ ಹೇಳುತ್ತೇನೆ: ಇನ್ನು ಮುಂದೆ ನೀವು ಅನ್ಯಜನರಂತೆ ಜೀವಿಸುವುದನ್ನು ತ್ಯಜಿಸಿರಿ. ಅವರ ಆಲೋಚನೆಗಳು ಹುರುಳಿಲ್ಲದವು.


ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ ನೀವು ತಪ್ಪದೆ ನಾಶವಾಗಿಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.


ಒಬ್ಬನು ಬಲಿಪೀಠದ ಮೇಲೆ ಆಣೆಯಿಟ್ಟರೆ ಅದಕ್ಕೇನೂ ಬದ್ಧನಲ್ಲ. ಬಲಿಪೀಠದ ಮೇಲಿರುವ ಕಾಣಿಕೆಗಳ ಮೇಲೆ ಆಣೆಯಿಟ್ಟರೋ, ಅದನ್ನು ಅವನು ನಡೆಸಿಯೇ ತೀರಬೇಕು ಎನ್ನುತ್ತೀರಿ.


ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.


ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ.


ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. ‘ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ,’ ಎಂದು ಎಚ್ಚರಿಸಿದನು.


ನನಗೆ ಐವರು ಸೋದರರಿದ್ದಾರೆ; ಅವರೂ ಈ ಯಾತನಾಸ್ಥಳಕ್ಕೆ ಬಾರದಂತೆ ಇವನು ಹೋಗಿ ಎಚ್ಚರಿಕೆ ಕೊಡಲಿ,’ ಎಂದು ಬೇಡಿಕೊಂಡ.


“ಕುರುಡ ಮಾರ್ಗದರ್ಶಕರೇ, ನಿಮಗೆ ಧಿಕ್ಕಾರ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅವನು ಅದಕ್ಕೇನೂ ಬದ್ಧನಲ್ಲ. ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೋ, ಅವನು ಅದನ್ನು ನಡೆಸಿಯೇ ತೀರಬೇಕು ಎನ್ನುತ್ತೀರಿ.


ನಮ್ಮ ಅರಸರು, ರಾಜ್ಯಪಾಲರು, ಯಾಜಕರು, ಹಿರಿಯರು ಅನುಸರಿಸಲಿಲ್ಲ, ನಿಮ್ಮಾಜ್ಞೆಯನು, ಧರ್ಮೋಪದೇಶವನು. ಲಕ್ಷಿಸಲಿಲ್ಲ ನೀವಿತ್ತ ಎಚ್ಚರಿಕೆಯ ಮಾತುಗಳನು.


ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತ ವಿಶ್ವಾಸಿಗಳಿಗೆ, “ಮೋಶೆಯ ನಿಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ಧಾರ ಪಡೆಯಲಾರಿರಿ,” ಎಂದು ಬೋಧಿಸತೊಡಗಿದರು.


ಪೌಲನಾದ ನಾನು ಹೇಳುವುದನ್ನು ಕೇಳಿ: ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತಯೇಸುವಿನಿಂದ ನಿಮಗೆ ಯಾವ ಪ್ರಯೋಜನವೂ ಆಗುವುದಿಲ್ಲ.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು