ಗಲಾತ್ಯದವರಿಗೆ 5:4 - ಕನ್ನಡ ಸತ್ಯವೇದವು C.L. Bible (BSI)4 ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರ ಮೂಲಕವೇ ದೇವರೊಡನೆ ಸತ್ಸಂಬಂಧ ಪಡೆಯಬೇಕೆಂದಿರುವ ನೀವು ಕ್ರಿಸ್ತಯೇಸುವಿನಿಂದ ಬೇರ್ಪಟ್ಟಿದ್ದೀರಿ. ದೈವಾನುಗ್ರಹದಿಂದ ದೂರವಾಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿಮ್ಮಲ್ಲಿ ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಹೋದವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿಮ್ಮಲ್ಲಿ ಯಾರಾರು ಕರ್ಮಗಳಿಂದ ನೀತಿವಂತರಾಗಬೇಕೆಂದಿರುತ್ತಾರೋ ಅವರು ಕ್ರಿಸ್ತನಿಂದ ಅಗಲಿ ಹೋದರು. ಕೃಪಾಶ್ರಯದೊಳಗಿಂದ ಬಿದ್ದುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀವು ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಲು ಪ್ರಯತ್ನಿಸುವವರಾಗಿದ್ದರೆ, ದೇವರ ಕೃಪಾಶ್ರಯದಿಂದ ಬಿದ್ದುಹೋದ ಕಾರಣ ಕ್ರಿಸ್ತನೊಂದಿಗಿರುವ ನಿಮ್ಮ ಜೀವಿತವು ಅಂತ್ಯಗೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀವು ನಿಯಮದ ಮೂಲಕ ನೀತಿವಂತರಾಗಬೇಕೆಂದು ಪ್ರಯತ್ನಿಸುವವರು, ಕ್ರಿಸ್ತ ಯೇಸುವಿನಿಂದ ಬೇರ್ಪಟ್ಟಿದ್ದೀರಿ. ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಖಾಯ್ದ್ಯಾಕ್ ಖಾಯ್ಲ್ ಹೊವ್ನ್ ದೆವಾಚ್ಯಾ ವಾಂಗ್ಡಾ ನಿತಿವಂತ್ ಮನುನ್ ಘೆವ್ಕ್ ಖಟ್ಪಟ್ತಲೆ ತುಮಿ, ತುಮ್ಕಾಚ್ ಕ್ರಿಸ್ತಾಕ್ನಾ ಧುರ್ ಕರುನ್ ಘೆತ್ಯಾಶಿ, ತುಮಿ ದೆವಾಚ್ಯಾ ಕುರ್ಪೆಚ್ಯಾ ಭಾಯ್ರ್ ಹಾಸಿ. ಅಧ್ಯಾಯವನ್ನು ನೋಡಿ |