Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:6 - ಕನ್ನಡ ಸತ್ಯವೇದವು C.L. Bible (BSI)

6 ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತ್ ಜೆಜುಚ್ಯಾ ಎಕ್ವಟ್ಟಾತ್ ಸುನ್ನತ್ ಕರಲ್ಲ್ಯಾಕ್ ಹೊಂವ್ದಿತ್, ಕರಿನಸಲ್ಲ್ಯಾಕ್ ಹೊಂವ್ದಿತ್ ಕಾಯ್ಬಿ ಅಂತರ್ ನಾ. ಫಕತ್ ಪ್ರೆಮಾಚ್ಯಾ ವೈನಾ ಕಾಮ್ ಕರ್ತಲೊ ವಿಶ್ವಾಸ್ ಎವ್ಡೊಚ್ ಲೆಕ್ಕಾತ್ ಧರುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:6
22 ತಿಳಿವುಗಳ ಹೋಲಿಕೆ  

ಸುನ್ನತಿ ಮಾಡಿಸಿಕೊಳ್ಳುವುದೋ, ಮಾಡಿಸಿಕೊಳ್ಳದಿರುವುದೋ ಮಹತ್ತಾದುದಲ್ಲ. ಹೊಸ ಸೃಷ್ಟಿಯಾಗುವುದೇ ಮಹತ್ತರವಾದುದು.


ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ, ದೇವರ ಆಜ್ಞೆಗಳಿಗೆ ವಿಧೇಯನಾಗಿರುವುದೇ ಮುಖ್ಯ.


ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ.


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ಯೇಸುಕ್ರಿಸ್ತರ ಪ್ರೀತಿಯ ಪಾಲನೆಗೆ ನಾವು ಒಳಗಾಗಿದ್ದೇವೆ. ಎಲ್ಲಾ ಮಾನವರಿಗೋಸ್ಕರ ಒಬ್ಬನು ಮರಣಹೊಂದಿದನು. ಆದ್ದರಿಂದ ನಾವೆಲ್ಲರೂ ಆ ಮರಣದಲ್ಲಿ ಪಾಲುಗಾರರು.


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು.


ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರಲಿ ಪ್ರೀತಿಯೇ ಪರಮೋನ್ನತವೆಂಬುದ ನೀನರಿ.


ಕ್ರಿಸ್ತಯೇಸುವಿನಲ್ಲಿ ಇಟ್ಟಿರುವ ವಿಶ್ವಾಸದ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರಿ.


ಪಿತನಾದ ದೇವರೂ ಪ್ರಭುವಾದ ಯೇಸುಕ್ರಿಸ್ತರೂ ಸಹೋದರರಿಗೆ ಶಾಂತಿಸಮಾಧಾನವನ್ನು ಮತ್ತು ಪ್ರೀತಿವಿಶ್ವಾಸವನ್ನು ದಯಪಾಲಿಸಲಿ.


ಅಲ್ಲಿಂದ ಬಂದ ಗಂಡಸರೆಲ್ಲರಿಗೆ ಸುನ್ನತಿ ಆಗಿತ್ತು. ಈಜಿಪ್ಟನ್ನು ಬಿಟ್ಟ ಅನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿಯಾಗಿರಲಿಲ್ಲ.


ನಮ್ಮ ಜನರ ಮೇಲೆ ಅವನಿಗೆ ಪ್ರೀತಿ ಇದೆ; ಅಲ್ಲದೆ ನಮ್ಮ ಪ್ರಾರ್ಥನಾಮಂದಿರವನ್ನು ಕಟ್ಟಿಸಿಕೊಟ್ಟವನೂ ಅವನೇ,” ಎಂದು ಬಹಳವಾಗಿ ವಿನಂತಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು