ಗಲಾತ್ಯದವರಿಗೆ 6:1 - ಕನ್ನಡ ಸತ್ಯವೇದವು C.L. Bible (BSI)1 ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವದೋ ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮನಿಂದ ನಡಿಸಿಕೊಳ್ಳುವ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀನಾದರೋ ದುಷ್ಪ್ರೇರಣೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸಹೋದರ ಸಹೋದರಿಯರೇ, ನಿಮ್ಮ ಸಭೆಯಲ್ಲಿ ಯಾವನಾದರೂ ತಪ್ಪು ಮಾಡಿದರೆ, ಆತ್ಮಿಕರಾದ ನೀವು ಅವನ ಬಳಿಗೆ ಹೋಗಿ ಸೌಮ್ಯತೆಯಿಂದ ಅವನನ್ನು ತಿದ್ದಿ ಸರಿಪಡಿಸಬೇಕು. ಆದರೆ ಎಚ್ಚರಿಕೆಯಿಂದಿರಿ! ನೀವು ಸಹ ಶೋಧನೆಗೊಳಗಾಗಿ ಪಾಪಕ್ಕೆ ಬೀಳುವ ಸಾಧ್ಯವಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪ್ರಿಯರೇ, ಒಬ್ಬ ಮನುಷ್ಯನು ಯಾವುದಾದರೊಂದು ಪಾಪದಲ್ಲಿ ಸಿಕ್ಕಿಬಿದ್ದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕ ಆತ್ಮದಿಂದ ಪುನಃ ಸ್ಥಾಪಿಸಿರಿ. ಆದರೆ ನೀನು ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತುಮ್ಚ್ಯಾ ಮದ್ದಿ ಕೊನ್ ತರ್ಬಿ ಎಕ್ಲೊ ಕಸ್ಲ್ಯಾಬಿ ಚುಕೆತ್ ಪಡಲ್ಲೊ ಗಾವ್ಲ್ಯಾರ್, ಆತ್ಮಿಕ್ ರಿತಿಚೆ ತುಮಿ ಜಾವ್ನ್ ತೆಂಕಾ ಸಮಾ ಕರುಚೆ. ಖರೆ ತುಮಿ ಶಾಂತ್ಪಾನಾನ್ ನಾತರ್ ಸಮಾಧಾನಾನ್ ತೆ ಕರುಚೆ, ಅನಿ ತುಮ್ಚ್ಯಾ ವರ್‍ತಿ ಎಕ್ ನದರ್ ರ್‍ಹಾಂವ್ದಿತ್ ಕಶ್ಯಾಕ್ ಮಟ್ಲ್ಯಾರ್ ತುಮಿ ಪರಿಕ್ಷಾತ್ ಪಡ್ತಲೆ ನಕ್ಕೊ. ಅಧ್ಯಾಯವನ್ನು ನೋಡಿ |