Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:10 - ಕನ್ನಡ ಸತ್ಯವೇದವು C.L. Bible (BSI)

10 ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದದರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ಒಂದೇ ಮನೆಯವರಂತಿರುವ ಕ್ರಿಸ್ತನಂಬಿಕೆಯುಳ್ಳವರಿಗೆ ಮಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯಾರಿಗಾದರೂ ಒಳ್ಳೆಯದನ್ನು ಮಾಡಲು ಅವಕಾಶವಿರುವಾಗ ನಾವು ಮಾಡಲೇಬೇಕು. ಅದರಲ್ಲೂ ಒಂದೇ ಕುಟುಂಬದವರಂತಿರುವ ವಿಶ್ವಾಸಿಗಳ ಬಗ್ಗೆ ನಾವು ವಿಶೇಷವಾದ ಗಮನ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ನಮಗೆ ಸಮಯವಿರಲಾಗಿ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ. ಮುಖ್ಯವಾಗಿ ವಿಶ್ವಾಸಿಗಳ ಕುಟುಂಬದವರಿಗೆ ಮಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆಚ್ಯಾಸಾಟ್ನಿ ಬರೆ ಕರ್‍ತಲೊ ಅವಕಾಸ್ ಅಮ್ಕಾ ಗಾವಲ್ಲ್ಯಾ ತನ್ನಾ; ಹರಿಎಕ್ಲ್ಯಾಕ್ ಬರೆ ಕರುಚೆ ಅನಿ ಲೈ ಕರುನ್ ಅಮ್ಚ್ಯಾ ವಿಶ್ವಾಸಾತ್ ಎಕ್ ಕುಟ್ಮಾಚ್ಯಾ ಸಾರ್ಕೆ ಹೊವ್ನ್ ಹೊತ್ತ್ಯಾಕ್ನಿ ಬರೆ ಕರುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:10
38 ತಿಳಿವುಗಳ ಹೋಲಿಕೆ  

ಇದಲ್ಲದೆ, ಪರೋಪಕಾರ ಮಾಡುವುದನ್ನೂ ನಿಮಗಿರುವುದನ್ನು ಪರರೊಡನೆ ಹಂಚಿಕೊಳ್ಳುವುದನ್ನೂ ನಿಲ್ಲಿಸಬೇಡಿ. ಇವು ಕೂಡ ದೇವರಿಗೆ ಮೆಚ್ಚುಗೆಯಾದ ಬಲಿಯರ್ಪಣೆಗಳೇ.


ನಿನ್ನ ಕೈಲಾದಾಗ ಉಪಕಾರಮಾಡು, ಕೇಳುವವರಿಗೆ ಅದನ್ನು ನಿರಾಕರಿಸಬೇಡ.


ಕೆಡುಕಿಗೆ ಪ್ರತಿಯಾಗಿ ಕೆಡುಕು ಮಾಡದೆ ಎಚ್ಚರದಿಂದಿರಿ. ಯಾವಾಗಲೂ ಒಬ್ಬರಿಗೊಬ್ಬರು ಮಾತ್ರವಲ್ಲದೆ ಎಲ್ಲರಿಗೂ ಹಿತವನ್ನೇ ಮಾಡಿರಿ.


ದೇವರಲ್ಲಿ ವಿಶ್ವಾಸವಿಟ್ಟವರು ಸತ್ಕಾರ್ಯಗಳಲ್ಲಿ ನಿರತರಾಗುವಂತೆ ನೀನು ಇವೆಲ್ಲವನ್ನೂ ದೃಢವಾಗಿ ಬೋಧಿಸಬೇಕೆಂಬುದೇ ನನ್ನ ಅಪೇಕ್ಷೆ. ಇವು ಎಲ್ಲರಿಗೂ ಹಿತಕರವಾಗಿವೆ ಹಾಗೂ ಪ್ರಯೋಜನಕರವಾಗಿವೆ.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ.


ಅದಕ್ಕೆ ಯೇಸು, “ಇನ್ನು ತುಸುಕಾಲ ಮಾತ್ರ ಜ್ಯೋತಿ ನಿಮ್ಮ ನಡುವೆ ಇರುತ್ತದೆ. ನಿಮ್ಮನ್ನು ಕತ್ತಲು ಕವಿಯದಂತೆ ಜ್ಯೋತಿಯಿರುವಾಗಲೇ ನಡೆಯಿರಿ. ಕತ್ತಲಲ್ಲಿ ನಡೆಯುವವನಿಗೆ ಗೊತ್ತುಗುರಿ ಕಾಣದು.


“ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು.


ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II


ಹಗಲಿರುವಾಗಲೇ ನನ್ನನ್ನು ಕಳುಹಿಸಿದಾತನ ಕೆಲಸವನ್ನು ನಾನು ಮಾಡುತ್ತಿರಬೇಕು. ರಾತ್ರಿ ಆದಮೇಲೆ ಯಾರೂ ಕೆಲಸ ಮಾಡಲಾಗದು.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ನನ್ನ ಬಗ್ಗೆ ನಿಮಗಿರುವ ಮಮತೆಯು ಇಷ್ಟು ದಿನಗಳಾದ ಮೇಲೆ ಪುನಃ ಅರಳಿದ್ದಕ್ಕೆ ಪ್ರಭುವಿನಲ್ಲಿ ನಾನು ಬಹಳ ಸಂತೋಷಪಡುತ್ತೇನೆ. ಇಂಥ ಮಮತೆ ನಿಮಗೆ ಮೊದಲಿನಿಂದ ಇತ್ತಾದರೂ ಅದನ್ನು ವ್ಯಕ್ತಪಡಿಲು ನಿಮಗೆ ಸೂಕ್ತ ಸಂದರ್ಭ ಒದಗಿರಲಿಲ್ಲ.


ಸ್ವರ್ಗದಲ್ಲಿರುವ ನನ್ನ ತಂದೆಯ‍ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ,” ಎಂದರು.


ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನೇ ಅನುಸರಿಸಿ ನಡೆ. ಒಳಿತನ್ನು ಮಾಡುವವನು ದೇವರಿಗೆ ಸೇರಿದವನು. ಕೆಡುಕನ್ನು ಮಾಡುವವನು ದೇವರನ್ನು ಕಾಣದವನು.


ನೆರೆಯವರ ವಿಷಯದಲ್ಲಿ ಜಾಣತನದಿಂದ ವರ್ತಿಸಿರಿ. ನಿಮಗಿರುವ ಸಮಯ ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳಿರಿ.


ಈ ದಿನಗಳು ಕೆಟ್ಟ ದಿನಗಳಾಗಿರುವುದರಿಂದ ನಿಮಗಿರುವ ಸದವಕಾಶಗಳನ್ನು ಸದ್ವಿನಿಯೋಗಿಸಿಕೊಳ್ಳಿರಿ.


ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.


ಕೆಟ್ಟದನು ಬಿಡು, ಒಳ್ಳೆಯದನು ಮಾಡು I ಸಿರಿನಾಡಿನಲಿ ಚಿರಕಾಲ ಬಾಳು II


ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.


“ಸಬ್ಬತ್‍ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ ಹೇಳಿ,” ಎಂದು ಕೇಳಲು ಅವರು ಮಾತೇ ಎತ್ತಲಿಲ್ಲ.


ಸ್ವರ್ಗಲೋಕದಲ್ಲೂ ಭೂಲೋಕದಲ್ಲೂ ಪ್ರತಿ ಕುಟುಂಬವು ತನ್ನ ಹೆಸರನ್ನು ಪಡೆದಿರುವುದು ಅವರಿಂದಲೇ.


“ ‘ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು’ ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?”


ಮನುಷ್ಯರು ತಮ್ಮ ಇಡೀ ಜೀವಮಾನದಲ್ಲಿ ಸುಖಸಂತೋಷವನ್ನು ಅನುಭವಿಸುವುದಕ್ಕಿಂತ ಮೇಲಾದುದು ಅವರಿಗೆ ಯಾವುದೂ ಇಲ್ಲ ಎಂಬುದನ್ನು ನಾನು ಗ್ರಹಿಸಿದ್ದೇನೆ.


ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.


‘ಹಿಂದೊಮ್ಮೆ ನಮ್ಮನ್ನು ಹಿಂಸಿಸುತ್ತಿದ್ದವನು, ತಾನು ನಾಶಮಾಡಲೆತ್ನಿಸಿದ ವಿಶ್ವಾಸವನ್ನೇ ಈಗ ಪ್ರಚಾರಮಾಡುತ್ತಿದ್ದಾನೆ’, ಎಂಬ ಸುದ್ದಿಯನ್ನು ಮಾತ್ರ ಕೇಳಿದ್ದರು.


ಕಳ್ಳತನ ಮಾಡುವವನು ಕಳ್ಳತನವನ್ನು ಬಿಟ್ಟುಬಿಡಲಿ; ಶ್ರಮಪಟ್ಟು ದುಡಿದು ಸಂಪಾದಿಸಲಿ. ಆಗ ತನ್ನ ಪ್ರಾಮಾಣಿಕ ದುಡಿಮೆಯಿಂದ ಕಷ್ಟದಲ್ಲಿರುವವರಿಗೆ ನೆರವು ನೀಡಲು ಸಾಧ್ಯವಾಗುವುದು.


ಅವುಗಳನ್ನೆಲ್ಲಾ ಪರಿಶೋಧಿಸಿ ಒಳ್ಳೆಯದನ್ನು ಅಂಗೀಕರಿಸಿ,


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು?


ನೀನು ಸತ್ಯದಲ್ಲಿ ನಿಷ್ಠಾವಂತನಾಗಿದ್ದು, ಸನ್ಮಾರ್ಗದಲ್ಲಿ ನಡೆಯುತ್ತಿರುವುದಾಗಿ ಕೆಲವು ಸಹೋದರರು ಇಲ್ಲಿಗೆ ಬಂದು ತಿಳಿಸಿದಾಗ ನನಗಾದ ಆನಂದ ಅಷ್ಟಿಷ್ಟಲ್ಲ.


ನಾನು ಬಂದಾಗ, ಅವನು ಮಾಡುತ್ತಿರುವುದನ್ನೆಲ್ಲಾ ಹೊರಗೆಡಹುತ್ತೇನೆ. ನಮ್ಮ ವಿರುದ್ಧ ಅವನು ಅಪಪ್ರಚಾರ ಮಾಡುತ್ತಾ ಹರಟೆಕೊಚ್ಚುತ್ತಿದ್ದಾನೆ. ಸಾಲದೆಂದು, ಸಹೋದರರನ್ನು ಸ್ವಾಗತಿಸಲು ನಿರಾಕರಿಸುತ್ತಿದ್ದಾನೆ. ಹಾಗೆ ಸ್ವಾಗತಿಸಬಯಸುವವರನ್ನು ನಿರ್ಬಂಧಿಸಿ ಸಭೆಯಿಂದ ಬಹಿಷ್ಕರಿಸುತ್ತಿದ್ದಾನೆ.


ನಿಮ್ಮ ಪ್ರೀತಿ ಅವನಿಗೆ ಮನದಟ್ಟಾಗುವಂತೆ ನಡೆದುಕೊಳ್ಳಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು