Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:12 - ಕನ್ನಡ ಸತ್ಯವೇದವು C.L. Bible (BSI)

12 ಬಾಹ್ಯಾಚಾರಗಳಿಂದ ತಾವು ಒಳ್ಳೆಯವರು ಎನಿಸಿಕೊಳ್ಳಬೇಕೆನ್ನುವವರು ನೀವು ಸುನ್ನತಿಮಾಡಿಸಿಕೊಳ್ಳಬೇಕೆಂದು ಬಲಾತ್ಕಾರ ಮಾಡುತ್ತಿದ್ದಾರೆ. ಕ್ರಿಸ್ತಯೇಸುವಿನ ಶಿಲುಬೆಯ ನಿಮಿತ್ತ ತಮಗೆ ಹಿಂಸೆಬಾಧೆಗಳು ಉಂಟಾಗಬಾರದು ಎಂಬುದೇ ಅವರ ಉದ್ದೇಶವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಬಹಿರಾಚಾರಗಳಿಂದ ಮಾನಪಡೆಯಬೇಕೆಂದಿರುವವರು ಸುನ್ನತಿಮಾಡಿಸಿಕೊಳ್ಳಿರಿ ಎಂಬದಾಗಿ ನಿಮ್ಮನ್ನು ಬಲಾತ್ಕರಿಸುತ್ತಾರೆ. ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದೊಂದೇ ಅವರ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವು ಸುನ್ನತಿ ಮಾಡಿಸಿಕೊಳ್ಳಬೇಕೆಂದು ಕೆಲವರು ನಿಮ್ಮನ್ನು ಒತ್ತಾಯಿಸುತ್ತಿದ್ದಾರೆ. ತಮ್ಮನ್ನು (ಯೆಹೂದ್ಯರು) ಸ್ವೀಕರಿಸಿಕೊಳ್ಳಲಿ ಎಂಬುದೇ ಅವರ ಉದ್ದೇಶ. ಕ್ರಿಸ್ತನ ಶಿಲುಬೆಯ ದೆಸೆಯಿಂದ ತಾವು ಹಿಂಸೆಗೆ ಒಳಗಾಗಬಹುದೆಂಬ ಭಯದಿಂದ ಅವರು ಹೀಗೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡುವವರೂ ತಮಗೆ ಕ್ರಿಸ್ತ ಯೇಸುವಿನ ಶಿಲುಬೆಯ ನಿಮಿತ್ತ ಹಿಂಸೆಯಾಗಬಾರದೆಂಬುದಕ್ಕಾಗಿಯೇ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಿಮ್ಮನ್ನು ಒತ್ತಾಯ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತುಮಿ ಸುನ್ನತ್ ಕರುನ್ ಘೆವ್ಚೆ ಮನುನ್; ಉಲ್ಲಿ ಲೊಕಾ ತುಮ್ಕಾ ಜಬರ್ದಸ್ತಿ ಕರುಕ್ ಲಾಗ್ಲಾತ್, ಅಪ್ನಾಕ್ನಿ ಜುದೆವಾಂಚಿ ಲೊಕಾ ಮಾನುನ್ ಘೆಂವ್ದಿ ಮನ್ತಲಿ ತೆಂಚಿ ಆಶಾ. ಕ್ರಿಸ್ತಾಚ್ಯಾ ಕುರ್ಸಾ ವೈನಾ ಅಪ್ನಿ ತರಾಸಾಕ್ ಗಾವ್ತಾತ್ ಮನ್ತಲ್ಯಾ ಭಿಂಯಾ ವೈನಾ ತೆನಿ ಅಶೆ ಕರುಕ್ ಲಾಗ್ಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:12
22 ತಿಳಿವುಗಳ ಹೋಲಿಕೆ  

ಸಹೋದರರೇ, ಸುನ್ನತಿಮಾಡಿಸಿಕೊಳ್ಳುವುದು ಅವಶ್ಯಕವೆಂದು ನಾನು ಇನ್ನೂ ಬೋಧಿಸುತ್ತಿರುವುದಾಗಿ ಕೆಲವರು ಹೇಳುತ್ತಿದ್ದಾರಲ್ಲವೇ? ಹಾಗೆ ಬೋಧಿಸುತ್ತಿರುವುದಾದರೆ ನಾನೇಕೆ ಹೀಗೆ ಹಿಂಸೆಬಾಧೆಗಳನ್ನು ಅನುಭವಿಸಬೇಕಾಗುತ್ತಿತ್ತು? ನಾನು ಹಾಗೇನಾದರೂ ಬೋಧಿಸಿದ್ದರೆ, ಶಿಲುಬೆಯ ಸಂದೇಶದಿಂದ ಯಾವ ಅಡ್ಡಿ ಆತಂಕವೂ ಉಂಟಾಗುತ್ತಿರಲಿಲ್ಲ.


ಸ್ವಕಲ್ಪಿತ ಆಚಾರವಿಧಿಗಳಿಂದಲೂ ಕಪಟ ವಿನಯದಿಂದಲೂ ಕಠಿಣ ದೇಹದಂಡನೆಯಿಂದಲೂ ಕೂಡಿರುವ ಈ ವಿಧಿನಿಯಮಗಳು ಹೊರನೋಟಕ್ಕೆ ಜಾಣ್ಮೆಯುಳ್ಳದಾಗಿ ಕಾಣಬಹುದು. ಆದರೂ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸಲು ಇವುಗಳು ಪ್ರಯೋಜನಕ್ಕೆ ಬರುವಂಥವುಗಳಲ್ಲ.


ಅವರು ಕಪಟ ಪ್ರೇಷಿತರು, ಕಳ್ಳ ಕೆಲಸಗಾರರು, ಕ್ರಿಸ್ತಯೇಸುವಿನ ಪ್ರೇಷಿತರಂತೆ ನಟಿಸುವವರು.


ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತ ವಿಶ್ವಾಸಿಗಳಿಗೆ, “ಮೋಶೆಯ ನಿಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ಧಾರ ಪಡೆಯಲಾರಿರಿ,” ಎಂದು ಬೋಧಿಸತೊಡಗಿದರು.


ಆಗ ನನ್ನ ಸಂಗಡವಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿ ಆಗಬೇಕೆಂದು ಯಾರೂ ಒತ್ತಾಯಪಡಿಸಲಿಲ್ಲ.


ಅದಕ್ಕೆ ಯೇಸು, “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,” ಎಂದರು.


ಕ್ರಿಸ್ತಯೇಸುವಿನ ಶಿಲುಬೆಗೆ ವಿರೋಧವಾಗಿ ನಡೆಯುವವರು ಅನೇಕರಿದ್ದಾರೆ. ಇದನ್ನು ನಾನು ಹಲವಾರು ಸಾರಿ ತಿಳಿಸಿರುವಂತೆ ಈಗಲೂ ಅತೀವ ದುಃಖದಿಂದ ಹೇಳುತ್ತಿದ್ದೇನೆ.


ಸ್ವಹಿತವನ್ನೇ ಗಮನಿಸದೆ ಪರರ ಹಿತವನ್ನೂ ಬಯಸಿರಿ.


ಕೆಲವರೇನೋ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಕ್ರಿಸ್ತಯೇಸುವನ್ನು ಸಾರುತ್ತಿರುವುದು ನಿಜ; ಆದರೆ ಮಿಕ್ಕವರು ಸದುದ್ದೇಶದಿಂದ ಸಾರುತ್ತಿದ್ದಾರೆ;


ಸುನ್ನತಿಮಾಡಿಸಿಕೊಳ್ಳುವ ತಾವಾದರೂ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವುದಿಲ್ಲ. ಆದರೆ ನಿಮ್ಮ ದೈಹಿಕ ಸುನ್ನತಿಯಿಂದ, ಅವರು ಹೆಚ್ಚಳಿಕೆ ಗಳಿಸುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಬಯಸುತ್ತಾರೆ.


ಅವರ ಈ ನಡತೆ, ಶುಭಸಂದೇಶದ ಸತ್ಯಕ್ಕೆ ಅನುಗುಣವಾದುದಲ್ಲ ಎಂದು ನನಗೆ ಮನದಟ್ಟಾಯಿತು. ಆಗ ನಾನು ಅವರೆಲ್ಲರ ಸಮ್ಮುಖದಲ್ಲೇ ಕೇಫನಿಗೆ: “ನೀನು ಯೆಹೂದ್ಯನಾಗಿದ್ದೂ ಯೆಹೂದ್ಯರಂತೆ ನಡೆಯದೆ ಅನ್ಯಧರ್ಮೀಯರಂತೆ ನಡೆದುಕೊಳ್ಳುತ್ತ ಇದ್ದಿಯಲ್ಲವೇ? ಹೀಗಿರುವಲ್ಲಿ ಅನ್ಯಧರ್ಮೀಯರು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ನೀನು ಒತ್ತಾಯಪಡಿಸುವುದಾದರೂ ಹೇಗೆ?” ಎಂದು ಕೇಳಿದೆ.


ಕೆಲವರು ತಮ್ಮನ್ನು ತಾವೇ ಹೊಗಳಿಕೊಳ್ಳುತ್ತಾರೆ. ಅವರಂತೆ ಕೊಚ್ಚಿಕೊಳ್ಳುವುದಕ್ಕೂ ಅವರೊಡನೆ ಹೋಲಿಸಿಕೊಳ್ಳುವುದಕ್ಕೂ ನಾವು ಯತ್ನಿಸುವುದಿಲ್ಲ. ಅವರಿಗೆ ತಾವು ಹಾಕಿಕೊಂಡದ್ದೇ ಅಳತೆಗೋಲು. ತಮಗೆ ತಾವೇ ತಾಳೆಹಾಕಿಕೊಳ್ಳುವಂಥ ಅವಿವೇಕಿಗಳು.


ಫರಿಸಾಯ ಪಂಥಕ್ಕೆ ಸೇರಿದ ಕೆಲವು ಭಕ್ತರು ಮಾತ್ರ ಎದ್ದುನಿಂತು, ಅನ್ಯಧರ್ಮೀಯರು ಸುನ್ನತಿಮಾಡಿಸಿಕೊಳ್ಳಲೇಬೇಕು, ಅವರು ಮೋಶೆಯ ನಿಯಮಗಳನ್ನು ಅನುಸರಿಸುವಂತೆ ಆಜ್ಞೆ ಮಾಡಲೇಬೇಕು,” ಎಂದರು.


ಸ್ವಂತ ಕಲ್ಪನೆಯಿಂದ ಮಾತನಾಡುವವನು ತನ್ನ ಸ್ವಪ್ರತಿಷ್ಠೆಯನ್ನು ಬಯಸುತ್ತಾನೆ. ತನ್ನನ್ನು ಕಳುಹಿಸಿದಾತನ ಪ್ರತಿಷ್ಠೆಯನ್ನು ಬಯಸುವವನು ಪ್ರಾಮಾಣಿಕನು. ಕಪಟವೆಂಬುದು ಅವನಲ್ಲಿ ಇರದು.


ವಿಧವೆಯರ ಮನೆಮಾರುಗಳನ್ನು ದೋಚಿಕೊಳ್ಳುವ ಈ ಜನ ನಟನೆಗಾಗಿ ಜಪತಪಗಳನ್ನು ದೀರ್ಘವಾಗಿ ಮಾಡುತ್ತಾರೆ. ಇವರನ್ನು ದೇವರು ಬಹಳ ಕಠಿಣವಾದ ದಂಡನೆಗೆ ಗುರಿಪಡಿಸುವರು,” ಎಂದರು.


ಬಹಿರಂಗ ನೋಟಕ್ಕೆ ನೀವು ಸತ್ಪುರುಷರು. ಅಂತರಂಗದಲ್ಲಾದರೋ ಕಪಟ ಕಲ್ಮಶಗಳಿಂದ ತುಂಬಿದವರು.


ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ.


“ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


“ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ.


ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.”


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಸುಣ್ಣ ಬಳಿದ ಸಮಾಧಿಗಳು. ಹೊರನೋಟಕ್ಕೇನೋ ಅವು ಥಳಕಾಗಿವೆ. ಒಳಗೋ ಸತ್ತವರ ಮೂಳೆಗಳಿಂದಲೂ ಕೊಳಕಿನಿಂದಲೂ ತುಂಬಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು