Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:17 - ಕನ್ನಡ ಸತ್ಯವೇದವು C.L. Bible (BSI)

17 ಇನ್ನು ಮೇಲೆ ಯಾರೂ ನನಗೆ ತೊಂದರೆ ಕೊಡದಿರಲಿ. ಯೇಸುವಿನ ದಾಸನೆಂದು ಸೂಚಿಸುವ ಕೆಂಗುರುತುಗಳು ನನ್ನ ದೇಹದಲ್ಲಿ ಮುದ್ರಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇನ್ನು ಮೇಲೆ ಯಾರೂ ನನಗೆ ತೊಂದರೆಪಡಿಸಬಾರದು, ನನ್ನ ದೇಹದಲ್ಲಿ ಯೇಸುಕ್ರಿಸ್ತನ ಗುರುತುಗಳನ್ನು ಮುದ್ರಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇನ್ನು ಮೇಲೆ ಯಾರೂ ನನ್ನನ್ನು ತೊಂದರೆಪಡಿಸಬಾರದು, ನನ್ನ ದೇಹದಲ್ಲಿ ಯೇಸುವಿನ ಮುದ್ರೆಗಳು ಹಾಕಿರುತ್ತವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ಇನ್ನು ಮೇಲೆ ನನಗೆ ತೊಂದರೆ ಕೊಡಬೇಡಿ. ನನ್ನ ದೇಹದ ಮೇಲೆ ಬಾಸುಂಡೆಯ ಗುರುತುಗಳಿವೆ. ನಾನು ಕ್ರಿಸ್ತನವನೆಂಬುದಕ್ಕೆ ಈ ಗುರುತುಗಳೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇನ್ನು ಮೇಲೆ ಯಾರೂ ನನಗೆ ತೊಂದರೆ ಕೊಡಬಾರದು. ನಾನು ನನ್ನ ದೇಹದಲ್ಲಿ ಕರ್ತ ಆಗಿರುವ ಯೇಸುವಿನ ಗುರುತುಗಳನ್ನು ಪಡೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅತ್ತಾಚ್ಯಾನ್ ಫಿಡೆ ಕೊನ್‍ಬಿ ಮಾಕಾ ತರಾಸಾಕ್ ಕಾರನ್ ಹೊತೆಲೆ ನಕ್ಕೊ. ಕಶ್ಯಾಕ್ ಮಟ್ಲ್ಯಾರ್, ಮಾಜ್ಯಾ ಆಂಗಾ ವರ್‍ತಿ ಹೊತ್ತ್ಯಾ ಮಾರಾಂಚ್ಯಾ ಕಲಿಯಾ; ಮಿಯಾ ಜೆಜುಚೊ ಸೆವಕ್ ಮನುನ್ ದಾಕ್ವುನ್ ದಿತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:17
14 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ಯಾತನೆಯು ನಮ್ಮ ಬಾಳಿನಲ್ಲಿ ತುಂಬಿರುವಂತೆ ಅವರ ಮುಖಾಂತರ ಲಭಿಸುವ ಸಾಂತ್ವನವೂ ನಮ್ಮಲ್ಲಿ ತುಂಬಿರುತ್ತದೆ.


ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.


ಯೇಸುವಿನ ದಿವ್ಯಜೀವವು ನಮ್ಮ ದೇಹದಲ್ಲಿ ಗೋಚರವಾಗುವಂತೆ ಅವರ ಮರಣಯಾತನೆಯನ್ನು ನಿರಂತರವಾಗಿ ಅನುಭವಿಸುತ್ತಾ ಬಾಳುತ್ತಿದ್ದೇವೆ.


ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.


ನಮ್ಮ ಕಡೆಯ ಕೆಲವು ಜನರು ನಮ್ಮಿಂದ ಯಾವ ಆದೇಶವನ್ನೂ ಪಡೆಯದೆ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮ ಮನಸ್ಸನ್ನು ಕಲಕಿದರೆಂಬ ಸಮಾಚಾರ ನಮ್ಮ ಗಮನಕ್ಕೆ ಬಂದಿದೆ.


ಯೆಹೋಶುವನು ಆಕಾನನಿಗೆ, “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ದಿನ ಸರ್ವೇಶ್ವರ ನಿನ್ನ ಮೇಲೆ ಆಪತ್ತು ಬರಮಾಡುವರು,” ಎಂದ ಕೂಡಲೆ ಇಸ್ರಯೇಲರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಕಲ್ಲೆಸೆದದ್ದು ಮಾತ್ರವಲ್ಲ, ಅವನಿಗೆ ಇದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟರು.


ವಾಸ್ತವವಾಗಿ, ಬೇರೆ ಯಾವ ಶುಭಸಂದೇಶವೂ ಇಲ್ಲ. ಆದರೆ ಕೆಲವರು ನಿಮ್ಮಲ್ಲಿ ಗೊಂದಲವೆಬ್ಬಿಸಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಮಾರ್ಪಡಿಸಲು ಯತ್ನಿಸುತ್ತಾ ಇದ್ದಾರೆ.


ಹೇಳಿಕೊಳ್ಳುವನೊಬ್ಬನು ತಾನು ಸರ್ವೇಶ್ವರನ ಶರಣನೆಂದು ಹೆಸರಿಸಿಕೊಳ್ಳುವನು ಇನ್ನೊಬ್ಬನು ತಾನು ಯಕೋಬ್ಯನೆಂದು ಕೈಯಲ್ಲಿ ಹಚ್ಚೆ ಹೊಯ್ದುಕೊಳ್ಳುವನು ಮತ್ತೊಬ್ಬನು ಸರ್ವೇಶ್ವರನ ದಾಸನೆಂದು ಬಿರುದನ್ನು ಧರಿಸಿಕೊಳ್ಳುವನವನು ತಾನು ಇಸ್ರಯೇಲ್ಯನೆಂದು.”


“ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು.


ಯೇಸುಸ್ವಾಮಿಯನ್ನು ಅರಿಯಬೇಕು; ಅವರ ಪುನರುತ್ಥಾನದ ಪ್ರಭಾವವನ್ನು ಅನುಭವಿಸಬೇಕು; ಅವರ ಯಾತನೆಗಳಲ್ಲಿ ಪಾಲುಗೊಳ್ಳಬೇಕು; ಅವರ ಮರಣದಲ್ಲಿ ಅವರಂತೆಯೇ ಆಗಬೇಕು - ಇದೇ ನನ್ನ ಹೆಬ್ಬಯಕೆ.


ಹಿರಿಯ ಕಿರಿಯ, ಬಡವ ಬಲ್ಲಿದ, ದಾಸ ದಣಿ ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತಿನ ಹಚ್ಚೆ ಚುಚ್ಚಿಸಿಕೊಳ್ಳಬೇಕೆಂದು ಆ ಎರಡನೆಯ ಮೃಗ ಆಜ್ಞಾಪಿಸಿತು.


ಆ ಗುರುತಿನ ಹಚ್ಚೆಯನ್ನು ಯಾರು ಚುಚ್ಚಿಸಿಕೊಳ್ಳಲಿಲ್ಲವೋ ಅವರು ಕೊಳ್ಳುವುದಕ್ಕಾಗಲಿ, ಮಾರುವುದಕ್ಕಾಗಲಿ ಸಾಧ್ಯ ಇರಲಿಲ್ಲ. ಆ ಗುರುತಿನ ಮುದ್ರೆ ಏನೆಂದರೆ ಮೃಗದ ಹೆಸರು ಇಲ್ಲವೆ, ಆ ಹೆಸರನ್ನು ಸೂಚಿಸುವ ಸಂಖ್ಯೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು