Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:4 - ಕನ್ನಡ ಸತ್ಯವೇದವು C.L. Bible (BSI)

4 ಪ್ರತಿಯೊಬ್ಬನೂ ತನ್ನ ನಡತೆಯನ್ನು ತನ್ನಷ್ಟಕ್ಕೆ ತಾನೇ ಪರಿಶೋಧಿಸಿಕೊಳ್ಳಲಿ. ತನ್ನ ನಡತೆ ಒಳಿತಾಗಿದ್ದರೆ ಹೆಮ್ಮೆಪಡಲಿ. ಆದರೆ ಇತರರೊಂದಿಗೆ ಹೋಲಿಸಿ ಹೆಮ್ಮೆಪಡಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ. ಆಗ ಅವನು ತನ್ನ ನಿಮಿತ್ತದಿಂದ ಹೆಚ್ಚಳಪಡಬಹುದೇ ಹೊರತು ಮತ್ತೊಬ್ಬನೊಂದಿಗೆ ಹೋಲಿಸಿಕೊಂಡು ಹೆಚ್ಚಳಪಡಬೇಕಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರಿಶೋಧಿಸಲಿ; ಆಗ ಅವನು ತನ್ನ ನಿವಿುತ್ತದಿಂದ ಹೆಚ್ಚಳಪಡುವದಕ್ಕೆ ಆಸ್ಪದವಾಗುವದೇ ಹೊರತು ಮತ್ತೊಬ್ಬರ ನಿವಿುತ್ತದಿಂದಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರತಿಯೊಬ್ಬನು ತನ್ನ ನಡತೆಯನ್ನು ತಾನೇ ವಿಮರ್ಶಿಸಿಕೊಳ್ಳಲಿ. ಆಗ ತಾನೇನಾದರೂ ಹೆಚ್ಚಳಪಡುವಂತ ಕಾರ್ಯಗಳನ್ನು ಮಾಡಿದ್ದರೆ ಅವನಿಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ, ಆಗ ಅವನು ತನ್ನಲ್ಲಿ ಮಾತ್ರ ಸಂತೋಷಪಡುವುದಕ್ಕೆ ಆಸ್ಪದವಾಗುವುದೇ ಹೊರತು ಮತ್ತೊಬ್ಬನಲ್ಲಿ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಸಗ್ಳ್ಯಾನಿ ತೆಂಚ್ಯಾ ತೆಂಚ್ಯಾ ಕಾಮಾಚಿ ಪರಿಕ್ಷಾ ಕರುನ್ ಬಗುಚೆ, ತನ್ನಾ ತೆನಿ ಅಪ್ನಾಚೆ ಮೊಟೆಪಾನ್ ಬೊಲುಕ್ ಹೊತಾ, ತೆ ಬಿ ಅನಿ ಎಕ್ಲ್ಯಾಚ್ಯಾ ವಾಂಗ್ಡಾ ಅಪ್ನಾಕುಚ್ ಸಮಾ ಕರುನ್ ಘೆಯ್ನಸ್ತಾನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:4
17 ತಿಳಿವುಗಳ ಹೋಲಿಕೆ  

ನಿಮ್ಮ ಜೀವನ ವಿಶ್ವಾಸದಲ್ಲಿ ಬೇರೂರಿದೆಯೇ ಎಂಬುದನ್ನು ನೀವೇ ಪರೀಕ್ಷಿಸಿನೋಡಿ. ನಿಮ್ಮ ಅಂತರಂಗವನ್ನು ಪರಿಶೋಧಿಸಿ ನೋಡಿ. ಕ್ರಿಸ್ತಯೇಸು ನಿಮ್ಮಲ್ಲಿ ಇದ್ದಾರೆ ಎಂಬುದನ್ನು ಅರಿತಿದ್ದೀರಿ ಅಲ್ಲವೇ? ಅವರು ನಿಮ್ಮಲ್ಲಿ ಇಲ್ಲವಾದರೆ ನೀವು ಅಯೋಗ್ಯರೇ ಸರಿ.


ಪರೀಕ್ಷಿಸು ಪ್ರಭು, ಎನ್ನನು ಪರಿಶೀಲಿಸು I ಹೃನ್ಮನಗಳೆಲ್ಲವನು ನೀ ಪರಿಶೋಧಿಸು II


ಪ್ರತಿಯೊಬ್ಬನೂ ಮೊಟ್ಟಮೊದಲು ತನ್ನನ್ನು ಪರಿಶೋಧಿಸಿಕೊಂಡು ಅನಂತರ ಆ ರೊಟ್ಟಿಯನ್ನು ಭುಜಿಸಲಿ; ಮತ್ತು ಆ ಪಾತ್ರೆಯಿಂದ ಪಾನಮಾಡಲಿ.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆಮಾಡಿದ: ‘ಓ ದೇವರೇ, ನಾನು ಇತರರ ಹಾಗೆ ಅಲ್ಲ. ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೇನೆ.


ಕೆಟ್ಟವನು ತನ್ನ ಕರ್ಮದ ಕಹಿಫಲದಿಂದ ತಿಂದು ತೇಗುವನು; ಒಳ್ಳೆಯವನು ತನ್ನ ಕಾರ್ಯದ ಸತ್ಫಲದಿಂದ ತೃಪ್ತನಾಗುವನು.


ಇಗೋ, ದೇವರು ಕೊಲ್ಲುವನೆನ್ನನು ಅದಕ್ಕಾಗಿ ನಾನು ಕಾದಿರುವೆನು. ಆದರೂ ನನ್ನ ನಡತೆ ಸರಿಯೆಂಬುದನು ಆತನ ಮುಂದೆಯೆ ರುಜುವಾತುಪಡಿಸುವೆನು.


ಸುನ್ನತಿಮಾಡಿಸಿಕೊಳ್ಳುವ ತಾವಾದರೂ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವುದಿಲ್ಲ. ಆದರೆ ನಿಮ್ಮ ದೈಹಿಕ ಸುನ್ನತಿಯಿಂದ, ಅವರು ಹೆಚ್ಚಳಿಕೆ ಗಳಿಸುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಬಯಸುತ್ತಾರೆ.


ನೆಡುವವನೂ ನೀರೆರೆಯುವವನೂ ಇಬ್ಬರೂ ಅಗತ್ಯವಾಗಿ ಬೇಕಾದವರೇ. ಅವನವನ ದುಡಿಮೆಗೆ ತಕ್ಕ ಹಾಗೆ ಪ್ರತಿಯೊಬ್ಬನೂ ಸಂಭಾವನೆ ಪಡೆಯುತ್ತಾನೆ.


ಕಟ್ಟಡವು ಸುಟ್ಟುಹೋಗದೆ ಅಸ್ತಿವಾರದ ಮೇಲೆ ನೆಲೆಯಾಗಿ ನಿಂತರೆ ಕಟ್ಟಿದವನಿಗೆ ಸಂಭಾವನೆ ದೊರಕುತ್ತದೆ.


ನಿಮ್ಮಲ್ಲಿಗೆ ನಾನು ಮರಳಿಬಂದಾಗ ಕ್ರಿಸ್ತಯೇಸುವಿನಲ್ಲಿ ನೀವು ಹಿರಿಹಿಗ್ಗುವುದಕ್ಕೆ ಮಹದವಕಾಶ ದೊರಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು