Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:5 - ಕನ್ನಡ ಸತ್ಯವೇದವು C.L. Bible (BSI)

5 ಪ್ರತಿಯೊಬ್ಬನೂ ತನ್ನ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಕೆಂದರೆ ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾಕಂದರೆ ಪ್ರತಿಯೊಬ್ಬನು ಸ್ವಂತ ಹೊರೆಯನ್ನು ಹೊತ್ತುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪ್ರತಿಯೊಬ್ಬನು ತನ್ನ ಜವಾಬ್ದಾರಿಕೆಯನ್ನು ತಾನೇ ಹೊತ್ತುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಪ್ರತಿಯೊಬ್ಬನೂ ತನ್ನ ಸ್ವಂತ ಹೊರೆಯನ್ನು ಹೊತ್ತುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕಶ್ಯಾಕ್ ಮಟ್ಲ್ಯಾರ್ ಹರ್ ಎಕ್ಲ್ಯಾನ್ಬಿ ಅಪ್ಲಿ ಜವಾಬ್ದಾರಿ ಅಪ್ನಿಚ್ ಉಕ್ಲುನ್ ಘೆವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:5
14 ತಿಳಿವುಗಳ ಹೋಲಿಕೆ  

ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ನೆಡುವವನೂ ನೀರೆರೆಯುವವನೂ ಇಬ್ಬರೂ ಅಗತ್ಯವಾಗಿ ಬೇಕಾದವರೇ. ಅವನವನ ದುಡಿಮೆಗೆ ತಕ್ಕ ಹಾಗೆ ಪ್ರತಿಯೊಬ್ಬನೂ ಸಂಭಾವನೆ ಪಡೆಯುತ್ತಾನೆ.


“ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ.


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ನೀನು ಜ್ಞಾನವಂತನಾದರೆ ನಿನ್ನ ಜ್ಞಾನ ನಿನಗೇ ಲಾಭಕರ; ಕುಚೋದ್ಯಗಾರನು ಆದರೆ ಸವಿಯುವೆ ಅದರ ಪ್ರತೀಕಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು