Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:8 - ಕನ್ನಡ ಸತ್ಯವೇದವು C.L. Bible (BSI)

8 ದೈಹಿಕ ವ್ಯಾಮೋಹವೆಂಬ ಸ್ವಭಾವದಲ್ಲಿ ಬಿತ್ತುವವನು ನಾಶವೆಂಬ ಫಲವನ್ನು ಕೊಯ್ಯುತ್ತಾನೆ. ಪವಿತ್ರಾತ್ಮ ಸ್ವಭಾವದಲ್ಲಿ ಬಿತ್ತುವವನು ಆತ್ಮದಿಂದ ನಿತ್ಯಜೀವವೆಂಬ ಫಲವನ್ನು ಕೊಯ್ಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶನವನ್ನು ಕೊಯ್ಯುವನು. ಆತ್ಮನನ್ನು ಕುರಿತು ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಒಬ್ಬನು ತನ್ನ ಶರೀರಭಾವವನ್ನು ತೃಪ್ತಿಪಡಿಸುವುದಕ್ಕಾಗಿ ಪಾಪ ಕಾರ್ಯಗಳನ್ನು ಮಾಡಿದರೆ ಆ ಶರೀರಭಾವವು ಅವನಿಗೆ ನಿತ್ಯನಾಶವನ್ನು ಬರಮಾಡುತ್ತದೆ. ಆದರೆ ಒಬ್ಬನು ಪವಿತ್ರಾತ್ಮನನ್ನು ಮೆಚ್ಚಿಸುವುದಕ್ಕಾಗಿ ಒಳ್ಳೆಯ ಕಾರ್ಯಗಳನ್ನು ಮಾಡುವುದಾಗಿದ್ದರೆ, ಅವನು ಪವಿತ್ರಾತ್ಮನಿಂದ ನಿತ್ಯಜೀವವನ್ನು ಹೊಂದಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮಾಂಸಭಾವಕ್ಕೆ ಬಿತ್ತುವವನು, ಮಾಂಸಭಾವದಿಂದ ನಾಶವನ್ನು ಕೊಯ್ಯುವನು. ಆದರೆ ದೇವರ ಆತ್ಮರನ್ನು ಮೆಚ್ಚಿಸಲು ಬಿತ್ತುವವನು, ಆತ್ಮದಿಂದ ನಿತ್ಯಜೀವವನ್ನು ಕೊಯ್ಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೆನಿ ಅಪ್ನಾಚ್ಯಾ ಮಾನ್ಸಾಚ್ಯಾ ಆಶೆನ್ ಪೆರ್‍ಲ್ಯಾರ್; ತ್ಯಾತುರ್ನಾ ತೆನಿ ಗೊಳಾ ಕರ್‍ತಲೆ ಪಿಕ್ಕ್ ಮರಾನ್. ತೆನಿ ಪವಿತ್ರ್ ಆತ್ಮ್ಯಾಚ್ಯಾ ಶೆತಾತ್ ಪೆರಲ್ಲೆ ರ್‍ಹಾಲ್ಯಾರ್, ಪವಿತ್ರ್ ಆತ್ಮ್ಯಾಕ್ನಾ ತೆನಿ ಗೊಳಾ ಕರ್‍ತಲೆ ಪಿಕ್ಕ್ ಕನ್ನಾಬಿ ಮರಾನ್ ನಸಲ್ಲೆ ಜಿವನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:8
31 ತಿಳಿವುಗಳ ಹೋಲಿಕೆ  

ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಬಾಳಿದರೆ ಖಂಡಿತವಾಗಿ ಸಾಯುವಿರಿ. ಪವಿತ್ರಾತ್ಮ ಅವರ ನೆರವಿನಿಂದ ದೈಹಿಕ ದುರಭ್ಯಾಸಗಳನ್ನು ದಮನಮಾಡಿದರೆ ಜೀವಿಸುವಿರಿ.


ಸಮಾಧಾನಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ದೇವರೊಡನೆ ಸತ್ಸಂಬಂಧವೆಂಬ ಫಲವನ್ನು ಕೊಯ್ಯುತ್ತಾರೆ.


ತಾವೇ ದುರಭ್ಯಾಸಗಳಿಗೆ ಗುಲಾಮರಾಗಿದ್ದರೂ ತಾವು ವಶಪಡಿಸಿಕೊಂಡವರಿಗೆ ಸ್ವಾತಂತ್ರ್ಯವನ್ನು ತರುವ ಮಾತುಕೊಡುತ್ತಾರೆ. ಒಬ್ಬನು ಯಾವುದಕ್ಕೆ ಸೋಲುತ್ತಾನೋ ಅದಕ್ಕೆ ಅವನು ಗುಲಾಮನಾಗುತ್ತಾನೆ.


ನನಗೆ ತಿಳಿದಮಟ್ಟಿಗೆ, ಕೆಟ್ಟದ್ದನ್ನು ನೆಡುವವರು, ದುಷ್ಟತನವನು ಬಿತ್ತುವವರು, ಅದನ್ನೆ ಕೊಯ್ಯುವರು.


ಇದಕ್ಕೆ ಬದಲಾಗಿ ನೀನು ಅಧರ್ಮದ ಬೀಜವನ್ನು ಬಿತ್ತಿರುವೆ, ಅನ್ಯಾಯದ ಬೆಳೆಯನ್ನು ಕೊಯ್ದಿರುವೆ. ಅಸತ್ಯದ ಫಲವನ್ನು ಉಂಡಿರುವೆ. ನಿನ್ನ ಭುಜಬಲದಲ್ಲೂ ಸಮರಶೂರರಲ್ಲೂ ಭರವಸೆಯಿಟ್ಟೆ.


ಮೋಸಹೋಗದಿರಿ, ದೇವರನ್ನು ವಂಚಿಸಬಹುದೆಂದು ಭಾವಿಸದಿರಿ; ಬಿತ್ತುವುದನ್ನೇ ಕೊಯ್ಯುತ್ತೇವೆ ಎಂಬುದನ್ನು ನೆನಪಿನಲ್ಲಿಡಿ.


ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ.


ಕೆಟ್ಟತನವನ್ನು ಬಿತ್ತುವವನು ಕೇಡನ್ನೆ ಕೊಯ್ಯುವನು; ಅವನ ಸಿಟ್ಟು ಅವನನ್ನೆ ಸುಟ್ಟುಬಿಡುವುದು.


ಅಕ್ರಮಿಯು ತನ್ನ ಅಕ್ರಮವನ್ನು ಮುಂದುವರೆಸಲಿ. ಅಶುದ್ಧನು ತನ್ನ ಅಶುದ್ಧತೆಯಲ್ಲಿ ಮುಂದುವರೆಯಲಿ. ಸಜ್ಜನನು ತನ್ನ ಸನ್ನಡತೆಯಲ್ಲಿಯೇ ನಿರತನಾಗಿರಲಿ. ಪವಿತ್ರನು ತನ್ನ ಪಾವಿತ್ರ್ಯತೆಯನ್ನು ಹೆಚ್ಚಿಸಿಕೊಳ್ಳಲಿ,” ಎಂದನು.


ಕೊಯ್ದವನು ಈಗಾಗಲೇ ಕೂಲಿಯನ್ನು ಪಡೆಯುತ್ತಾನೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಪಡುತ್ತಾರೆ.


ನಿತ್ಯಜೀವವನ್ನು ದಯಪಾಲಿಸುವ ಕರುಣಾಮಯ ಪ್ರಭು ಯೇಸುಕ್ರಿಸ್ತರನ್ನು ಎದುರುನೋಡುತ್ತಾ ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ.


ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ನಿಮ್ಮ ದೇಹದ ಯಾವುದೇ ಅಂಗವು ದುಷ್ಕೃತ್ಯವನ್ನೆಸಗುವ ಸಾಧನವಾಗುವಂತೆ ಪಾಪದ ಕಾರ್ಯಕ್ಕೆ ಅದನ್ನು ಒಪ್ಪಿಸದಿರಿ. ಬದಲಾಗಿ ಸತ್ತು ಜೀವಕ್ಕೆ ಬಂದವರಂತೆ ದೇವರಿಗೆ ನಿಮ್ಮನ್ನೇ ಸಮರ್ಪಿಸಿಕೊಳ್ಳಿರಿ; ನಿಮ್ಮ ಅಂಗಗಳನ್ನು ಸತ್ಕಾರ್ಯ ಸಾಧನಗಳನ್ನಾಗಿ ದೇವರಿಗೆ ಒಪ್ಪಿಸಿಕೊಡಿರಿ.


ಜನರು ಗೋದಿಯನ್ನು ಬಿತ್ತಿದರು ಆದರೆ ಮುಳ್ಳುಗಿಡವನ್ನು ಕೊಯ್ದರು ! ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರು ಆದರೆ ಯಾವ ಲಾಭವೂ ಗಿಟ್ಟದೆಹೋಯಿತು. ತಮ್ಮ ಬೆಳೆಯ ವಿಷಯವಾಗಿ ಹೇಸಬೇಕಾಯಿತು ನನ್ನ ಕೋಪಾಗ್ನಿಯೆ ಇದಕ್ಕೆ ಕಾರಣವಾಯಿತು.”


ಮುಂಜಾನೆಯಲ್ಲೇ ಬೀಜಬಿತ್ತು; ಸಂಜೆಯಲ್ಲೂ ನಿನ್ನ ಕೈಗೆ ಬಿಡುವುಕೊಡಬೇಡ; ಇದು ಸಫಲವೋ ಅದು ಸಫಲವೋ ನಿನ್ನಿಂದ ಹೇಳಲಾಗದು. ಒಂದು ವೇಳೆ ಎರಡೂ ಒಳ್ಳೆಯ ಬೆಳೆಯನ್ನು ಕೊಡಬಹುದು.


ನನ್ನ ನಾಮದ ನಿಮಿತ್ತ ಮನೆಮಠವನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಂದೆತಾಯಿಯರನ್ನಾಗಲಿ, ಮಕ್ಕಳುಮರಿಗಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುವ ಪ್ರತಿಯೊಬ್ಬನೂ ನೂರ್ಮಡಿಯಷ್ಟು ಪಡೆಯುವನು; ಮಾತ್ರವಲ್ಲ, ಅಮರಜೀವಕ್ಕೆ ಬಾಧ್ಯಸ್ಥನಾಗುವನು.


ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು.


ಹೀಗೆ ದೈವಾನುಗ್ರಹದಿಂದ ನಾವು ದೇವರೊಡನೆ ಸತ್ಸಂಬಂಧವನ್ನು ಹೊಂದಿದೆವು. ನಿತ್ಯಜೀವದ ಭರವಸೆಯನ್ನು ಪಡೆದು ಆ ಜೀವಕ್ಕೆ ಬಾಧ್ಯಸ್ಥರಾದೆವು. ಇದು ಸತ್ಯವಾದ ಮಾತು.


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ಅವನು ಈ ಕಾಲದಲ್ಲಿ ಅದಕ್ಕಿಂತಲೂ ಮಿಗಿಲಾದುದನ್ನೂ ಮುಂದಿನ ಲೋಕದಲ್ಲಿ ಅಮರಜೀವವನ್ನೂ ಪಡೆಯುವನು,” ಎಂದರು.


ನೀರಿರುವ ಕಡೆಗಳಲ್ಲೆಲ್ಲಾ ಬಿತ್ತನೆಮಾಡುವಿರಿ. ದನಕತ್ತೆಗಳನ್ನು ಇಷ್ಟಬಂದ ಹಾಗೆ ಮೇಯಲು ಬಿಡುವಿರಿ.


ಸಹಜ ಪ್ರವೃತ್ತಿಯಿಂದ ಬೇಟೆಗಾಗಿಯೂ ಕೊಲೆಗಾಗಿಯೂ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತೆ ಬಾಳುವ ಈ ದುರ್ಬೋಧಕರಾದರೋ ತಮಗೆ ತಿಳಿಯದವುಗಳನ್ನು ದೂಷಣೆಮಾಡುತ್ತಾರೆ. ಆ ಪ್ರಾಣಿಗಳು ನಾಶವಾಗುವಂತೆಯೇ ಇವರೂ ನಾಶವಾಗುತ್ತಾರೆ.


ಇದರಿಂದಾಗಿ, ಮುಂದೆ ವಿಶ್ವಾಸಿಗಳಾಗಿ ನಿತ್ಯಜೀವ ಪಡೆಯುವವರಿಗೆ ಆದರ್ಶ ದೊರಕುವಂತೆ ಕ್ರಿಸ್ತಯೇಸು ನನಗೆ ಪೂರ್ಣ ಸಹನೆ ತೋರಿದರು. ಇದು ದೇವರ ಕರುಣೆಯೇ ಸರಿ.


ದುರುಳನು ಪಡೆವ ಸಂಬಳ ಜೊಳ್ಳು ಸಂಬಳ; ನೀತಿಯನ್ನು ಬಿತ್ತುವವನು ಪಡೆವನು ಸತ್ಫಲ.


“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ಶರೀರ ಸ್ವಭಾವದಲ್ಲೆ ಮಗ್ನರಾಗಿರುವುದರ ಪರಿಣಾಮ ಮರಣ; ಪವಿತ್ರಾತ್ಮ ಅವರಲ್ಲೇ ಮಗ್ನರಾಗಿರುವುದರ ಪರಿಣಾಮ ಸಜ್ಜೀವ ಮತ್ತು ಶಾಂತಿಸಮಾಧಾನ.


ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.


ಸತ್ತವರ ಪುನರುತ್ಥಾನವೂ ಹಾಗೆಯೇ. ಬಿತ್ತುವಂಥದ್ದು ಅಳಿದುಹೋಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದುದು. ಬಿತ್ತಿದ್ದು ಬಲಹೀನವಾದುದು; ಪುನರುತ್ಥಾನಹೊಂದುವಂಥದ್ದು, ಬಲಿಷ್ಠವಾದುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು