Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:9 - ಕನ್ನಡ ಸತ್ಯವೇದವು C.L. Bible (BSI)

9 ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಒಳ್ಳೇದನ್ನು ಮಾಡುವದರಲ್ಲಿ ಬೇಸರಗೊಳ್ಳದೆ ಇರೋಣ. ಯಾಕಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾವು ಒಳ್ಳೆಯ ಕಾರ್ಯ ಮಾಡುವುದರಲ್ಲಿ ಬೇಸರಗೊಳ್ಳಬಾರದು. ತಕ್ಕ ಸಮಯದಲ್ಲಿ ನಾವು ನಿತ್ಯಜೀವವೆಂಬ ಸುಗ್ಗಿಯನ್ನು ಪಡೆಯುವೆವು. ಆದ್ದರಿಂದ ಒಳ್ಳೆಯ ಕಾರ್ಯ ಮಾಡುವುದನ್ನು ನಾವು ಬಿಟ್ಟುಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಒಳ್ಳೆಯದನ್ನು ಮಾಡುವುದರಲ್ಲಿ ಎದೆಗುಂದದಿರೋಣ. ಏಕೆಂದರೆ ನಾವು ಬೇಸರಗೊಳ್ಳದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆಚ್ಯಾಸಾಟ್ನಿ ಅಮಿ ಕನ್ನಾಬಿ ಬರೆ ಕರ್ತಲ್ಯಾತ್ ಹಾರುಚೆ ನ್ಹಯ್, ಕಶ್ಯಾಕ್ ಮಟ್ಲ್ಯಾರ್, ಅಮಿ ಸೊಡಿನಸ್ತಾನಾ ಘಟ್ಟ್ ರ್‍ಹಾಲ್ಯಾರ್ ಸಮಾ ಎಳಾರ್ ಗಾವ್ಕ್ ಪಾಜೆ ಮನುನ್ ಹೊತ್ತೆ ಪಿಕ್ಕ್ ಅಮಿ ಕಾತರ್‍ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:9
42 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ನೀವಾದರೋ ಸಹೋದರರೇ, ಸತ್ಕಾರ್ಯದ ಸಾಧನೆ ಸಾಕಾಯಿತೆಂದು ಹೇಳಿದಿರಿ.


ಪಾಪಿಗಳಿಂದ ತಮಗುಂಟಾದ ಕಠಿಣ ವಿರೋಧವನ್ನು ಯೇಸುಸ್ವಾಮಿ ಹೇಗೆ ಸಹಿಸಿಕೊಂಡರೆಂಬುದನ್ನು ಮನಸ್ಸಿನಲ್ಲಿಡಿ. ಆಗ ನೀವು ಬೇಸತ್ತು ಎದೆಗುಂದಲಾರಿರಿ.


ನಿಮ್ಮ ಒಳ್ಳೆಯ ನಡತೆಯಿಂದ, ಅರಿವಿಲ್ಲದೆ ಮಾತನಾಡುವ ಮೂಢಜನರ ಬಾಯನ್ನು ಮುಚ್ಚಿಸಬೇಕೆಂಬುದೇ ದೇವರ ಇಚ್ಛೆ.


ಆದ್ದರಿಂದ ಸಹೋದರರೇ, ಪ್ರಭು ಪುನರಾಗಮಿಸುವವರೆಗೆ ತಾಳ್ಮೆಯಿಂದ ಇರಿ. ರೈತನನ್ನು ಗಮನಿಸಿರಿ: ತನ್ನ ಹೊಲದಲ್ಲಿ ಉತ್ತಮ ಬೆಳೆಯನ್ನು ನಿರೀಕ್ಷಿಸುವ ಅವನು ಮುಂಗಾರು ಹಿಂಗಾರು ಮಳೆಗಾಗಿ ತಾಳ್ಮೆಯಿಂದ ಕಾದಿರುತ್ತಾನೆ.


ಕೆಟ್ಟದ್ದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದಕ್ಕಿಂತ ದೇವರ ಚಿತ್ತವಾದರೆ, ಒಳ್ಳೆಯದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದೇ ಲೇಸು.


ಹೀಗಿರಲು, ನಾವು ಎದೆಗುಂದುವುದಿಲ್ಲ. ನಮ್ಮ ಭೌತಿಕ ದೇಹವು ನಶಿಸುತ್ತಿದ್ದರೂ ನಮ್ಮ ಅಂತರಂಗವು ದಿನೇದಿನೇ ನೂತನವಾಗುತ್ತದೆ.


ಹೌದು, ಸಹನಾಶಕ್ತಿ ನಿನಗಿದೆ. ಬೇಸರಗೊಳ್ಳದೆ ನನ್ನ ಹೆಸರಿನ ನಿಮಿತ್ತ ನೀನು ಕಷ್ಟಸಂಕಟಗಳನ್ನು ತಾಳಿಕೊಂಡೆ.


ಆದ್ದರಿಂದ, ದೇವರ ಚಿತ್ತಾನುಸಾರ ಹಿಂಸೆಬಾಧೆಯನ್ನು ಅನುಭವಿಸುವವರು ತಮ್ಮ ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಸೃಷ್ಟಿಕರ್ತನಿಗೆ ಶರಣಾಗಲಿ. ಆತ ಅವರನ್ನೆಂದಿಗೂ ಕೈಬಿಡನು.


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.


ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಆದರೆ ಕೊನೆಯವರೆಗೂ ಸ್ಥಿರವಾಗಿರುವವರು ಜೀವೋದ್ಧಾರವನ್ನು ಹೊಂದುವರು.


ನಾನು ಮುಂಗಾರು ಹಿಂಗಾರು ಮಳೆಗಳನ್ನು ಕಾಲಕಾಲಕ್ಕೆ ಸರಿಯಾಗಿ ಬರಮಾಡುವೆನು. ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುವು. ತೋಟದ ಮರಗಳು ಹೇರಳವಾದ ಫಲಕೊಡುವುವು.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಆಗುವುದು. ನಿಮ್ಮ ಭೂಮಿಗೆ ಬೇಕಾದ ಮುಂಗಾರು ಹಿಂಗಾರುಗಳನ್ನು ಅವರು ಸರಿಯಾಗಿ ಸುರಿಸುವರು.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


ಎತ್ತುವನಾತ ಬಿದ್ದವರನೆಲ್ಲ I ಉದ್ಧರಿಪನು ಕುಗ್ಗಿದವರನೆಲ್ಲ II


ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.


ಜೆರುಸಲೇಮಿಗೆ ಈ ಪರಿ ಹೇಳುವರು ಆ ದಿನದೊಳು: “ಅಂಜಬೇಡ ಸಿಯೋನ್, ಸೋತು ಜೋಲುಬೀಳದಿರಲಿ ನಿನ್ನ ಕೈಗಳು.”


ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


ಆದುದರಿಂದ ನಿಮಗಾಗಿ ನಾನು ಸಹಿಸುತ್ತಿರುವ ಸಂಕಟಗಳನ್ನು ನೆನೆದು ಎದೆಗುಂದದಿರಿ. ಇದೆಲ್ಲವೂ ನಿಮ್ಮ ಯಶಸ್ವಿಗಾಗಿಯೇ ಎಂಬುದನ್ನು ಮರೆಯದಿರಿ.


ಸಕಾಲದಲೊದಗಿಸುವೆ ಆಹಾರವನು I ನಂಬಿಕೊಂಡಿವೆ ಆ ಜೀವಿಗಳು ನಿನ್ನನು II


ಮಕ್ಕಳಿಗೆ ಹೇಳುವಂತೆ ದೇವರು ನಿಮಗೆ ಹೇಳಿರುವ ಎಚ್ಚರಿಕೆಯ ಮಾತನ್ನು ನೀವು ಮರೆತುಬಿಟ್ಟಿರೋ? “ಸುಕುಮಾರಾ, ಸರ್ವೇಶ್ವರ ಕೊಡುವ ಶಿಕ್ಷೆಯನ್ನು ತಾತ್ಸಾರ ಮಾಡದಿರು ಅವರು ನಿನ್ನನ್ನು ದಂಡಿಸುವಾಗ ಧೈರ್ಯಗೆಡದಿರು


ಅಯ್ಯೋ, ಎಷ್ಟು ಬೇಸರವಾದುದು ಈ ಸೇವೆ’ ಎಂದುಕೊಂಡು ನೀವು ಅದನ್ನು ತಾತ್ಸಾರಮಾಡುತ್ತೀರಿ. “ಕಳವಿನ ಪಶುವನ್ನು, ರೋಗ ಹಿಡಿದ, ಊನವಾದ ಪ್ರಾಣಿಯನ್ನು ಅರ್ಪಿಸುತ್ತೀರಿ. ಇಂಥ ಕಾಣಿಕೆಯನ್ನು ನಿಮ್ಮ ಕೈಗಳಿಂದ ನಾನು ಸ್ವೀಕರಿಸಲೋ?’ ಎಂದು ಕೇಳುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಅಳುತಳುತ್ತಾ ಬಿತ್ತುವವರು I ನಲಿನಲಿಯುತ್ತಾ ಕೊಯ್ಯುವರು II


ದುರುಳನು ಪಡೆವ ಸಂಬಳ ಜೊಳ್ಳು ಸಂಬಳ; ನೀತಿಯನ್ನು ಬಿತ್ತುವವನು ಪಡೆವನು ಸತ್ಫಲ.


ನಿನ್ನ ಆಹಾರ ಧಾನ್ಯವನ್ನು ಹೊರನಾಡಿನ ವ್ಯಾಪಾರಕ್ಕೆ ಹಾಕು. ಬಹುದಿನದ ಮೇಲೆ ಅದು ಬಡ್ಡಿ ಸಮೇತ ನಿನಗೆ ಸಿಕ್ಕುವುದು.


ವ್ಯಥೆಪಡುತ್ತಿದ್ದ ನನಗೆ ಸರ್ವೇಶ್ವರ ದುಃಖದ ಮೇಲೆ ದುಃಖ ಕಳುಹಿಸಿದ್ದಾರೆ. ನಾನು ನರಳಿ ದಣಿದು ಹೋಗಿದ್ದೇನೆ. ನನಗೆ ಯಾವ ನೆಮ್ಮದಿಯೂ ದೊರಕದಿದೆ’ ಎಂದು ಹೇಳುತ್ತಿರುವೆ ಅಲ್ಲವೆ?


ವಿರಳವಾಗಿ ಬಿತ್ತುವವನು ವಿರಳವಾಗಿ ಕೊಯ್ಯುತ್ತಾನೆ ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ


ಯಕೋಬನು, “ಇನ್ನೂ ಬಹಳ ಹೊತ್ತು ಇದೆ; ಕುರಿಗಳನ್ನು ಒಟ್ಟುಗೂಡಿಸುವ ಸಮಯ ಆಗಿಲ್ಲ; ನೀರು ಕುಡಿಸಿ ಅವುಗಳನ್ನು ಮೇಯಿಸಬಾರದೇಕೆ?” ಎಂದನು.


ಯೇಸು ಎದ್ದು ಅವನ ಹಿಂದೆ ಹೊರಟರು. ಶಿಷ್ಯರೂ ಹಿಂಬಾಲಿಸಿಹೋದರು.


ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ.


ಯೇಸು ಬತ್ತಿದ ಕೈಯುಳ್ಳವನಿಗೆ, “ಎದ್ದು ಮುಂದಕ್ಕೆ ಬಾ,” ಎಂದರು. ಬಳಿಕ ಅಲ್ಲಿದ್ದವರನ್ನು ಉದ್ದೇಶಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು