Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:14 - ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರಸ್ವಾಮಿಯ ಮಹಾದಿನ ಹತ್ತಿರವಾಯಿತು; ಸಮೀಪಿಸಿತು. ಅದು ಬಹು ತ್ವರೆಯಾಗಿ ಬರುತ್ತಿದೆ; ಅದು ಕಠೋರವಾದ ದಿನ, ಆ ದಿನದ ಸುದ್ದಿ ಕಹಿಯಾದುದು, ಎಂಥಾ ಶೂರರನ್ನೂ ಕೂಡ ಘೋರವಾಗಿ ಗೋಳಾಡಿಸುವಂಥದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನ ಮಹಾದಿನವು ಹತ್ತಿರವಾಯಿತು, ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನ ನ್ಯಾಯತೀರ್ಪಿನ ದಿನವು ಬೇಗನೇ ಬರುತ್ತದೆ; ಅತ್ಯಂತ ವೇಗವಾಗಿ ಬರುತ್ತಿದೆ. ಆ ದಿನದಂದು ಜನರು ಬಹಳವಾಗಿ ದುಃಖಿಸುವರು. ಧೈರ್ಯಶಾಲಿಗಳಾದ ಸೈನಿಕರೂ ಅಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರ ಮಹಾದಿವಸವು ಸಮೀಪವಾಗಿದೆ, ಬಹು ತ್ವರೆಯಾಗಿ ಬರುತ್ತಿದೆ. ಕೇಳಿರಿ. ಯೆಹೋವ ದೇವರ ದಿನದಂದು ಕೂಗು ಕಹಿಯಾಗಿರುವುದು. ಶೂರನು ಅಲ್ಲಿ ಬೊಬ್ಬೆ ಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:14
31 ತಿಳಿವುಗಳ ಹೋಲಿಕೆ  

“ಇಗೋ, ಸರ್ವೇಶ್ವರಸ್ವಾಮಿಯ ಆಗಮನದ ಭಯಂಕರ ಮಹಾದಿನ ಬರುವುದಕ್ಕೆ ಮುಂಚೆ ಪ್ರವಾದಿ ಎಲೀಯನನ್ನು ನಿಮ್ಮಲ್ಲಿಗೆ ಕಳುಹಿಸುವೆನು.


ಹೌದು, ಸಮೀಪಿಸಿತು ಸರ್ವೇಶ್ವರನ ದಿನ, ಕಾರ್ಮುಗಿಲ ದಿನ ಅದು ರಾಷ್ಟ್ರಗಳಿಗೆ ನ್ಯಾಯತೀರಿಸತಕ್ಕ ಕಾಲ.


“ಸ್ವಾಮಿ ಸರ್ವೇಶ್ವರ ನ್ಯಾಯತೀರ್ಪು ನೀಡುವ ದಿನ ಸಮೀಪಿಸಿದೆ; ಆದುದರಿಂದ ಅವರ ಸನ್ನಿಧಿಯಲ್ಲಿ ಮೌನ ತಾಳಿರಿ. ಸರ್ವೇಶ್ವರ, ಯಜ್ಞದ ಔತಣವನ್ನು ಸಿದ್ಧಗೊಳಿಸಿದ್ದಾರೆ. ಅತಿಥಿಗಳನ್ನು ಪವಿತ್ರೀಕರಿಸಿದ್ದಾರೆ.


ಸರ್ವೇಶ್ವರ ಗರ್ಜಿಸಿ ತಮ್ಮ ಸೈನ್ಯಕ್ಕೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ದೊಡ್ಡದು. ಅವರ ಆಜ್ಞೆಯನ್ನು ಪಾಲಿಸುವವನು ಬಲಾಢ್ಯನು. ಸರ್ವೇಶ್ವರಸ್ವಾಮಿಯ ದಿನ ಮಹತ್ತರ; ಅತಿ ಭಯಂಕರ; ಅದರೆದುರಿಗೆ ನಿಲ್ಲಲು ಯಾರಿಗಿದೆ ಧೈರ್ಯ?


ಆಜ್ಞಾಘೋಷವಾದಾಗ, ಪ್ರಧಾನ ದೂತನ ಧ್ವನಿಯು ಕೇಳಿಬಂದಾಗ, ದೇವರ ತುತೂರಿ ನಾದಗೈದಾಗ, ಪ್ರಭುವೇ ಸ್ವರ್ಗದಿಂದ ಇಳಿದುಬರುತ್ತಾರೆ. ಆಗ, ಕ್ರಿಸ್ತಸ್ಥರಾಗಿ ಮೃತರಾದವರು ಮೊದಲು ಎದ್ದುಬರುತ್ತಾರೆ.


“ಸಮಯ ಬಂದಿದೆ, ದಿನ ಹತ್ತಿರವಾಗಿದೆ; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿ ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ಇಗೋ, ವೀರರು ಹೊರಗೆ ಹಾಹಾಕಾರ ಮಾಡುತಿಹರು. ಶಾಂತಿದೂತರಾದ ರಾಯಭಾರಿಗಳು ಘೋರವಾಗಿ ಅಳುತಿಹರು.


ಕೂಗಿಕೊಳ್ಳುತಿಹವು ಹೆಷ್ಬೋನ್ ಎಲೆಯಾಲೆಗಳು, ಕೇಳಿಬರುತಿಹುದು ಯಹಚಿನವರೆಗೂ ಅವುಗಳ ರೋದನವು, ಕಿರಿಚಿಕೊಳ್ಳುತಿಹರು ಮೋವಾಬಿನ ಸೇನೆಯಾಳುಗಳು, ತತ್ತರಿಸಿ ಹೋಗಿಹವು ಅವರ ಗುಂಡಿಗೆಗಳು.


ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ.


ರವಿ ಕಪ್ಪಾಗುವನು, ಶಶಿ ಕಡುಗೆಂಪಾಗುವನು, ಪ್ರಭುವಿನ ಮಹಿಮಾದಿನಕ್ಕೆ ಮುನ್ನ ಸಂಭವಿಸುವುವು ಇವೆಲ್ಲಾ.


ಸರ್ವೇಶ್ವರಸ್ವಾಮಿಯ ದಿನ ಸಮೀಪಿಸಿದೆ. ಆ ದಿನ ಸರ್ವಶಕ್ತನಿಂದ ವಿನಾಶವನ್ನು ತರಲಿದೆ; ಎಂಥಾ ಭಯಂಕರ ದಿನವದು!


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. “ಮಾಗಿದ ಹಣ್ಣಿನ ಒಂದು ಬುಟ್ಟಿ” ಎಂದು ಉತ್ತರಿಸಿದೆ. ಆಗ ಸರ್ವೇಶ್ವರ ನನಗೆ ಹೀಗೆಂದರು: “ಇಸ್ರಯೇಲರಾದ ನನ್ನ ಜನರಿಗೆ ಕಡೆಗಾಲ ಮಾಗುತ್ತಾ ಬಂದಿದೆ. ಇನ್ನು ಅವರನ್ನು ಕಂಡೂ ಕಾಣದಂತೆ ಇರಲಾರೆ. ಅವರನ್ನು ದಂಡಿಸಿಯೇ ತೀರುವೆನು.


ಸರ್ವೇಶ್ವರಸ್ವಾಮಿಯ ಭಯಂಕರ ಮಹಾದಿನದ ಮುಂಚೆ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ರಕ್ತಗೆಂಪಾಗುವನು.


“ಆ ದಿನದಲ್ಲಿ ಜೆರುಸಲೇಮಿನಲ್ಲಿರುವ ಮೀನುಬಾಗಿಲಿನ ಬಳಿ ಕೂಗಾಟವನ್ನು, ಪಟ್ಟಣದ ಹೊಸ ಬಡಾವಣೆಯಲ್ಲಿ ಗೋಳಾಟವನ್ನು, ಹಾಗೂ ಬೆಟ್ಟಗುಡ್ಡಗಳಲ್ಲಿ ಭೀಕರ ಗದ್ದಲವನ್ನು ಕೇಳುವಿರಿ. ಇದು ಸರ್ವೇಶ್ವರಸ್ವಾಮಿಯ ನುಡಿ.


ಸ್ವಾಮಿ ಸಿಯೋನಿನಿಂದ ಗರ್ಜಿಸುತ್ತಾರೆ, ಜೆರುಸಲೇಮಿನಿಂದ ಅವರ ಧ್ವನಿ ಮೊಳಗುತ್ತದೆ. ಭೂಮ್ಯಾಕಾಶಗಳು ನಡುಗುತ್ತವೆ. ಆದರೂ ಸರ್ವೇಶ್ವರ ತಮ್ಮ ಜನರಿಗೆ ಆಶ್ರಯ; ಇಸ್ರಯೇಲರಿಗೆ ರಕ್ಷಣಾ ದುರ್ಗ.


ಸಿಯೋನಿನಲ್ಲಿ ಕೊಂಬೂದಿರಿ; ನನ್ನ ಪರಿಶುದ್ಧಪರ್ವತದಲ್ಲಿ ಎಚ್ಚರಿಕೆಯ ವಾಣಿ ಮೊಳಗಲಿ; ಸಮಸ್ತ ದೇಶನಿವಾಸಿಗಳು ಹೆದರಿ ನಡುಗಲಿ; ಸರ್ವೇಶ್ವರಸ್ವಾಮಿಯ ದಿನ ಬರಲಿದೆ. ಸನ್ನಿಹಿತವಾಗಿದೆ.


ಅವರಿಗೆ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಈ ಗಾದೆಯನ್ನು ನಿಲ್ಲಿಸಿಬಿಡುವೆನು; ಅದು ಇಸ್ರಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಆ ಮಾತನ್ನು ಕೇಳಿರಿ: ಕ್ಲುಪ್ತಕಾಲ ಹತ್ತಿರಬಂದಿದೆ. ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ.


ನಗರಗಳನ್ನು ಹಿಡಿಯುವನು, ಕೋಟೆಗಳನ್ನು ಆಕ್ರಮಿಸುವನು. ಆ ದಿನದಂದು, ಹೆರುವ ಹೆಂಗಸಿನ ಎದೆಯಂತೆ ಅದರುವುದು ಮೋವಾಬಿನ ಶೂರರ ಎದೆ.


ಹೌದು, ಭಯಂಕರವಾದ ದಿನ ಬರಲಿದೆ, ಅದಕ್ಕಿರದು ಎಣೆ! ಅದು ಇಕ್ಕಟ್ಟಿನ ದಿನ, ಆದರೂ ಅದರಿಂದ ಯಕೋಬ್ಯರಿಗಿದೆ ಬಿಡುಗಡೆ.”


ಅಕಟಕಟಾ, ಕುರಿಗಾಹಿಗಳ ಕೂಗಾಟ ಮೇಷಪಾಲರ ಕಿರುಚಾಟ ಸರ್ವೇಶ್ವರನಿಂದಲೆ ಆ ಹುಲ್ಲುಗಾವಲಿನ ವಿನಾಶ!


ಇಗೋ ಕೇಳಿ, ನಗರದ ಕಡೆಯಿಂದ ಕೋಲಾಹಲದ ಶಬ್ದ, ದೇವಾಲಯದಲ್ಲಿ ಶಬ್ದ, ಸರ್ವೇಶ್ವರ ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ !


ಅಂದು ದೇವರ ಧ್ವನಿಗೆ ಭೂಮಿಯು ನಡುಗಿತು. ಇಂದಾದರೋ, “ಇನ್ನೂ ಒಂದು ಸಾರಿ ನಾನು ಭೂಮಿಯನ್ನಷ್ಟೇ ಅಲ್ಲ, ಆಕಾಶವನ್ನೂ ನಡುಗಿಸುತ್ತೇನೆ,” ಎಂದು ಪ್ರತಿಜ್ಞೆಮಾಡಿರುತ್ತಾರೆ.


ನಿಮ್ಮ ಸಹನೆ, ಸಹಾನುಭೂತಿ ಸರ್ವರಿಗೂ ತಿಳಿದಿರಲಿ. ಪ್ರಭುವಿನ ಪುನರಾಗಮನ ಸಮೀಪಿಸಿದೆ.


ಆಕಾಶವನ್ನು ದಿಟ್ಟಿಸಿ ನೋಡಿದರೂ ಭೂಮಿಯನ್ನು ದುರುಗುಟ್ಟಿ ನೋಡಿದರೂ ಅವರಿಗೆ ಕಾಣುವುದು ಕಷ್ಟಸಂಕಟಗಳ ಕತ್ತಲೆ, ಭಯಂಕರವಾದ ಕಾಳಗತ್ತಲೆಯಲ್ಲದೆ ಮತ್ತೇನೂ ಅಲ್ಲ. ಅಂಥ ಕರಾಳ ಕತ್ತಲೆಯೊಳಗೆ ಅವರನ್ನು ದೂಡಲಾಗುವುದು.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಿಡುತ್ತಿರುವರು.


“ಇಗೋ, ನ್ಯಾಯತೀರ್ಪಿನ ಕಣಿವೆಯಲ್ಲಿ ತಂಡೋಪತಂಡವಾದ ಜನಸ್ತೋಮ! ತೀರ್ಪಿನ ಕಣಿವೆಯಲ್ಲಿರುವವರಿಗೆ ಸರ್ವೇಶ್ವರನ ದಿನ ಸನ್ನಿಹಿತ!


“ಆದರೆ, ನನ್ನ ಕಣ್ಣಿಗೆ ಕಾಣುತ್ತಿರುವುದೇನು? ಅವರು ಓಡುತ್ತಿರುವರು ನೋಡು, ಧೈರ್ಯಗೆಟ್ಟು, ಬೆನ್ನುಗೊಟ್ಟು. ಅವರ ಶೂರರು ಹಿಂದಿರುಗದೆ ಓಡುತ್ತಿರುವರು ಪೆಟ್ಟುತಿಂದು, ದಿಗಿಲು ಕವಿದಿದೆ ಸುತ್ತ ಮುತ್ತಲು,” ಸರ್ವೇಶ್ವರನ ವಾಣಿ ಇದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು