Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:17 - ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರ ಇಂತೆನ್ನುತ್ತಾರೆ, “ಮಾನವರ ಮೇಲೆ ಕಷ್ಟ - ಸಂಕಷ್ಟಗಳನ್ನು ಬರಮಾಡುವೆನು; ಅವರು ಕುರುಡರಂತೆ ತಡಕಾಡುವರು. ಏಕೆಂದರೆ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ; ಅವರ ರಕ್ತವನ್ನು ನೀರಿನಂತೆ ಚೆಲ್ಲಲಾಗುವುದು; ಅವರ ಹೆಣಗಳನ್ನು ಕಸದಂತೆ ಕೊಳೆಯಲು ಬಿಡಲಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ಧೂಳಿನಂತೆ ಚೆಲ್ಲಿ ಹೋಗುವುದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ದೂಳಿನಂತೆ ಚೆಲ್ಲಿಹೋಗುವದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನು ಹೇಳುವುದೇನೆಂದರೆ, “ಜನರ ಜೀವನವನ್ನು ನಾನು ಬಹು ಕಷ್ಟಕರವಾಗಿ ಮಾಡುವೆನು. ಅವರು ಕುರುಡರಂತೆ ಅತ್ತಿತ್ತ ತೊಳಲಾಡುವರು. ತಾವು ಎಲ್ಲಿಗೆ ಹೋಗುತ್ತಿದ್ದಾರೆಂದು ಅವರಿಗೆ ತಿಳಿಯದು. ಯಾಕೆಂದರೆ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದಾರೆ. ಅನೇಕ ಮಂದಿ ಕೊಲ್ಲಲ್ಪಡುವರು. ಅವರ ರಕ್ತವು ಭೂಮಿಗೆ ಸುರಿಯಲ್ಪಡುವುದು. ಅವರ ಹೆಣಗಳು ಮಲದ ಹಾಗೆ ನೆಲದಲ್ಲಿ ಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು. ಅವರು ಕುರುಡರ ಹಾಗೆ ತಡಕುವರು. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ. ಅವರ ರಕ್ತವು ಧೂಳಿನಂತೆಯೂ ಅವರ ಮಾಂಸವು ಗೊಬ್ಬರದಂತೆಯೂ ಸುರಿದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:17
41 ತಿಳಿವುಗಳ ಹೋಲಿಕೆ  

ಆದರೆ ನಾಡು ಅದರ ನಿವಾಸಿಗಳ ನಿಮಿತ್ತ ಹಾಗೂ ಅವರ ದುಷ್ಕೃತ್ಯಗಳ ಪರಿಣಾಮವಾಗಿ, ಮರಳುಗಾಡಾಗಿ ಮಾರ್ಪಡುವುದು.


ನೀನು ನಿನ್ನ ವಿಷಯವಾಗಿ, ‘ನಾನು ಐಶ್ವರ್ಯವಂತನು, ಸಿರಿಸಂಪತ್ತುಳ್ಳವನು, ಯಾವ ಕೊರತೆಯೂ ಇಲ್ಲದವನು’ ಎಂದು ಹೇಳಿಕೊಳ್ಳುತ್ತಿರುವೆ. ಆದರೆ ನೀನು ನಿರ್ಭಾಗ್ಯನು, ದುರವಸ್ಥೆಯಲ್ಲಿರುವವನು, ದರಿದ್ರನು, ಕುರುಡನು ಮತ್ತು ಬಟ್ಟೆಬರೆಯಿಲ್ಲದೆ ಬೆತ್ತಲೆಯಾಗಿರುವವನು ಎಂಬುದು ನಿನಗೆ ತಿಳಿಯದು.


ಎಂದೋರಿನಲ್ಲವರು ಕೊಲೆಯಾದರು I ಹೊಲಗದ್ದೆಗಳಿಗೆ ಗೊಬ್ಬರವಾದರು II


ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲಲ್ಲಿ ಇದ್ದಾನೆ; ಕತ್ತಲಲ್ಲೇ ನಡೆಯುತ್ತಾನೆ. ಕತ್ತಲು ಅವನನ್ನು ಕುರುಡಾಗಿಸಿರುವುದರಿಂದ ಎತ್ತ ಹೋಗುತ್ತಿದ್ದಾನೆಂದು ಅವನಿಗೇ ತಿಳಿಯದು.


ಈ ಗುಣಗಳಿಲ್ಲದವನು ಸಂಕುಚಿತ ಮನೋಭಾವನೆಯುಳ್ಳವನು ಹಾಗೂ ಅಂಧನು. ಹಿಂದಿನ ಪಾಪಗಳಿಂದ ತಾನು ಶುದ್ಧಗೊಂಡವನು ಎಂಬುದನ್ನು ಮರೆತುಬಿಟ್ಟವನು.


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ಇದರ ಅರ್ಥವಾದರೂ ಏನು? ಇಸ್ರಯೇಲರು ಅರಸುತ್ತಿದ್ದುದು ಅವರಿಗೆ ದೊರಕಲಿಲ್ಲ. ಆಯ್ಕೆಯಾದವರಿಗೆ ಮಾತ್ರ ಅದು ದೊರಕಿತು. ಮಿಕ್ಕವರು ಕಠಿಣ ಹೃದಯಿಗಳಾದರು.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಯುವಜನರು ಖಡ್ಗಕ್ಕೆ ತುತ್ತಾಗುವಂತೆ ಮಾಡಿದೆ. ನಿಮ್ಮ ಕುದುರೆಗಳು ಸೂರೆಯಾಗುವಂತೆ ಮಾಡಿದೆ. ನಿಮ್ಮ ದಂಡಿನವರ ಹೆಣಗಳು ಕೊಳೆತು ನಾರುವ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರಸ್ವಾಮಿ.


ವಯಸ್ಕರೂ ವೃದ್ಧರೂ ಬಿದ್ದಿದ್ದಾರೆ ಬೀದಿಗಳಲ್ಲೆ ತರುಣತರುಣಿಯರು ತುತ್ತಾಗಿದ್ದಾರೆ ಖಡ್ಗಗಳಿಗೆ. ನಿನ್ನ ಪ್ರಕೋಪದ ದಿನದಂದು ಹತಮಾಡಿದೆಯಲ್ಲಾ ಅವರನ್ನು ಕನಿಕರಿಸದೆ !


“ಸರ್ವೇಶ್ವರನು ನ್ಯಾಯಸ್ವರೂಪಿ, ನಾನಾದರೊ ಆತನ ಆಜ್ಞೆ ಮೀರಿದ ದ್ರೋಹಿ. ಜನಾಂಗಗಳೇ, ನೀವೆಲ್ಲರು ಕಿವಿಗೊಡಿ, ನನ್ನ ಸಂಕಟ ನೋಡಿ ! ನನ್ನ ಯುವಕ ಯುವತಿಯರು, ಇಗೋ, ಸೆರೆಹೋಗಿರುವರು ನೋಡಿ.


“ನನ್ನ ದ್ರೋಹಗಳನ್ನು ನನಗೆ ಬಿಗಿದಿದ್ದಾನೆ ನೊಗದ ಕಣ್ಣುಗಳಂತೆ. ಅವು ಹುರಿಗೊಂಡು, ಸುತ್ತಿಕೊಂಡು ಕುತ್ತಿಗೆಗೆ, ನನ್ನ ಶಕ್ತಿಯನ್ನು ಹೀರುತ್ತಿವೆ. ಸಿಕ್ಕಿಸಿದನಲ್ಲಾ ಸ್ವಾಮಿ, ನನ್ನಿಂದ ಎದುರಿಸಲಾಗದಂಥವರ ಕೈಗೆ !


ಜೆರುಸಲೇಮ್ ಅಶುದ್ಧಳಾದಳು ಪದೇ ಪದೇ ಪಾಪಮಾಡಿ. ಹೊಗಳುತ್ತಿದ್ದವರೇ ತೆಗಳುವವರಾದರು ಆಕೆಯ ನಗ್ನತೆಯನ್ನು ನೋಡಿ. ಆಕೆಯೋ ನಿಟ್ಟುಸಿರಿಡುತ್ತಿರುವಳು ಮುಖವನ್ನು ಮರೆಮಾಡಿ.


ಆದರೆ ಈಗ ಅವರ ಮಕ್ಕಳು ಕ್ಷಾಮಕ್ಕೆ ಗುರಿಯಾಗಲಿ. ಕತ್ತಿಗೆ ತುತ್ತಾಗಲಿ. ಅವರ ಮಡದಿಯರು ವಿಧವೆಯರಾಗಲಿ, ಮಕ್ಕಳನ್ನು ಕಳೆದುಕೊಳ್ಳಲಿ, ಅವರ ಗಂಡಂದಿರು ಸತ್ತುಬೀಳಲಿ. ಯುವಕರು ಕಾಳಗ-ಕತ್ತಿಗೆ ಬಲಿಯಾಗಲಿ.


“ನಾನು ಅವರಿಗೆ ನಾಲ್ಕು ವಿಧವಾದ ಬಾಧೆಗಳನ್ನು ವಿಧಿಸುವೆನು : ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಯನ್ನು, ನುಂಗಿ ನಾಶಮಾಡುವುದಕ್ಕೆ ಪ್ರಾಣಿಪಕ್ಷಿಗಳನ್ನು ನೇಮಿಸುವೆನು.


ಏಕೆಂದರೆ ಸರ್ವೇಶ್ವರ ನುಡಿವ ಮಾತಿದು : “ಇಗೋ, ಈ ಸಾರಿ ಈ ನಾಡಿನ ನಿವಾಸಿಗಳನ್ನು ಕವಣೆಯ ಕಲ್ಲಂತೆ ಎಸೆದುಬಿಡುವೆನು; ಬುದ್ಧಿಬರಲೆಂದು ಅವರನ್ನು ಬಾಧಿಸುವೆನು.”


ಜುದೇಯ ನಾಡೇ, ನಿನ್ನ ನಡತೆ ಹಾಗೂ ಕೃತ್ಯಗಳೇ ನಿನಗೆ ಈ ವಿಪತ್ತನ್ನು ಒದಗಿಸಿವೆ. ಇದು ನಿನ್ನ ಪಾಪದ ಪ್ರತಿಫಲ. ನೋಡು ಎಷ್ಟು ಕಹಿಯಾಗಿದೆ; ಹೃದಯ ಇರಿಯುವಂತಿದೆ !


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”


ನಿನಗೆ ಮಾರ್ಗದರ್ಶಿಯಾಗಿದ್ದ, ನಿನಗೆ ದೇವರಾಗಿದ್ದ ಸರ್ವೇಶ್ವರನಾದ ನನ್ನನ್ನೇ ತೊರೆದುಬಿಟ್ಟು ಇದನ್ನೆಲ್ಲ ನೀನೇ ನಿನ್ನ ಮೇಲೆ ಬರಮಾಡಿಕೊಂಡಿರುವೆ.


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


ಸರ್ವೇಶ್ವರ ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಕಟ್ಟಿಬಿಟ್ಟಿದ್ದಾರೆ. ದಿವ್ಯದರ್ಶನಗಳೆಂಬ ಕಲೆಗಳಿಗೆ ಮುಸುಕು ಹಾಕಿಬಿಟ್ಟಿದ್ದಾರೆ.


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ,‍ ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.


ವ್ಯಭಿಚಾರಮಾಡುವಂಥ, ರಕ್ತ ಹರಿಸುವಂಥ ಹೆಂಗಸರಿಗೆ ವಿಧಿಸತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ನನ್ನ ಕೋಪೋದ್ರೇಕವನ್ನೂ ರೋಷಾವೇಶವನ್ನೂ ರಕ್ತದಂತೆ ನಿನ್ನ ಮೇಲೆ ಸುರಿಸುವೆನು.


ಜೆರುಸಲೇಮ್ ನಗರ ಸುರಿಸಿದ ರಕ್ತ ಅದರಲ್ಲೇ ನಿಂತಿದೆ. ಧೂಳು ಮುಚ್ಚೀತೆಂದು ಆ ಪಟ್ಟಣದವರು ಅದನ್ನು ನೆಲದ ಮೇಲೆ ಹೊಯ್ಯದೆ, ಬರೀ ಬಂಡೆಯ ಮೇಲೆ ನಿಲ್ಲಿಸಿರುತ್ತಾರೆ.


ಆ ರಕ್ತದಿಂದ ರೋಷವೆದ್ದು ಮುಯ್ಯಿಗೆ ಮುಯ್ಯಿ ತೀರಿಸಲೆಂದು, ಅದನ್ನು ನಾನು ಇಂಗಗೊಡಿಸದೆ ಬರೀ ಬಂಡೆಯ ಮೇಲೆ ನಿಲ್ಲಿಸಿದ್ದೇನೆ.


ನಾವೇ ತಂದುಕೊಂಡ ಅವಮಾನವೆಂಬ ಹಾಸಿಗೆಯಲ್ಲಿ ಬಿದ್ದಿರೋಣ. ನಾಚಿಕೆಯೆಂಬ ಹೊದಿಕೆ ನಮ್ಮನ್ನು ಮುಚ್ಚಿಬಿಡಲಿ. ಚಿಕ್ಕತನದಿಂದ ಈವರೆಗು ನಾವೂ ನಮ್ಮ ಪೂರ್ವಜರೂ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಇದಿರಾಗಿ ಪಾಪಮಾಡುತ್ತಾ ಬಂದಿರುವುದು ನಿಶ್ಚಯ. ಆ ಸ್ವಾಮಿಯ ಮಾತನ್ನು ಕೇಳದೆಹೋದೆವಲ್ಲಾ!” ಎಂದು ಮೊರೆಯಿಡುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು