Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:3 - ಕನ್ನಡ ಸತ್ಯವೇದವು C.L. Bible (BSI)

3 ಮನುಷ್ಯರು, ಮೃಗಗಳು, ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು - ಇವೆಲ್ಲವನ್ನು ನಾಶಪಡಿಸುವೆನು. ದುರ್ಜನರು ಬಿದ್ದು ಸಾಯುವಂತೆ ಮಾಡುವೆನು; ನರಸಂತಾನವನ್ನು ಧರೆಯ ಮೇಲಿಂದ ಕಿತ್ತುಹಾಕುವೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮನುಷ್ಯರನ್ನೂ, ಪಶುಗಳನ್ನೂ, ಮತ್ತು ಆಕಾಶದ ಪಕ್ಷಿಗಳನ್ನೂ, ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ, ಅವುಗಳಿಗೆ ಅಡ್ಡಬೀಳುವ ದುಷ್ಟರನ್ನೂ ಸಂಹರಿಸುವೆನು; ಭೂಮಿಯ ಮೇಲಿಂದ ದುಷ್ಟರ ಸಂತಾನವನ್ನೂ ಕಿತ್ತುಹಾಕುವೆನು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಜನಪಶುಗಳನ್ನೂ ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ ಅವುಗಳಿಗೆ ಎಡವುವ ದುಷ್ಟರನ್ನೂ ಸಂಹರಿಸುವೆನು; ಭೂವಿುಯ ಮೇಲಿಂದ ನರಸಂತಾನವನ್ನು ಕಿತ್ತುಹಾಕುವೆನು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಲೋಕದೊಳಗಿರುವ ಎಲ್ಲಾ ಮನುಷ್ಯರನ್ನೂ ಪ್ರಾಣಿಗಳನ್ನೂ ಆಕಾಶದಲ್ಲಿರುವ ಎಲ್ಲಾ ಪಕ್ಷಿಗಳನ್ನೂ ನೀರಿನಲ್ಲಿರುವ ಎಲ್ಲಾ ಮೀನುಗಳನ್ನೂ ನಾನು ನಾಶಮಾಡುವೆನು. ಎಲ್ಲಾ ದುಷ್ಟ ಜನರನ್ನೂ ಮತ್ತು ಅವರನ್ನು ಪಾಪಕ್ಕೆ ನಡಿಸುವ ಎಲ್ಲಾ ವಸ್ತುಗಳನ್ನೂ ನಾನು ನಾಶಮಾಡುವೆನು. ಭೂಮಿಯ ಮೇಲಿರುವ ಎಲ್ಲಾ ಜನರನ್ನು ನಿರ್ಮೂಲ ಮಾಡುವೆನು.” ಈ ವಿಷಯಗಳನ್ನು ಯೆಹೋವನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಮನುಷ್ಯರನ್ನೂ ಮೃಗಗಳನ್ನೂ ನಾಶಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಮಾಡುವೆನು.” “ಮನುಷ್ಯರನ್ನು ದೇಶದೊಳಗಿಂದ ಕಡಿದು ಬಿಡುವಾಗ ದುಷ್ಟರಿಗೆ ಉಳಿಯುವುದು ಕಸದರಾಶಿಯೇ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:3
22 ತಿಳಿವುಗಳ ಹೋಲಿಕೆ  

ಇದರಿಂದ ನಾಡು ಶೋಕಸಾಗರದಲ್ಲಿ ಮುಳುಗಿದೆ. ಅದರ ನಿವಾಸಿಗಳೆಲ್ಲ ನರಳುತ್ತಿದ್ದಾರೆ. ನೆಲದ ಮೇಲಿನ ಜಂತುಗಳು, ಆಕಾಶದ ಪಕ್ಷಿಗಳು ಬಳಲುತ್ತಿವೆ. ಜಲಜಂತುಗಳು ಸಹ ನಶಿಸಿಹೋಗುತ್ತಿವೆ.


ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರ ಅಶುದ್ಧ ಪದಾರ್ಥದಂತಿರುವುದು; ಸರ್ವೇಶ್ವರ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರ ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರದು, ಅವರ ಹೊಟ್ಟೆ ತುಂಬದು; ಏಕೆಂದರೆ ಅವರ ಆಸ್ತಿ ಅವರಿಗೆ ಪಾಪಕ್ಕೆ ಕಾರಣವಾಗಿತ್ತು.


ಇಷ್ಟಾದರೂ ನಿನ್ನ ವಿರುದ್ಧ ಹೇಳಬೇಕಾದ ಕೆಲವು ಆಪಾದನೆಗಳಿವೆ. ಬಿಳಾಮನ ದುರ್ಬೋಧನೆಯನ್ನು ಅವಲಂಬಿಸುವವರು ಕೆಲವರು ನಿನ್ನಲ್ಲಿ ಇದ್ದಾರೆ. ಈ ಬಿಳಾಮನೇ ಇಸ್ರಯೇಲ್ ಜನರು ಪಾಪದಲ್ಲಿ ಬೀಳುವಂತೆಮಾಡಲು ಬಾಲಾಕನನ್ನು ಪ್ರಚೋದಿಸಿದವನು. ಈ ಕಾರಣ, ಅವರು ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿಂದರು; ಲೈಂಗಿಕ ಅನೈತಿಕತೆಗೆ ತುತ್ತಾದರು.


ಏಕೆಂದರೆ, ‘ಸರ್ವೇಶ್ವರನ ನಾಮದಲ್ಲಿ ಬರುವವರು ಧನ್ಯರು!’ ಎಂದು ನೀವಾಗಿ ಹೇಳುವ ದಿನದವರೆಗೂ ನೀವು ನನ್ನನ್ನು ಮತ್ತೆ ಕಾಣಲಾರಿರಿ ಎಂಬುದು ನಿಶ್ಚಯ.”


ಅಂದು ನಾಡಿನಲ್ಲಿ ವಿಗ್ರಹಗಳು ಹೆಸರಿಲ್ಲದಂತೆ ಮಾಡುವೆನು; ಅಷ್ಟೇ ಅಲ್ಲ, ಅವುಗಳನ್ನು ಯಾರೂ ನೆನಸಿಕೊಳ್ಳದಂತೆ ಮಾಡುವೆನು; ಅಲ್ಲದೆ ಪ್ರವಾದಿಯೆನಿಸಿಕೊಳ್ಳುವವರನ್ನೂ ಅಶುದ್ಧ ಆತ್ಮವನ್ನೂ ನಾಡಿನಿಂದ ತೊಲಗಿಸಿಬಿಡುವೆನು.


ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ". ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”


ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆ ತೋರಿಸುವವನು ನೀನೇ,” ಎಂದು ಹೇಳು.


ಇನ್ನೆಷ್ಟರವರೆಗೆ ನಾಡು ದುಃಖಿಸುತ್ತಿರಬೇಕು? ಅದರ ಎಲ್ಲೆಎಲ್ಲೆಗಳಲ್ಲಿ ಹುಲ್ಲು ಸೊಪ್ಪು ಒಣಗಿರಬೇಕು? ನಾಡಜನರ ನೀಚತನದ ನಿಮಿತ್ತ ಮಾಯವಾಗಿವೆ ಪ್ರಾಣಪಕ್ಷಿಗಳು ಕೂಡ. ‘ನಮ್ಮ ನಡತೆಯನ್ನು ಗಮನಿಸರು ದೇವರು’ ಎಂದುಕೊಳ್ಳುತ್ತಿರುವರು ಆ ಜನರು.


ಇಂತಿರಲು ಯಕೋಬ್ಯರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗಬೇಕಾದರೆ, ಅವರ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲ ದೊರಕಬೇಕಾದರೆ, ಅವರ ವಿಗ್ರಹಾರಾಧಕ ಬಲಿಪೀಠದ ಕಲ್ಲುಗಳೆಲ್ಲ ಸುಣ್ಣದಂತೆ ಪುಡಿಪುಡಿ ಆಗಬೇಕು; ಆಶೇರಾ ಎಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಪ್ರತಿಷ್ಠಾಪಿಸುವುದು ಇನ್ನು ನಿಲ್ಲಬೇಕು.


ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆಮಾಡಿ, ಇಸ್ರಯೇಲ್ ವಂಶದವರಿಗೆ ಪಾಪಕಾರಿವಿಘ್ನವಾದುದರಿಂದ, ನಾನು ಅವರ ಮೇಲೆ ಕೈಯೆತ್ತಿದ್ದೇನೆ. ಅವರು ತಮ್ಮ ದೋಷಫಲವನ್ನು ಅನುಭವಿಸಿಯೇ ತೀರಬೇಕು; ಇದು ಸರ್ವೇಶ್ವರನಾದ ದೇವರ ನುಡಿ.


ನರಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದಿಂದ ಪಾಪಕ್ಕೆ ಕಾರಣವಾದುದೆಲ್ಲವನ್ನೂ


ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ :


“ನಾನು ಜನರನ್ನು ದೂರ ತೊಲಗಿಸಿ, ನಾಡನ್ನು ನಾಶಗೊಳಿಸಿ, ನಗರಗಳನ್ನು ನಿರ್ಜನಗೊಳಿಸಿ, ಮನೆಗಳನ್ನು ಬರಿದಾಗಿಸಿ, ಧರೆಯನ್ನು ಪೂರ್ತಿಯಾಗಿ ನಾಶಗೊಳಿಸುವ ತನಕ ಪರಿಸ್ಥಿತಿ ಹೀಗಿರುವುದು.


ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


“ಉತ್ತರದಿಂದ ಒಂದು ರಾಷ್ಟ್ರ ಬಾಬಿಲೋನಿನ ವಿರುದ್ಧ ಬರುತ್ತಿದೆ ಅದು ಬಾಬಿಲೋನ್ ದೇಶವನ್ನು ಹಾಳುಮಾಡುವುದು. ಅಲ್ಲಿ ಯಾರೂ ವಾಸಿಸರು. ಜಾನುವಾರುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.”


“ನಾನು ಸೃಷ್ಟಿಸಿದ ಮಾನವರನ್ನು ಈ ಜಗದಿಂದ ಅಳಿಸಿಬಿಡುತ್ತೇನೆ, ಅವರೊಂದಿಗೆ ಪ್ರಾಣಿಪಕ್ಷಿಗಳನ್ನು, ಕ್ರಿಮಿಕೀಟಗಳನ್ನು ಅಳಿಸಿಹಾಕುತ್ತೇನೆ. ಅವುಗಳನ್ನು ಉಂಟುಮಾಡಿದ್ದಕ್ಕಾಗಿ ನನಗೆ ದುಃಖವಾಗುತ್ತಿದೆ,” ಎಂದುಕೊಂಡರು.


“ಸರ್ವೇಶ್ವರನಾದ ನಾನು ಹೇಳುವುದನ್ನು ಗಮನಿಸಿರಿ; ಇಗೋ, ನನ್ನ ಕೋಪವೆಂಬ ರೋಷಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಕಾಡುಮರಗಳ ಮೇಲೂ ಭೂಮಿಯ ಬೆಳೆಯ ಮೇಲೂ ಅದನ್ನು ಕಾರುವೆನು. ಅದು ಆರದೆ ದಹಿಸುವುದು!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು