Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:7 - ಕನ್ನಡ ಸತ್ಯವೇದವು C.L. Bible (BSI)

7 “ಸ್ವಾಮಿ ಸರ್ವೇಶ್ವರ ನ್ಯಾಯತೀರ್ಪು ನೀಡುವ ದಿನ ಸಮೀಪಿಸಿದೆ; ಆದುದರಿಂದ ಅವರ ಸನ್ನಿಧಿಯಲ್ಲಿ ಮೌನ ತಾಳಿರಿ. ಸರ್ವೇಶ್ವರ, ಯಜ್ಞದ ಔತಣವನ್ನು ಸಿದ್ಧಗೊಳಿಸಿದ್ದಾರೆ. ಅತಿಥಿಗಳನ್ನು ಪವಿತ್ರೀಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಪ್ರತಿಷ್ಠಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ; ಯೆಹೋವನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಮಡಿಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ. ಯಾಕೆಂದರೆ ಯೆಹೋವನು ಜನರಿಗೆ ನ್ಯಾಯತೀರಿಸುವ ದಿನವು ಹತ್ತಿರವಾಯಿತು. ಯೆಹೋವನು ತನ್ನ ಯಜ್ಞವನ್ನು ತಯಾರು ಮಾಡಿ ತನ್ನ ಆಮಂತ್ರಿತರನ್ನು ಸಿದ್ಧವಾಗಿರಲು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸಾರ್ವಭೌಮ ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಯೆಹೋವ ದೇವರ ದಿನವು ಸಮೀಪವಾಗಿದೆ. ಯೆಹೋವ ದೇವರು ಯಜ್ಞವನ್ನು ಸಿದ್ಧಮಾಡಿದ್ದಾರೆ. ಅವರು ಆಮಂತ್ರಿಸಿದವರನ್ನು ಅವರು ಪವಿತ್ರೀಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:7
39 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಪ್ರಸನ್ನನಾಗಿಹನು ಪವಿತ್ರಾಲಯದಲ್ಲಿ; ಜಗವೆಲ್ಲ ಮೌನತಾಳಲಿ ಆತನ ಸನ್ನಿಧಿಯಲ್ಲಿ.


ಸರ್ವೇಶ್ವರ ತಮ್ಮ ಪರಿಶುದ್ಧಾಲಯದಿಂದ ಹೊರಬರುತ್ತಿದ್ದಾರೆ. ನರಮಾನವರೇ, ಅವರ ಶ್ರೀಸನ್ನಿಧಿಯಲ್ಲಿ ನೀವೆಲ್ಲರು ಮೌನತಾಳಿರಿ.


ಸರ್ವೇಶ್ವರಸ್ವಾಮಿಯ ಮಹಾದಿನ ಹತ್ತಿರವಾಯಿತು; ಸಮೀಪಿಸಿತು. ಅದು ಬಹು ತ್ವರೆಯಾಗಿ ಬರುತ್ತಿದೆ; ಅದು ಕಠೋರವಾದ ದಿನ, ಆ ದಿನದ ಸುದ್ದಿ ಕಹಿಯಾದುದು, ಎಂಥಾ ಶೂರರನ್ನೂ ಕೂಡ ಘೋರವಾಗಿ ಗೋಳಾಡಿಸುವಂಥದ್ದು.


ಆದರೆ ಈ ದಿನ, ಯುದ್ಧದ ದಿನ ಸೇನಾಧೀಶ್ವರನೆಂಬ ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಮುಯ್ಯಿ ತೀರಿಸುವ ದಿನ ಇದು ದಂಡನೆಯ ದಿನ. ಇಂದು ಖಡ್ಗವು ಕಬಳಿಸುವುದು ತೃಪ್ತಿಯಾಗಿ ರಕ್ತವನ್ನು ಹೀರುವುದು ಸಂತೃಪ್ತಿಯಾಗಿ ಉತ್ತರದ ಯೂಪ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿರುವನು ಸರ್ವಶಕ್ತನೆಂಬ ಸರ್ವೇಶ್ವರ.


ಸರ್ವೇಶ್ವರ ಸ್ವಾಮಿಯ ಖಡ್ಗವು ರಕ್ತಮಯವಾಗಿದೆ; ಅದು ಕೊಬ್ಬಿನಿಂದಲೂ ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡಗಳ ವಪೆಯಿಂದಲೂ ತುಂಬಿದೆ; ಸರ್ವೇಶ್ವರ ಬೊಚ್ರದಲ್ಲಿ ಈ ಬಲಿಯನ್ನೂ ಎದೋಮಿನಲ್ಲಿ ಈ ದೊಡ್ಡ ಸಂಹಾರವನ್ನೂ ಮಾಡಬೇಕೆಂದಿದ್ದಾರೆ.


ಪ್ರಲಾಪಿಸಿರಿ, ಸಮೀಪಿಸಿದೆ ಸರ್ವೇಶ್ವರನ ದಿನ; ಸನ್ನಿಹಿತವಾಗಿದೆ, ಸರ್ವನಾಶ ಮಾಡುವ ಸೇನಾಧೀಶ್ವರನ ದಿನ !


ಪುನಃ ಬೇರೆ ಸೇವಕರನ್ನು ಅಟ್ಟಿದ. ‘ಔತಣ ಸಿದ್ಧವಾಗಿದೆ. ಕೊಬ್ಬಿನ ಮಾಂಸದ ಅಡಿಗೆಯನ್ನು ಮಾಡಿಸಿದ್ದೇನೆ. ಎಲ್ಲವೂ ಅಣಿಯಾಗಿದೆ. ಉತ್ಸವಕ್ಕೆ ಬೇಗ ಬನ್ನಿ’ ಎಂದು ಆಹ್ವಾನಿತರಿಗೆ ತಿಳಿಸುವಂತೆ ಹೇಳಿಕಳುಹಿಸಿದ.


ಸರ್ವೇಶ್ವರಸ್ವಾಮಿಯ ಭಯಂಕರ ಮಹಾದಿನದ ಮುಂಚೆ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ರಕ್ತಗೆಂಪಾಗುವನು.


ಸೇನಾಧೀಶ್ವರ ಸರ್ವೇಶ್ವರ ದಿನವೊಂದನ್ನು ಗೊತ್ತುಮಾಡಿದ್ದಾರೆ. ಅಹಂಕಾರದಿಂದ ಉಬ್ಬಿಹೋದವರಿಗೆ, ಉದ್ಧಟತನದಿಂದ ಕೊಬ್ಬಿಹೋದವರಿಗೆ,


ಹೌದು, ಶುಭಕರವಾಗಿದೆ; ಸರ್ವೇಶ್ವರನಿಗೆ ಬಲಿಯನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ಶುದ್ಧರಾಗಿ ನನ್ನ ಜೊತೆಯಲ್ಲಿ ಬಲಿಯರ್ಪಣೆಗೆ ಬನ್ನಿ,” ಎಂದು ಹೇಳಿ ಜೆಸ್ಸೆಯನನ್ನೂ ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಬಲಿಯರ್ಪಣೆಗೆ ಆಮಂತ್ರಿಸಿದನು. ಅವರು ಬಂದರು.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಶವವನ್ನು ಸುಡಲು ಬಂದ ಸಂಬಂಧಿಕರು ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮಲ್ಲಿ ಯಾರಾದರೂ ಉಳಿದಿದ್ದಾರೋ?” ಎಂದು ಒಳಮನೆಯಲ್ಲಿ ಇರುವವನನ್ನು ಕೇಳಿದರೆ, ಅವನು “ಇಲ್ಲ” ಎನ್ನುವನು. ಆಗ ಆ ಸಂಬಂಧಿಕನು, “ಮೌನದಿಂದಿರು! ಸರ್ವೇಶ್ವರಸ್ವಾಮಿಯ ಹೆಸರನ್ನೂ ಎತ್ತಕೂಡದು” ಎಂದು ಎಚ್ಚರಿಸುವನು.


ಸರ್ವೇಶ್ವರ ಗರ್ಜಿಸಿ ತಮ್ಮ ಸೈನ್ಯಕ್ಕೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ದೊಡ್ಡದು. ಅವರ ಆಜ್ಞೆಯನ್ನು ಪಾಲಿಸುವವನು ಬಲಾಢ್ಯನು. ಸರ್ವೇಶ್ವರಸ್ವಾಮಿಯ ದಿನ ಮಹತ್ತರ; ಅತಿ ಭಯಂಕರ; ಅದರೆದುರಿಗೆ ನಿಲ್ಲಲು ಯಾರಿಗಿದೆ ಧೈರ್ಯ?


“ಇಗೋ, ದಂಡನೆಯ ದಿನ ಬಂದೆಬಿಟ್ಟಿತು; ನಿನಗೆ ದುರ್ಗತಿ ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆ ಚಿಗುರಿದೆ;


ದೇಶನಿವಾಸಿಯೇ, ನಿನ್ನ ಗತಿ ಮುಗಿಯಿತು, ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿ ಉತ್ಸಾಹಧ್ವನಿಯಲ್ಲ , ಅದು ಬರೀ ಗೋಳೇ!


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ, ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ.


ನಿಮ್ಮ ಸಹನೆ, ಸಹಾನುಭೂತಿ ಸರ್ವರಿಗೂ ತಿಳಿದಿರಲಿ. ಪ್ರಭುವಿನ ಪುನರಾಗಮನ ಸಮೀಪಿಸಿದೆ.


ಹುಲುಮಾನವಾ, ದೇವರೊಡನೆ ವಾದಿಸಲು ನೀನಾರು? ಮಡಿಕೆಯು ತನ್ನನ್ನು ಮಾಡಿದವನನ್ನು ನೋಡಿ, “ನನ್ನನ್ನು ಹೀಗೇಕೆ ಮಾಡಿದೆ” ಎಂದು ಕೇಳುವುದುಂಟೇ?


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II


ಆ ದಿವಸ ಅವನ ವಿಷಯವಾಗಿ ಏನೂ ಹೇಳಲಿಲ್ಲ. “ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಹೊಲೆಯಾಗಿರಬಹುದು, ತನ್ನನ್ನು ಇನ್ನೂ ಶುದ್ಧಪಡಿಸಿಕೊಳ್ಳದೆ ಇರಬಹುದು,” ಎಂದುಕೊಂಡನು.


ಸರ್ವಶಕ್ತಸ್ವಾಮಿ ಕಾಲರಾಶಿಯನ್ನೇಕೆ ನೇಮಿಸಿಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ ದಿನಗಳೇಕೆ ಗೋಚರವಾಗುವುದಿಲ್ಲ?


ಆಯ್ಕೆಯಾದವರಿಗೆ ಅಪ್ಪಣೆಮಾಡಿದ್ದೇನೆ: ಹೌದು, ಹೆಮ್ಮೆಯಿಂದ ಮೆರೆಯುವ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆನೀಡಿದ್ದೇನೆ.


ಅನಂತರ ನಾನು ಅರೀಯೇಲನ್ನು ಬಾಧಿಸುವೆನು. ಅಲ್ಲಿ ಅರಚಾಟ ಕಿರಿಚಾಟ ಇರುವುದು. ಆ ಪಟ್ಟಣವು ವಾಸ್ತವವಾಗಿ ನನಗೆ ಅರೀಯೇಲಾಗಿಯೇ ಪರಿಣಮಿಸುವುದು.


ಆಕಾಶದಲ್ಲಿ ನನ್ನ ಖಡ್ಗವು ಆವೇಶದಿಂದ ಕಾರ್ಯಮಾಡಿದೆ. ಇಗೋ, ನಾನು ಶಪಿಸಿದ ಎದೋಮ್ ಎಂಬ ಜನಾಂಗದ ಮೇಲೆ ನ್ಯಾಯತೀರಿಸಲು ಅದು ಎರಗಲಿದೆ.


ಸರ್ವೇಶ್ವರಸ್ವಾಮಿಯ ದಿನ ಸಮೀಪಿಸಿದೆ. ಆ ದಿನ ಸರ್ವಶಕ್ತನಿಂದ ವಿನಾಶವನ್ನು ತರಲಿದೆ; ಎಂಥಾ ಭಯಂಕರ ದಿನವದು!


ಆ ದಿನದಲ್ಲಿ ಆಸ್ಥಾನದ ಗೀತೆಗಳು ಶೋಕಗೀತೆಗಳಾಗಿ ಮಾರ್ಪಡುವುವು. ಹೆಣಗಳು ಎಲ್ಲೆಲ್ಲೂ ಬಿದ್ದಿರುವುವು. ಅವುಗಳನ್ನು ಸದ್ದುಗದ್ದಲವಿಲ್ಲದೆ ಬಿಸಾಡಲಾಗುವುದು.” ಇದು ಸರ್ವೇಶ್ವರಸ್ವಾಮಿಯ ನುಡಿ.


ಇಗೋ, ಸರ್ವೇಶ್ವರ ನೇಮಿಸಿದ ದಿನ ಬರುತ್ತಿದೆ. ಆಗ ಜೆರುಸಲೇಮಿನ ಆಸ್ತಿಪಾಸ್ತಿ ಸೂರೆಯಾಗುವುದು. ಮತ್ತು ಸೂರೆಯಾದದ್ದೆಲ್ಲ ಅವರ ಕಣ್ಮುಂದೆ ಪಾಲುಪಾಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು