Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:8 - ಕನ್ನಡ ಸತ್ಯವೇದವು C.L. Bible (BSI)

8 ಸ್ವಾಮಿಯ ಆ ಯಜ್ಞದ ದಿನದಂದು ನಾನು ದೇಶಾಧಿಪತಿಗಳನ್ನು, ರಾಜವಂಶದವರನ್ನು, ಹಾಗೂ ಅನ್ಯಮತೀಯ ವಸ್ತ್ರಧಾರಿಗಳನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಯೆಹೋವನ ಆ ಯಜ್ಞದಿನದಲ್ಲಿ ನಾನು ದೇಶಾಧಿಪತಿಗಳನ್ನೂ, ರಾಜವಂಶದವರನ್ನೂ, ವಿದೇಶ ವಸ್ತ್ರದಾರಿಗಳೆಲ್ಲರನ್ನೂ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನ ಆ ಯಜ್ಞದಿನದಲ್ಲಿ ನಾನು ದೇಶಾಧಿಪತಿಗಳನ್ನೂ ರಾಜವಂಶದವರನ್ನೂ ವಿದೇಶವಸ್ತ್ರಧಾರಿಗಳೆಲ್ಲರನ್ನೂ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಯೆಹೋವನ ಯಜ್ಞದ ದಿನದಲ್ಲಿ ನಾನು ರಾಜಕುಮಾರರನ್ನೂ ಇತರ ನಾಯಕರುಗಳನ್ನೂ ಶಿಕ್ಷಿಸುವೆನು. ಪರದೇಶದ ಬಟ್ಟೆಯನ್ನು ತೊಟ್ಟುಕೊಳ್ಳುವ ಪ್ರತಿಯೊಬ್ಬರನ್ನೂ ನಾನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರ ಯಜ್ಞದ ದಿನದಲ್ಲಿ ನಾನು ಪ್ರಧಾನರನ್ನು, ರಾಜಪುತ್ರರನ್ನು ಮತ್ತು ವಿದೇಶಿಯರ ಉಡುಪನ್ನು ತೊಟ್ಟುಕೊಳ್ಳುವವರೆಲ್ಲರನ್ನೂ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:8
15 ತಿಳಿವುಗಳ ಹೋಲಿಕೆ  

ಆ ದಿನ ಸರ್ವೇಶ್ವರ ದಂಡಿಸುವರು ಮೇಲಣ ಸೇನಾಶೂರರನು, ಕೆಳಗಣ ಭೂ ರಾಜರನು.


ನೀನು ಪಡೆದ ಮಕ್ಕಳಲ್ಲಿ ಕೆಲವರನ್ನು, ನಿನ್ನ ಸ್ವಂತ ಪುತ್ರರನ್ನು ತೆಗೆದುಕೊಂಡು ಹೋಗಿ ಬಾಬಿಲೋನಿಯರ ಅರಸರ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು,” ಎಂದು ಹೇಳಿದನು.


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ಯೇಹುವು ವಸ್ತ್ರಾಗಾರದ ಅಧಿಪತಿಗೆ, “ಬಾಳ್ ದೇವತೆಯ ಭಕ್ತರೆಲ್ಲರಿಗೂ ಪೂಜಾವಸ್ತ್ರಗಳನ್ನು ಕೊಡು,” ಎಂದು ಆಜ್ಞಾಪಿಸಲು ಅವನು ತಂದುಕೊಟ್ಟನು.


“ಹೆಂಗಸರು ಗಂಡಸರಂತೆ, ಗಂಡಸರು ಹೆಂಗಸರಂತೆ ಬಟ್ಟೆ ಹಾಕಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯರು.


ಹೇ ಸರ್ವೇಶ್ವರಾ ಯಕೋಬ ಮನೆತನದವರನ್ನು ನೀವು ಕೈ ಬಿಟ್ಟಿದ್ದೀರಿ. ಏಕೆಂದರೆ ಅವರು ಪೌರಸ್ತ್ಯರಂತೆ ಮಾಟಮಂತ್ರ ಮಾಡುವವರು. ಫಿಲಿಷ್ಟಿಯರಂತೆ ಕಣಿಹೇಳುವವರು, ಅನ್ಯದೇಶಿಯರಂತೆ ಆಚಾರವಿಚಾರಗಳನ್ನು ಅನುಕರಿಸುವವರು ಆಗಿಬಿಟ್ಟಿದ್ದಾರೆ.


“ಅವರು ಅರಸರನ್ನು ಅಪಹಾಸ್ಯಮಾಡುವರು; ಅಧಿಪತಿಗಳನ್ನು ಪರಿಹಾಸ್ಯಕ್ಕೆ ಗುರಿಮಾಡುವರು. ಕೋಟೆಗಳನ್ನು ಧೂಳೀಪಟ ಮಾಡುವರು. ಮಣ್ಣುಗುಡ್ಡೆ ಹಾಕಿ ಆಕ್ರಮಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು