Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 2:1 - ಕನ್ನಡ ಸತ್ಯವೇದವು C.L. Bible (BSI)

1 ನಾಚಿಕೆ ಇಲ್ಲದ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾಚಿಕೆಗೇಡಿ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ, ಯೆಹೋವನ ಉಗ್ರಕೋಪವು ನಿಮ್ಮ ಮೇಲೆ ಬರುವುದಕ್ಕೆ ಮೊದಲೇ ಯೆಹೋವನ ಸಿಟ್ಟಿನ ದಿನವೂ ಉರಿದು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ, ನೀವೆಲ್ಲರೂ ಸೇರಿ ಬನ್ನಿರಿ, ಒಟ್ಟಾಗಿ ಕೂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾಚಿಕೆಗೇಡಿಯ ಜನಾಂಗದವರೇ, ತೀರ್ಪು ಫಲಿಸುವದರೊಳಗೆ ಯೆಹೋವನ ಉಗ್ರಕೋಪವು ನಿಮ್ಮ ಮೇಲೆ ಬರುವದಕ್ಕೆ ಮುಂಚೆ, ಯೆಹೋವನ ಸಿಟ್ಟಿನ ದಿನವು ನಿಮ್ಮನ್ನು ಮುಟ್ಟುವದಕ್ಕೆ ಮೊದಲು ಸೇರಿಬನ್ನಿರಿ, ಕೂಡಿಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾಚಿಕೆಗೆಟ್ಟವರೇ, ನಿಮ್ಮ ಜೀವಿತವನ್ನು ಬದಲಾಯಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾಚಿಕೆ ಇಲ್ಲದ ಜನಾಂಗದವರೇ, ಒಟ್ಟಾಗಿ ಕೂಡಿಕೊಳ್ಳಿರಿ, ನೀವು ಒಟ್ಟಾಗಿ ಕೂಡಿಕೊಳ್ಳಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 2:1
15 ತಿಳಿವುಗಳ ಹೋಲಿಕೆ  

ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ.


ಆಗ ಯೆಹೂದ್ಯರು ಸರ್ವೇಶ್ವರನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಕೂಡಿಬಂದರು.


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನ, ಇಸ್ರಯೇಲರು ಉಪವಾಸವಾಗಿದ್ದು ಗೋಣೀ ತಟ್ಟನ್ನು ಕಟ್ಟಿಕೊಂಡು, ತಲೆಯ ಮೇಲೆ ಮಣ್ಣುಸುರಿದುಕೊಂಡು, ನೆರೆದುಬಂದರು.


ತಮ್ಮ ತಮ್ಮ ಪಟ್ಟಣಗಲ್ಲಿ ವಾಸಿಸುತ್ತಿದ್ದ ಇಸ್ರಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ಒಟ್ಟಿಗೆ ಸೇರಿದರು. ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು.


ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಅವರಿಗೆ ಲಜ್ಜೆಯ ಗಂಧವೂ ಇಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದರು.


ಆದಕಾರಣವೇ ಹದಮಳೆಗೆ ಅಡ್ಡಿಯಾಯಿತು. ವಸಂತಕಾಲದ ಮಳೆ ಬರದೆಹೋಯಿತು. ಇನ್ನೂ ನೀನು ವೇಶ್ಯೆ ಮುಖದವಳು, ಲಜ್ಜೆಗೆಟ್ಟವಳು !


ಆದರೆ ಅದರ ಮಧ್ಯೆಯಿರುವ ಸರ್ವೇಶ್ವರ ನ್ಯಾಯಸ್ವರೂಪಿ, ಎಂದಿಗೂ ಅನ್ಯಾಯ ಮಾಡುವುದಿಲ್ಲ. ದಿನದಿನವೂ ತಪ್ಪದೆ ನ್ಯಾಯ ದೊರಕಿಸುತ್ತಾರೆ. ಅವರಿಗೆ ಗುಟ್ಟಾಗಿರುವುದು ಯಾವುದೂ ಇಲ್ಲ. ಅನ್ಯಾಯಮಾಡುವವನಿಗಾದರೋ ನಾಚಿಕೆ ಎಂಬುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು