Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 2:10 - ಕನ್ನಡ ಸತ್ಯವೇದವು C.L. Bible (BSI)

10 ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಜನರನ್ನು ದೂಷಿಸಿ ದರ್ಪದ ಮಾತುಗಳನ್ನು ಆಡಿದ್ದರಿಂದಲೆ ಈ ಪ್ರಾಂತ್ಯಗಳ ಗರ್ವಿಷ್ಠ ಜನರಿಗೆ ಶಿಕ್ಷೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಪ್ರಾಂತ್ಯಗಳವರು ಸೇನಾಧೀಶ್ವರನಾದ ಯೆಹೋವನ ಜನರನ್ನು ದೂಷಿಸಿ, ಅವರ ಮೇಲೆ ಉಬ್ಬಿಕೊಂಡು ಬಂದುದ್ದರಿಂದ ಅವರ ಅಹಂಕಾರದ ನಿಮಿತ್ತವೇ ಅವರಿಗೆ ಈ ಗತಿಯಾಗುವುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ಪ್ರಾಂತಗಳವರು ಸೇನಾಧೀಶ್ವರ ಯೆಹೋವನ ಜನರನ್ನು ದೂಷಿಸಿ ಅವರ ಮೇಲೆ ಉಬ್ಬಿಕೊಂಡು ಬಂದದರಿಂದ ಅವರ ಹೆಮ್ಮೆಯ ನಿವಿುತ್ತವೇ ಅವರಿಗೆ ಈ ಗತಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸರ್ವಶಕ್ತನಾದ ಯೆಹೋವನ ಜನರನ್ನು ಮೋವಾಬ್ಯರು ಮತ್ತು ಅಮ್ಮೋನ್ಯರು ಕ್ರೂರವಾಗಿ ಕಂಡು ಅವರನ್ನು ಪರಿಹಾಸ್ಯಮಾಡಿದ್ದರಿಂದಲೂ ಈ ಸಂಗತಿಗಳು ಅವರಲ್ಲಿ ನೆರವೇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಸೇನಾಧೀಶ್ವರ ಯೆಹೋವ ದೇವರ ಜನರನ್ನು ಅವಮಾನಿಸಿ ಮತ್ತು ಅಪಹಾಸ್ಯ ಮಾಡಿದ್ದರಿಂದಲೇ ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 2:10
18 ತಿಳಿವುಗಳ ಹೋಲಿಕೆ  

ಯೆಹೂದ ಜನತೆ ಪೇಳ್ವರವರಿಗೆ : “ನಮ್ಮ ಕಿವಿಗೆ ಬಿದ್ದಿದೆ ಮೋವಾಬ್ಯರ ಮದ, ತಿಳಿದಿದೆ ನಮಗೆ ಅವರ ದುರಹಂಕಾರ, ಅವರ ಒಣ ಡಂಭಾಚಾರ, ಗರ್ವೋದ್ರೇಕ".


ಮೋವಾಬ್ಯರಿಗೆ ಬಹಳ ಸೊಕ್ಕೇರಿದೆ! ಅವರ ಹೆಮ್ಮೆಯ ಸುದ್ದಿ, ಡಂಭಾಚಾರ, ಅಹಂಕಾರ, ಗರ್ವ, ಸ್ವಪ್ರತಿಷ್ಠೆ ಇವುಗಳ ಸಮಾಚಾರ ನಮ್ಮ ಕಿವಿಗೆ ಬಿದ್ದಿದೆ. -


“ಮೋವಾಬ್ಯರು ಮತ್ತು ಅಮ್ಮೋನ್ಯರು ಅಹಂಕಾರದಿಂದ ನನ್ನ ಜನರ ವಿರುದ್ಧ ಆಡುವ ಚುಚ್ಚುಮಾತುಗಳು ನನ್ನ ಕಿವಿಗೆ ಬಿದ್ದಿವೆ. ನನ್ನ ಜನರ ನಾಡನ್ನು ಸ್ವಾಧೀನಪಡಿಸಿಕೊಳ್ಳುವುದಾಗಿ ಅವರು ಕೊಚ್ಚಿಕೊಳ್ಳುತ್ತಿದ್ದಾರೆ.


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ನಿನ್ನ ದುರಹಂಕಾರ ನಿನ್ನನ್ನು ವಂಚಿಸಿದೆ.” ‘ಉನ್ನತಸ್ಥಾನದಲ್ಲಿ ವಾಸವಾಗಿದ್ದೇನೆ; ಬಂಡೆಗಳ ಬಿರುಕುಗಳಲ್ಲಿ ಭದ್ರವಾಗಿದ್ದೇನೆ; ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು?’ ಎನ್ನುತ್ತಿರುವೆ.


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯೋ?


ಆಕೆಯ ನೆರಿಗೆಯೂ ಹೊಲಸಾಗಿ ಮುಂದಿನ ಗತಿ ತೋಚದಂತಾಗಿ ಸಂತೈಸುವವರೇ ಇಲ್ಲದವಳಾಗಿ ಬಿದ್ದಿರುವಳಲ್ಲಾ ಈ ಭೀಕರ ಸ್ಥಿತಿಯಲ್ಲಿ ! “ಹೇ ಸರ್ವೇಶ್ವರಾ, ನೋಡು ನನ್ನ ಸಂಕಟವನು ಹೆಚ್ಚಳಪಡುತ್ತಿರುವನಲ್ಲಾ ಶತ್ರುವಾದವನು” ಎಂದು ಮೊರೆಯಿಡುತ್ತಾಳೆ ಕೂಗಿ.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಒದೆದು, ಇಸ್ರಯೇಲ್ ನಾಡನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದಕ್ಕೆ ಬಂದ ಗತಿಗೆ ಹಿಗ್ಗಿಕೊಂಡೆ.


ಅವರಿಗಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ I ಅವರಿಗಾಗಿ ಅರಸರನ್ನಾತ ಗದರಿಸದೆ ಬಿಡಲಿಲ್ಲ II


ಸರ್ವೇಶ್ವರ ಸ್ವಜನರಾದ ಇಸ್ರಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ : “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. (ಅವರ ಮಧ್ಯೆಯಿಂದ ಕಿತ್ತುಬಿಡುವೆನು ಯೆಹೂದ ವಂಶವನ್ನು).


‘ನಾವು ಶೂರರು, ಯುದ್ಧ ಪ್ರವೀಣರು, ಪರಾಕ್ರಮಿಗಳು’ ಎಂದು ನೀವು ಹೇಳುವುದೆಂತು?


ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ ನೀನು ತಟಸ್ಥನಾಗಿ ನೋಡುತ್ತಾ ನಿಂತಿದ್ದೆ. ಪರಕೀಯರು ಆತನ ಪುರದ್ವಾರಗಳನ್ನು ಪ್ರವೇಶಿಸಿ ಜೆರುಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಂದು ನೀನೂ ಅವರಂತೆ ಇದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು