Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 2:13 - ಕನ್ನಡ ಸತ್ಯವೇದವು C.L. Bible (BSI)

13 ಅಸ್ಸೀರಿಯವನ್ನು ಸರ್ವೇಶ್ವರ ತಮ್ಮ ಭುಜಬಲದಿಂದ ಧ್ವಂಸಮಾಡುವರು; ನಿನೆವೆ ಪಟ್ಟಣವನ್ನು ಹಾಳುಬಿದ್ದ ಅವಶೇಷವಾಗಿ, ನೀರಿಲ್ಲದ ಮರುಭೂಮಿಯಾಗಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಉತ್ತರಕ್ಕೆ ಕೈಚಾಚಿ ಅಶ್ಶೂರವನ್ನು ಧ್ವಂಸ ಮಾಡುವನು; ನಿನವೆಯನ್ನು ಹಾಳುಮಾಡಿ ನೀರಿಲ್ಲದ ಮರುಭೂಮಿಯಂತೆ ಒಣಗಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಬಡಗಲಿಗೆ ಕೈಚಾಚಿ ಅಶ್ಶೂರವನ್ನು ಧ್ವಂಸಪಡಿಸುವನು; ನಿನೆವೆಯನ್ನು ಹಾಳುಮಾಡಿ ಮರುಭೂವಿುಯಂತೆ ಒಣಗಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರು ಆಮೇಲೆ ಉತ್ತರಕ್ಕೆ ಮುಖಮಾಡಿ ಅಶ್ಶೂರವನ್ನು ಶಿಕ್ಷಿಸುವನು. ಆತನು ನಿನೆವೆ ಪಟ್ಟಣವನ್ನು ಶಿಕ್ಷಿಸಿದಾಗ ಅದು ನಿರ್ಜನವಾದ ಮರುಭೂಮಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ, ಅಸ್ಸೀರಿಯರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಮರುಭೂಮಿಯಂತೆ ಒಣಗಿದ್ದಾಗಿಯೂ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 2:13
19 ತಿಳಿವುಗಳ ಹೋಲಿಕೆ  

ನಿನ್ನ ನೋಡುವವರು ನಿನ್ನಿಂದ ದೂರ ಓಡುವರು “ನಿನೆವೆ ಹಾಳುಬಿದ್ದಿದೆ, ಅದಕ್ಕೆ ಗೋಳಿಡುವರಾರು? ಅದನ್ನು ಸಂತೈಸುವವರು ನಮಗೆಲ್ಲಿ ಸಿಕ್ಕಿಯಾರು?, ಎಂದುಕೊಳ್ಳುವರು.”


ನಿನೆವೆಯನ್ನು ಕುರಿತ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಪ್ರವಾದಿಗೆ ಆದ ದೈವದರ್ಶನವಿದು:


ಆದಕಾರಣ, ಒಡೆಯರಾದ ಸೇನಾಧೀಶ್ವರ ಸರ್ವೇಶ್ವರ ಅಸ್ಸೀರಿಯಾದ ಕೊಬ್ಬಿದ ಯೋಧರಿಗೆ ಕ್ಷಯರೋಗವನ್ನು ಬರಮಾಡುವರು. ಅವರ ದೇಹಕ್ಕೆ ಬೆಂಕಿಯಂತೆ ಉರಿಯುವ ಜ್ವರವನ್ನು ಉಂಟುಮಾಡುವರು.


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ನೀನು ಇದ್ದಲ್ಲಿಯೇ ಬೆಂಕಿ ನಿನ್ನನ್ನು ಕಬಳಿಸುವುದು. ಕತ್ತಿಯು ನಿನ್ನನ್ನು ಕಡಿದುಬಿಡುವುದು. ಮಿಡತೆಗಳು ಬೆಳೆಯನ್ನು ನುಂಗುವಂತೆ ಶತ್ರುಗಳು ನಿನ್ನನ್ನು ನುಂಗಿಬಿಡುವರು. “ನಿನ್ನ ಜನರು ಮಿಡತೆಗಳಂತೆ ಅಸಂಖ್ಯಾತರಾಗಲಿ! ಗುಂಪುಮಿಡತೆಗಳಂತೆ ಅಪರಿಮಿತರಾಗಲಿ!


ಅಸ್ಸೀರಿಯದವರು ಇವರ ಶಸ್ತ್ರಾಸ್ತ್ರಗಳಿಗೆ ತುತ್ತಾಗುವರು. ನಿಮ್ರೋದ್ ಸೀಮೆಯ ಪ್ರವೇಶದ್ವಾರಗಳು ಧ್ವಂಸವಾಗುವುವು. ಅಸ್ಸೀರಿಯದವರು ನಮ್ಮ ನಾಡಿಗೆ ನುಗ್ಗಿ ನಮ್ಮ ಕೋಟೆಯನ್ನು ಆಕ್ರಮಿಸುವಾಗ, ಆ ಶಾಂತಿದಾತನು ನಮ್ಮನ್ನು ರಕ್ಷಿಸುವನು.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.


ವಿಶ್ವದ ಬಗ್ಗೆ ನಾ ಮಾಡಿರುವ ಯೋಜನೆಯಿದು, ರಾಷ್ಟ್ರಗಳನ್ನು ದಂಡಿಸಲೆತ್ತಿರುವ ಕೈಯಿದು".


ಆದ್ದರಿಂದ ಅಸ್ಸೀರಿಯರ ಅರಸನಾದ ಸನ್ಹೇರೀಬನು ಹಿಂದಿರುಗಿದನು.


ಆಗ ಹಾಜೋರು ಸದಾ ಹಾಳುಬಿದ್ದು ಮರಿಗಳಿಗೆ ಬೀಡಾಗುವುದು. ಅಲ್ಲಿ ಯಾರೂ ವಾಸಿಸರು, ಯಾವ ನರಪ್ರಾಣಿಯೂ ತಂಗದು. ಇದು ಸರ್ವೇಶ್ವರನಾದ ನನ್ನ ನುಡಿ.”


“ನಿನೆವೆ ಮಹಾನಗರದ ನಿವಾಸಿಗಳು ಎಷ್ಟು ದುಷ್ಟರೆಂಬುದು ನನಗೆ ತಿಳಿದುಬಂದಿದೆ. ನೀನು ಅಲ್ಲಿಗೆ ಹೋಗು ಅವರನ್ನು ಕಟುವಾಗಿ ಖಂಡಿಸು.”


“ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿಗಳಿಗೆ ಸಾರು,” ಎಂದಿತು.


“ಜುದೇಯ ನಾಡನ್ನೂ ಜೆರುಸಲೇಮಿನ ನಿವಾಸಿಗಳೆಲ್ಲರನ್ನೂ ಕೈಯೆತ್ತಿ ಸದೆಬಡಿಯುವೆನು; ಬಾಳನ ಪೂಜೆಪುರಸ್ಕಾರಗಳ ಗುರುತೂ ಅಲ್ಲಿ ಇಲ್ಲದಂತೆ ಮಾಡುವೆನು. ಅವನ ಪೂಜಾರಿಗಳನ್ನು ನಿರ್ನಾಮಗೊಳಿಸುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು