Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 2:15 - ಕನ್ನಡ ಸತ್ಯವೇದವು C.L. Bible (BSI)

15 “ಇರುವ ನಗರ ನಾನೇ, ನನ್ನ ಹೊರತು ಇನ್ನಾರೂ ಇಲ್ಲ” ಎಂದು ಕೊಚ್ಚಿಕೊಂಡು ಯಾವ ಚಿಂತೆಯೂ ಇಲ್ಲದೆ, ನೆಮ್ಮದಿಯಿಂದ ಇದ್ದ ನಿನೆವೆಯ ಗತಿ ನೋಡಿ, ಎಂಥ ಹಾಳುಬಿದ್ದ ಊರಾಗಿದೆ! ಕಾಡುಮೃಗಗಳ ಬೀಡಾಗಿದೆ! ಹಾದುಹೋಗುವವರೆಲ್ಲ ಸಿಳ್ಳುಹಾಕಿ ಕೈತೋರಿಸಿ ಪರಿಹಾಸ್ಯಮಾಡುವಷ್ಟು ಕೀಳಾಗಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈ ನಿನೆವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ - ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಹಕ್ಕೆಯಾಗಿದೆ! ಹಾದುಹೋಗುವವರೆಲ್ಲರೂ ಸಿಳ್ಳುಹಾಕಿ ಕೈಯಾಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನಿಶ್ಚಿಂತೆಯಾಗಿ ವಾಸಿಸಿದಂಥ ಉಲ್ಲಾಸದ ಪಟ್ಟಣ ನಾನೇ ಹೊರತು ಮತ್ತೊಂದಿಲ್ಲಾ,” ಎಂದು ತನ್ನೊಳಗೆ ಎಂದುಕೊಂಡಂಥ ಸುಭದ್ರ ನಿನೆವೆ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದರಲ್ಲಿ ಹಾದುಹೋಗುವವರೆಲ್ಲರೂ ನಿಂದಿಸಿ ಅಪಹಾಸ್ಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 2:15
27 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.


ನಿನ್ನ ಗಾಯಕ್ಕೆ ಮದ್ದಿಲ್ಲ. ನಿನಗೆ ಬಿದ್ದಿರುವ ಪೆಟ್ಟು ಪ್ರಾಣನಾಶಕ. ನಿನ್ನ ವಿನಾಶದ ಸಮಾಚಾರವನ್ನು ಕೇಳುವವರೆಲ್ಲ ಚಪ್ಪಾಳೆ ಹಾಕುತ್ತಾರೆ. ಏಕೆಂದರೆ ನೀನು ಮಾಡಿರುವ ಕೇಡಿಗೆ ಕೊನೆಯಿಲ್ಲ. ಅದರಿಂದ ತಪ್ಪಿಸಿಕೊಂಡವರು ಯಾರೂ ಇಲ್ಲ.”


ಊರಿಗೆ ಊರೇ ಆರ್ಭಟಿಸುತ್ತಿರುವಂತಿದೆ ! ಯುದ್ಧದಲ್ಲಿ ಸತ್ತ ನಿಮ್ಮ ಯೋಧರೆಲ್ಲ ಕಾದಾಟದಿಂದ ಮಡಿದವರಲ್ಲ.


ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ!


ಹಾದುಹೋಗುವವರೆಲ್ಲ ಕೈ ತಟ್ಟುತ್ತಾರಲ್ಲಾ ನಿನ್ನನ್ನು ನೋಡಿ ಜೆರುಸಲೇಮ್ ನಗರಿಯಾದ ನಿನ್ನನ್ನು ಗುರುತಿಸಿ ! “ಆಹಾ, ನೀನೇನೋ ಸರ್ವಾಂಗ ಸುಂದರಿ, ವಿಶ್ವಾನಂದದಾಯಕಿ !” ಎಂದು ಮೂದಲಿಸುತ್ತಾರಲ್ಲಾ ತಲೆಯಾಡಿಸಿ, ಸಿಳ್ಳುಹಾಕಿ !


ಅಯ್ಯೋ, ಅಂದು ಜನಭರಿತವಾಗಿದ್ದ ನಗರಿ ಇಂದು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ ! ರಾಷ್ಟ್ರಗಳಲ್ಲೆಲ್ಲಾ ಅತಿ ಶ್ರೇಷ್ಠಳಾಗಿದ್ದವಳು ವಿಧವೆ ಆಗಿಬಿಟ್ಟಳಲ್ಲಾ ! ಪ್ರಾಂತ್ಯಗಳಲ್ಲೆಲ್ಲಾ ಬಹಳ ಪ್ರವೀಣಳಾಗಿದ್ದವಳು ದಾಸಿಯಂತೆ ಆಗಿಬಿಟ್ಟಿರುವಳಲ್ಲಾ !


ಈ ನಗರವನ್ನು ಭಯಾನಕ ಹಾಗೂ ಹಾಸ್ಯಾಸ್ಪದ ಸ್ಥಳವನ್ನಾಗಿಸುವೆನು. ಹಾದುಹೋಗುವವರೆಲ್ಲರು ಅದಕ್ಕೆ ಒದಗಿದ ವಿಪತ್ತನ್ನು ಕಂಡು ನಿಬ್ಬೆರಗಾಗಿ ಹೀಗಳೆಯುವರು.


ಪಕ್ಕದಲ್ಲಿ ಹಾದುಹೋಗುತ್ತಿದ್ದ ಜನರು ತಲೆಯಾಡಿಸುತ್ತಾ


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ನಿನ್ನ ನೋಡಿ ಸಿಳ್ಳುಹಾಕುವರು ರಾಷ್ಟ್ರಗಳ ವರ್ತಕರು. ನಾಶವಾದೆ ನೀನು ಪೂರ್ತಿಯಾಗಿ, ಇಲ್ಲವಾದೆ ಇನ್ನೆಂದಿಗು.”


ಅಯ್ಯಯ್ಯೋ, ಸ್ವಾಮಿಯೆ ಸಿಟ್ಟುಗೊಂಡಿರುವನಲ್ಲಾ ! ಸಿಯೋನ್ ಕುವರಿಗೆ ಕಾರ್ಮೋಡ ಕವಿದಂತೆ ಮಾಡಿರುವನಲ್ಲಾ ! ಇಸ್ರಯೇಲಿನ ವೈಭವವನ್ನು ಆಗಸದಿಂದ ನೆಲಕ್ಕೆಸೆದುಬಿಟ್ಟಿರುವನಲ್ಲಾ ! ಆ ಸಿಟ್ಟಿನ ದಿನದಂದು ತನ್ನ ಪಾದಪೀಠವಾದ ದೇವಾಲಯವನ್ನೂ ನೆನೆಯದೆಹೋದನಲ್ಲಾ !


ಸುಖಜೀವಿಗಳಾದ ಮಹಿಳೆಯರೇ, ಏಳಿ ನನ್ನ ಮಾತನ್ನು ಕೇಳಿ. ನಿಶ್ಚಿಂತೆಯಿಂದಿರುವ ಯುವತಿಯರೇ, ನನ್ನ ಧ್ವನಿಗೆ ಕಿವಿಗೊಡಿ.


ಜನರು ಹಾಸ್ಯಮಾಡುತ್ತಾರೆ ಚಪ್ಪಾಳೆ ತಟ್ಟಿ ಅವನನ್ನು ಹೊರಗಟ್ಟುತ್ತಾರೆ ಛೀಮಾರಿ ಹಾಕಿ.”


ನನ್ನ ಸ್ಥಿತಿಯಲ್ಲಿ ನೀವಿದ್ದಿದ್ದರೆ ನಾನೂ ಮಾತಾಡಬಹುದಿತ್ತು ನಿಮ್ಮಂತೆ. ನಿಮಗೆ ವಿರುದ್ಧ ನಾನೂ ಮಾತೂ ಬೆಳೆಸಬಹುದಿತ್ತು ನಿಮ್ಮ ವಿಷಯದಲ್ಲಿ ನಾನೂ ತಲೆಯಾಡಿಸಬಹುದಿತ್ತು.


ಸುಖವಾಗಿರುವವರೇ, ಗಡಗಡನೆ ನಡುಗಿರಿ. ನಿಶ್ಚಿಂತರಾಗಿರುವವರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಗಳನ್ನು ಕಿತ್ತುಹಾಕಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.


ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು; ಓಫೆಲ್ ಗುಡ್ಡವು, ಕೀಸ್ ಕೋವರವು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.


ಆದ್ದರಿಂದ ನಾಡನ್ನು ಭಯಾನಕವಾಗಿಸುವರು ಹಾದು ಹೋಗುವವರೆಲ್ಲ ಬೆಬ್ಬೆರಗಾಗಿ ತಲೆದೂಗುವರು, ಸಿಳ್ಳು ಹಾಕಿ ಅದನ್ನು ಪರಿಹಾಸ್ಯ ಮಾಡುವರು.


ಕೇಡನು ನೀ ಮಾಡಿದೆ ಭಯಪಡದೆ ನೋಡರಾರೂ ಎಂದುಕೊಂಡಿದ್ದೆ, ನೀನು ಜ್ಞಾನಿ ವಿವೇಕಿಯೆಂದು ತಿಳಿದುಕೊಂಡೇ ಮರುಳಾದೆ; ‘ಏಕೈಕಳು ನಾನೇ, ಇನ್ನಾರೂ ಇಲ್ಲ’ ಎಂದುಕೊಂಡೆ.


ಸರ್ವೇಶ್ವರನ ಕೋಪದ ನಿಮಿತ್ತ ಅದು ನಿರ್ಜನವಾಗುವುದು. ಪೂರ್ತಿಯಾಗಿ ಅದು ಪಾಳುಬೀಳುವುದು. ಬಾಬಿಲೋನನ್ನು ಹಾದುಹೋಗುವವರೆಲ್ಲರು ಅದಕ್ಕೆ ಬಂದೊದಗಿದ ವಿಪತ್ತುಗಳನ್ನು ಕಂಡು ನಿಬ್ಬೆರಗಾಗುವರು, ಸಿಳ್ಳುಹಾಕಿ ಮೂದಲಿಸುವರು.


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


ಅವರು ಕ್ರೂರಿಗಳು, ಭಯಂಕರರು. ತಮ್ಮದೇ ಆದ ನ್ಯಾಯನೀತಿಯನ್ನು ರೂಪಿಸಿಕೊಳ್ಳುವಂಥವರು; ತಮ್ಮನ್ನು ತಾವೇ ಗೌರವಿಸಿಕೊಳ್ಳುವ ಅಹಂಭಾವಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು